ಕಾಂಗ್ರೆಸ್‌ ಸರ್ಕಾರದ ಭೂ ಗ್ಯಾರಂಟಿ: 1.11 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ

ಕಾಂಗ್ರೆಸ್‌ ಸರ್ಕಾರವು ಎರಡು ವರ್ಷ ಪೂರೈಸಿದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸರ್ಕಾರದ ಆರನೇ ಗ್ಯಾರಂಟಿಯಾದ ‘ಭೂ ಗ್ಯಾರಂಟಿ’ ಯೋಜನೆಯನ್ನು ಜನರಿಗೆ ಹಕ್ಕು ಪತ್ರ ನೀಡುವುದರ ಮೂಲಕ ಅಧಿಕೃತವಾಗಿ ಘೋಷಿಸಲಾಗಿದೆ.

ಕಾಂಗ್ರೆಸ್‌ ಸರ್ಕಾರದ ಎರಡು ವರ್ಷಗಳ ಸಂಭ್ರಮಾಚರಣೆಯನ್ನು‘ಪ್ರಗತಿಯತ್ತ ಕರ್ನಾಟಕ-ಸಮರ್ಪಣೆ ಸಂಕಲ್ಪ’ ಘೋಷವಾಕ್ಯದಡಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಪುನೀತ್ ರಾಜ್‌ಕುಮಾರ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಸರಕಾರದ  ‘ಭೂ ಗ್ಯಾರಂಟಿ’ ಯೋಜನೆಯ ಘೋಷಿಸಿದರು.

  ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಲಕ್ಷಾಂತರ ಜನರ ಸಮ್ಮುಖದಲ್ಲಿ, ಹಟ್ಟಿ, ಹಾಡಿ, ಕೇರಿ, ತಾಂಡಾ ಮತ್ತು ಗ್ರಾಮೀಣ ಪ್ರದೇಶಗಳ 40 ಕುಟುಂಬಗಳಿಗೆ ಸಾಂಕೇತಿಕವಾಗಿ ಭೂ ಹಕ್ಕುಪತ್ರಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು  ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿತರಿಸಿ ಈ ಯೋಜನೆಗೆ ವಿದ್ಯುಕ್ತ ಚಾಲನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಭಾಷಣದಲ್ಲಿ, “2015-16ರಲ್ಲಿ ಭೂ ಹಕ್ಕುಪತ್ರ ವಿತರಣೆಗೆ ಸಮಿತಿಯೊಂದನ್ನು ರಚಿಸಿದ್ದೆ. ದೇವರಾಜ ಅರಸು ಅವರು ‘ಉಳುವವನೇ ಹೊಲದೊಡೆಯ’ ಎಂಬ ಕಾಯ್ದೆಯನ್ನು ಜಾರಿಗೆ ತಂದಂತೆ, ‘ವಾಸಿಸುವವನೇ ಮನೆಯೊಡೆಯ’ ಎಂಬ ಧ್ಯೇಯದೊಂದಿಗೆ ಕಂದಾಯ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೆ. ಇದರ ಫಲವಾಗಿ ಇಂದು 1.11 ಲಕ್ಷ ಕುಟುಂಬಗಳಿಗೆ ಭೂ ಹಕ್ಕುಪತ್ರಗಳನ್ನು ನೀಡಲಾಗಿದೆ. ಇನ್ನುಳಿದ 50,000 ಕುಟುಂಬಗಳಿಗೆ ಆರು ತಿಂಗಳೊಳಗೆ ಹಕ್ಕುಪತ್ರ ವಿತರಿಸಲಾಗುವುದು” ಎಂದರು. ಈ ಯೋಜನೆಯು ಗ್ರಾಮೀಣ ಜನರಿಗೆ ತಮ್ಮ ವಾಸಸ್ಥಳದ ಮೇಲೆ ಕಾನೂನು  ಒದಗಿಸುವ ಗುರಿಯನ್ನು ಹೊಂದಿದೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ನಗರ ಪ್ರದೇಶದ ನಿವಾಸಿಗಳಿಗೂ ಭೂ ಹಕ್ಕುಪತ್ರ ವಿತರಣೆಯ ಮೂಲಕ ಏಳನೇ ಗ್ಯಾರಂಟಿ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸುತ್ತೇವೆ. ಜನರ ಖಾತೆಗಳನ್ನು ಸರಿಪಡಿಸಿ, ಜಾಗದ ದಾಖಲೆಗಳನ್ನು ಸಿದ್ಧಪಡಿಸಿ, ವಾಸಸ್ಥಳಗಳನ್ನು ಅಧಿಕೃತಗೊಳಿಸುವ ಕಾರ್ಯವನ್ನು ಈಗಾಗಲೇ ಆರಂಭಿಸಿದ್ದೇವೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿರುವವರೆಗೆ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ” ಎಂದು ದೃಢವಾಗಿ ತಿಳಿಸಿದರು.  

ಅಲ್ಲದೇ ಈ ಸಂದರ್ಭದಲ್ಲಿ, ಇಂದಿರಾ ಗಾಂಧಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು ಮತ್ತು ಸರ್ಕಾರದ ಸಾಧನೆಗಳನ್ನು ವಿವರಿಸುವ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನದವರೆಗೆ ನಡೆದ ಸಮಾವೇಶದಲ್ಲಿ ನಿರಂತರ ಮಳೆ ಸುರಿತವಿದ್ದರೂ, “ಮಳೆಯು ಪ್ರಗತಿಯ ಸಂಕೇತ” ಎಂದು ಕಾಂಗ್ರೆಸ್ ನಾಯಕರು ಹೇಳಿ ಸಮಾವೇಶ ಮುಂದುವರೆಸಿದರು.

Share:

ಮತ್ತಷ್ಟು ಸುದ್ದಿ

ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮ

ಅಲೆದಾಟ ಮುಕ್ತ ಆಡಳಿತದತ್ತ ಮೇಲುಕೋಟೆ ಮನೆ ಬಾಗಿಲಿಗೇ ಬಂದ ‘ಸರ್ಕಾರಿ ಸೇವೆ’ ಕಾರ್ಯಕ್ರಮ  ತಂತ್ರಜ್ಞಾನದ ಅರಿವನ್ನು ಆಡಳಿತ ಯಂತ್ರಕ್ಕೆ ವರ್ಗಾಯಿಸಿದ

ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಲು ಮನವಿ

ಕಾಂಗ್ರೆಸ್‌ ಹೈಕಮಾಂಡ್‌ಗೆ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ಒತ್ತಾಯ ಮೈಸೂರು: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರಿಗೆ

ಮುಂದೆ ಓದಿ »

ಬೆಂಗಳೂರಿನಲ್ಲಿ ಮೇ 25 ರಂದು 3ನೇ ಕರ್ನಾಟಕ ಸಂಘಟಕರ ಸಮಾವೇಶ

ಸಾಂಸ್ಕೃತಿಕ ನೀತಿ ಜಾರಿ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಆಗ್ರಹಿಸಿ ರಂಗಕರ್ಮಿಗಳು ಹಾಗೂ ಸಾಂಸ್ಕೃತಿಕ ಸಂಘಟಕರ ಬೃಹತ್‌ ಸಮಾಲೋಚನೆ ಬೆಂಗಳೂರು: ಕರ್ನಾಟಕ

ಮುಂದೆ ಓದಿ »

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »