ಬಾನು ಮುಷ್ತಾಕ್‌-ದೀಪಾ ಭಾಸ್ತಿ ಜೋಡಿಗೆ ಬುಕರ್‌ ಪ್ರಶಸ್ತಿ

ಕನ್ನಡದ ಖ್ಯಾತ ಲೇಖಕಿ ಬಾನು ಮುಷ್ತಾಕ್‌ ಅವರ ಕಥಾಸಂಕಲನ ‘ಹೃದಯ ದೀಪ’ಕ್ಕೆ  2025ರ ಅಂತಾರಾಷ್ಟ್ರೀಯ ಬುಕರ್‌ ಪ್ರಶಸ್ತಿ ಲಭಿಸಿದೆ.

ಕನ್ನಡ ಸಾಹಿತ್ಯದ ಇತಿಹಾಸದಲ್ಲಿ ಒಂದು ಐತಿಹಾಸಿಕ ಕ್ಷಣ! ಕನ್ನಡದ ಖ್ಯಾತ ಲೇಖಕಿ ಬಾನು ಮುಷ್ತಾಕ್‌ ಅವರ ಕಥಾಸಂಕಲನ ‘ಹೃದಯ ದೀಪ’ಕ್ಕೆ  2025ರ ಅಂತಾರಾಷ್ಟ್ರೀಯ ಬುಕರ್‌ ಪ್ರಶಸ್ತಿ ಲಭಿಸಿದೆ. ಈ ಕೃತಿಯನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಲೇಖಕಿ ದೀಪಾ ಭಾಸ್ತಿ ಅವರ ಕೊಡುಗೆಯೂ ಈ ಗೆಲುವಿನಲ್ಲಿ ಪ್ರಮುಖವಾಗಿದೆ.  

ಮೇ 20, 2025ರಂದು ಲಂಡನ್‌ನ ಟೇಟ್‌ ಮಾಡರ್ನ್‌ನಲ್ಲಿ ನಡೆದ ಸಮಾರಂಭದಲ್ಲಿ ಬಾನು ಮುಷ್ತಾಕ್‌ ಮತ್ತು ದೀಪಾ ಭಾಸ್ತಿ ಈ ಪ್ರಶಸ್ತಿಯನ್ನು ಸ್ವೀಕರಿಸಿದರು. ಪ್ರಶಸ್ತಿ ಸ್ವೀಕರಿಸಿದ ಬಾನು ಅವರು ಈ ಗೆಲುವನ್ನು  ವೈವಿಧ್ಯತೆಯ ವಿಜಯವೆಂದು ಬಣ್ಣಿಸಿದರು. ಈ ಕೃತಿಯಲ್ಲಿ ‘ಹೃದಯ ದೀಪ’ದಲ್ಲಿ ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕು ಈ ಕತೆಗಳಲ್ಲಿ ಅನಾವರಣಗೊಂಡಿದೆ. ಹಾಗಾಗಿ ತೀರ್ಪುಗಾರರ ಮೆಚ್ಚುಗೆಗೆ ‘ಹೃದಯ ದೀಪʼ ಕೃತಿ ಪಾತ್ರವಾಯಿತು.

ಈ ವಾರ್ಷಿಕ ಪ್ರಶಸ್ತಿಯು ಮೇ 2024 ರಿಂದ ಏಪ್ರಿಲ್‌ 2025ರವರೆಗೆ ಯುಕೆ ಅಥವಾ ಐರ್ಲೆಂಡ್‌ನಲ್ಲಿ ಇಂಗ್ಲಿಷ್‌ಗೆ ಭಾಷಾಂತರಗೊಂಡ ಉನ್ನತ ಕಾದಂಬರಿಗಳು ಅಥವಾ ಕತೆಗಳ ಸಂಕಲನಗಳಿಗೆ ನೀಡಲಾಗುತ್ತದೆ. ‘ಹೃದಯ ದೀಪ’ ಕೃತಿಯು ಕನ್ನಡದ ಸಾಹಿತ್ಯದ ಶಕ್ತಿಯನ್ನು ವಿಶ್ವಕ್ಕೆ ತೋರಿಸಿತು. ಬಾನು ಮುಷ್ತಾಕ್‌ ತಮ್ಮ ಕೃತಿಯ ಬಗ್ಗೆ ಮಾತನಾಡುತ್ತಾ, ‘ಯಾವ ಕಥೆಯೂ ಸಣ್ಣದಲ್ಲ, ಅನುಭವದ ವಸ್ತ್ರದಲ್ಲಿನ ಪ್ರತಿ ಎಳೆಯೂ ಇಡೀ ಕಥೆಯ ತೂಕವನ್ನು ಹೊಂದಿರುತ್ತದೆ ಎಂಬ ನಂಬಿಕೆಯಿಂದಲೇ ಈ ಪುಸ್ತಕ ರೂಪುಗೊಂಡಿತು’ ಎಂದು ಹೇಳಿದ್ದಾರೆ. ಅನುವಾದಕಿ ದೀಪಾ ಭಸ್ತಿ, “ನನ್ನ ಸುಂದರ ಭಾಷೆಗೆ ಇದೊಂದು ಸೊಗಸಾದ ಗೆಲುವು” ಎಂದು ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

  ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಾಧನೆಯನ್ನು ಕೊಂಡಾಡಿದರು. “ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್‌ ಅವರಿಗೆ ಅಂತಾರಾಷ್ಟ್ರೀಯ ಬುಕರ್‌ ಪ್ರಶಸ್ತಿ ಗೆದ್ದಿದ್ದಕ್ಕೆ ಹೃದಯಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗರು ಮತ್ತು ಕರ್ನಾಟಕವನ್ನು ಆಚರಿಸುವ ಸಮಯ” ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದರು.

 ಲೋಕಸಭಾ ಸದಸ್ಯ ಮತ್ತು ಲೇಖಕ ಶಶಿ ಥರೂರ್‌ ಕೂಡ ಮುಷ್ತಾಕ್‌ ಅವರನ್ನು ಅಭಿನಂದಿಸಿದರು. “ಭಾರತೀಯ ಬರವಣಿಗೆಗೆ ಮತ್ತೊಂದು ಜಯ, ವೈವಿಧ್ಯತೆಯ ಆಚರಣೆ ಮತ್ತು ‘ಯಾವ ಕತೆಯೂ ಚಿಕ್ಕದಲ್ಲ’ ಎಂಬ ಲೇಖಕಿಯ ನಂಬಿಕೆಯೇ ಗೆಲುವು” ಎಂದು ಅವರು ತಿಳಿಸಿದರು.

ಈ ಗೆಲುವು ಕನ್ನಡ ಸಾಹಿತ್ಯಕ್ಕೆ ಜಾಗತಿಕ ಮಾನ್ಯತೆಯನ್ನು ತಂದಿದ್ದು, ಕನ್ನಡಿಗರೆಲ್ಲರಿಗೂ ಹೆಮ್ಮೆಯ ಕ್ಷಣವಾಗಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »