ನಿರ್ಮಲಾ ಸೀತಾರಾಮನ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್

ದಿಲ್ಲಿಯ ರೌಸ್ ಅವೆನ್ಯೂ ಕೋರ್ಟ್ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ದದ ಮಾನನಷ್ಟ ಮೊಕದ್ದಮೆ ದೂರಿಗೆ  ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿದೆ. ಆಮ್ ಆದ್ಮಿ ಪಕ್ಷದ ನಾಯಕ ಮತ್ತು ಮಾಜಿ ಶಾಸಕ ಸೋಮನಾಥ್ ಭಾರತಿ ಅವರ ಪತ್ನಿ ಲಿಪಿಕಾ ಮಿತ್ರಾ ಈ ದೂರನ್ನು ನೀಡಿದ್ದಾರೆ.
Committee formed to solve pension problem: Nirmala Sitharaman

ನವದೆಹಲಿ : ದಿಲ್ಲಿಯ ರೌಸ್ ಅವೆನ್ಯೂ ಕೋರ್ಟ್ ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಮಾನನಷ್ಟ ಮೊಕದ್ದಮೆ ದೂರಿಗೆ  ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿದೆ. ಆಮ್ ಆದ್ಮಿ ಪಕ್ಷದ (AAP) ನಾಯಕ ಮತ್ತು ಮಾಜಿ ಶಾಸಕ ಸೋಮನಾಥ್ ಭಾರತಿ ಅವರ ಪತ್ನಿ ಲಿಪಿಕಾ ಮಿತ್ರಾ ಈ ದೂರನ್ನು ನೀಡಿದ್ದಾರೆ. 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸೀತಾರಾಮನ್ ನೀಡಿದ ಕೆಲವು ಹೇಳಿಕೆಗಳು ತಮ್ಮ ಪತಿಯ ಖ್ಯಾತಿಗೆ ಧಕ್ಕೆ ತಂದಿವೆ ಎಂದು ಲಿಪಿಕಾ ಆರೋಪಿಸಿದ್ದಾರೆ. ಈ ಪ್ರಕರಣದ ವಿಚಾರಣೆಯನ್ನು 2025ರ ಜೂನ್ 12ಕ್ಕೆ ನಿಗದಿಪಡಿಸಲಾಗಿದೆ.

ಲಿಪಿಕಾ ಮಿತ್ರಾ ತಮ್ಮ ದೂರಿನಲ್ಲಿ, ಸೀತಾರಾಮನ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಕೆಲವು ಸೆಕ್ಷನ್‌ಗಳ ಅಡಿಯಲ್ಲಿ ಮಾನಹಾನಿ, ಅವಹೇಳನಕಾರಿ, ಮತ್ತು ಕಾನೂನುಬಾಹಿರ ಹೇಳಿಕೆಗಳನ್ನು ಪತ್ರಿಕೆ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಪ್ರಕಟಿಸಿದ್ದಾರೆ ಎಂದು  ಆರೋಪಿಸಿದ್ದಾರೆ. ಈ ಹೇಳಿಕೆಗಳನ್ನು 2024ರ ಮೇ ತಿಂಗಳಲ್ಲಿ ಯೂಟ್ಯೂಬ್‌ನಲ್ಲಿ ಪ್ರಕಟಿಸಲಾಗಿದ್ದು, ಕೆಲವು ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿವೆ ಎಂದು ಲಿಪಿಕಾ ತಿಳಿಸಿದ್ದಾರೆ.

ರೌಸ್ ಅವೆನ್ಯೂ ಕೋರ್ಟ್‌ನ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪರಾಸ್ ದಲಾಲ್, ಸೀತಾರಾಮನ್‌ಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ಆರೋಪದ ಹಿನ್ನೆಲೆ

2024ರ ಲೋಕಸಭಾ ಚುನಾವಣೆಯಲ್ಲಿ ಸೋಮನಾಥ್ ಭಾರತಿ ನವದೆಹಲಿ ಕ್ಷೇತ್ರದಿಂದ ಎಎಪಿ  ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಭಾರತೀಯ ಜನತಾ ಪಕ್ಷದ  ಬನ್ಸುರಿ ಸ್ವರಾಜ್ ವಿರುದ್ಧ ಅವರು ಸೋತಿದ್ದರು. ಲಿಪಿಕಾ ಮಿತ್ರಾ ತಮ್ಮ ದೂರಿನಲ್ಲಿ, “ನಿರ್ಮಲಾ ಸೀತಾರಾಮನ್ ಚುನಾವಣೆಯ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ತಮ್ಮ ಪತಿಯ ಖ್ಯಾತಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿದ್ದರು. ಇದರಿಂದ ಚುನಾವಣೆಯಲ್ಲಿ ಗೆಲುವಿನ ಸಾಧ್ಯತೆ ಕಡಿಮೆಯಾಯಿತು,” ಎಂದು ಆರೋಪಿಸಿದ್ದಾರೆ. ಈ ಹೇಳಿಕೆಗಳಿಂದ ಭಾರತಿ, ಲಿಪಿಕಾ, ಮತ್ತು ಅವರ ಕುಟುಂಬಕ್ಕೆ “ಮಾನಸಿಕ ಆಘಾತ” ಉಂಟಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Share:

ಮತ್ತಷ್ಟು ಸುದ್ದಿ

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »