ಜಾತಿಗಣತಿ ಚರ್ಚೆಯನ್ನು ರಾಜ್ಯ ಸಚಿವ ಸಂಪುಟದಿಂದ ಮತ್ತೆ ಮುಂದೂಡಿಕೆ

ಕರ್ನಾಟಕ ರಾಜ್ಯ ಸಚಿವ ಸಂಪುಟವು ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯ ಚರ್ಚೆಯನ್ನು ಮತ್ತೊಮ್ಮೆ ಮುಂದೂಡಿದೆ. ಕೆಲವು ಸಚಿವರು ಇನ್ನೂ ಲಿಖಿತ ಅಭಿಪ್ರಾಯ ಸಲ್ಲಿಸಿಲ್ಲ ಎಂಬ ಕಾರಣವನ್ನು ನೀಡಲಾಗಿದೆ.
The order was made by appointing the District In-charge Minister

ಬೆಂಗಳೂರು: ಕರ್ನಾಟಕ ರಾಜ್ಯ ಸಚಿವ ಸಂಪುಟವು ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯ (ಜಾತಿಗಣತಿ) ಚರ್ಚೆಯನ್ನು ಮತ್ತೊಮ್ಮೆ ಮುಂದೂಡಿದೆ. ಕೆಲವು ಸಚಿವರು ಇನ್ನೂ ಲಿಖಿತ ಅಭಿಪ್ರಾಯ ಸಲ್ಲಿಸಿಲ್ಲ ಎಂಬ ಕಾರಣವನ್ನು ನೀಡಲಾಗಿದೆ. ಹಿಂದಿನ ಸಂಪುಟ ಸಭೆಯಲ್ಲಿ 11 ಸಚಿವರು ತಮ್ಮ ಅಭಿಪ್ರಾಯವನ್ನು ಒದಗಿಸಿದ್ದರೂ, 20ಕ್ಕೂ ಹೆಚ್ಚು ಸಚಿವರು ಇನ್ನೂ ಲಿಖಿತ ಅಭಿಪ್ರಾಯ ನೀಡಿಲ್ಲ ಎಂದು ತಿಳಿದುಬಂದಿತ್ತು.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿತ್ತು. “ಬಹುತೇಕ ಸಚಿವರು ಲಿಖಿತ ಅಭಿಪ್ರಾಯವನ್ನು ವೈಯಕ್ತಿಕವಾಗಿ ನೀಡಿದ್ದೀರಿ. ಆದರೆ ಇನ್ನೂ ಕೆಲವರು ಸಲ್ಲಿಸಿಲ್ಲ. ಯಾವಾಗ ಸಲ್ಲಿಸುವಿರಿ? ಈ ವಿಷಯದಲ್ಲಿ ಏನು ಮಾಡೋಣ?” ಎಂದು ಸಿಎಂ ಸಿದ್ದರಾಮಯ್ಯ ಸಚಿವರನ್ನು ಪ್ರಶ್ನಿಸಿದರು. ಆದರೆ, ಸಂಪುಟವು ಮೌನವಾಗಿತ್ತು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಧ್ಯಪ್ರವೇಶಿಸಿ, “ನಾನು ಇನ್ನೂ ಅಭಿಪ್ರಾಯ ನೀಡಿಲ್ಲ, ಈಗಲೂ ನೀಡಲು ಸಾಧ್ಯವಿಲ್ಲ,” ಎಂದು ಸ್ಪಷ್ಟವಾಗಿ ಹೇಳಿದರು. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕೂಡ, “ನನ್ನದೂ ಇದೇ ಅಭಿಪ್ರಾಯ,” ಎಂದು ಧ್ವನಿಗೂಡಿಸಿದರು.

ಪ್ರಸ್ತುತ, ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಂಬಂಧಿಸಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ಸಮೀಕ್ಷೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಜಾತಿಗಣತಿ ವರದಿಯ ಚರ್ಚೆಯು ಗೊಂದಲಕ್ಕೆ ಕಾರಣವಾಗಬಹುದು ಎಂದು ಕೆಲವು ಸಚಿವರು ಎಚ್ಚರಿಕೆ ನೀಡಿದ್ದಾರೆ. “ಒಳಮೀಸಲು ಸಮೀಕ್ಷೆಯು ಮುಗಿಯುವವರೆಗೆ ಜಾತಿಗಣತಿ ವಿಷಯವನ್ನು ಚರ್ಚಿಸದಿರುವುದು ಒಳಿತು,” ಎಂದು ಸಲಹೆ ನೀಡಿದ್ದಾರೆ.

ಕೆಲವು ಸಚಿವರು, “ಕೇಂದ್ರ ಸರ್ಕಾರವು ಜಾತಿಗಣತಿಯನ್ನು ನಡೆಸುವುದಾಗಿ ಘೋಷಿಸಿದೆ. ನಮ್ಮ ಒಳಮೀಸಲು ಸಮೀಕ್ಷೆಯೂ ಚಾಲ್ತಿಯಲ್ಲಿದೆ. ಕೇಂದ್ರವು ತನ್ನ ನಿರ್ಧಾರವನ್ನು ತೆಗೆದುಕೊಳ್ಳುವವರೆಗೆ ಕಾಯುವುದು ಒಳಿತು,” ಎಂದು ಸಲಹೆ ಕೊಟ್ಟಿದ್ದಾರೆ. ಈ ವಾದವು ರಾಜ್ಯದ ಜಾತಿಗಣತಿ ವರದಿಯ ಚರ್ಚೆಯನ್ನು ತಾತ್ಕಾಲಿಕವಾಗಿ ಮುಂದೂಡಲು ಕಾರಣವಾಯಿತು.

ಸಿಎಂ ಸೇರಿದಂತೆ ಕೆಲವರಿಂದ ಅಭಿಪ್ರಾಯವಿಲ್ಲ

ಡಿ.ಕೆ. ಶಿವಕುಮಾರ್ ಮತ್ತು ಎಸ್.ಎಸ್. ಮಲ್ಲಿಕಾರ್ಜುನ್ ತಮ್ಮ ಅಭಿಪ್ರಾಯವನ್ನು ತಿಳಿಸಲು ಸಾಧ್ಯವಿಲ್ಲ ಎಂದಿದ್ದರೆ, ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಕೆ.ಎಚ್. ಮುನಿಯಪ್ಪ ಕೂಡ ಇದುವರೆಗೆ ಲಿಖಿತ ಅಭಿಪ್ರಾಯ ಸಲ್ಲಿಸಿಲ್ಲ. ಆಶ್ಚರ್ಯಕರವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ತಮ್ಮ ಅಭಿಪ್ರಾಯವನ್ನು ಸಂಪುಟ ಸಭೆಯಲ್ಲಿ ಬಹಿರಂಗಪಡಿಸಿಲ್ಲ.  

AICC ಹೈಕಮಾಂಡ್‌ಗೆ ಮನವರಿಕೆ

ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ “ಸಾಧನಾ ಸಮಾವೇಶ”ದಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯ ಸರ್ಕಾರಕ್ಕೆ ಜಾತಿಗಣತಿ ವಿಷಯದಲ್ಲಿ ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ, ಜೂನ್‌ನಲ್ಲಿ ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ. “ಬಹುತೇಕ ಸಚಿವರಿಂದ ಅಭಿಪ್ರಾಯ ಬಂದಿದೆ. ಇನ್ನೂ 4-5 ಸಚಿವರಿಂದ ಬರಬೇಕಿದೆ. ಮುಂದಿನ ಒಂದೆರಡು ಸಂಪುಟ ಸಭೆಗಳಲ್ಲಿ ಈ ವಿಷಯವನ್ನು ಚರ್ಚಿಸುತ್ತೇವೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Share:

ಮತ್ತಷ್ಟು ಸುದ್ದಿ

ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮ

ಅಲೆದಾಟ ಮುಕ್ತ ಆಡಳಿತದತ್ತ ಮೇಲುಕೋಟೆ ಮನೆ ಬಾಗಿಲಿಗೇ ಬಂದ ‘ಸರ್ಕಾರಿ ಸೇವೆ’ ಕಾರ್ಯಕ್ರಮ  ತಂತ್ರಜ್ಞಾನದ ಅರಿವನ್ನು ಆಡಳಿತ ಯಂತ್ರಕ್ಕೆ ವರ್ಗಾಯಿಸಿದ

ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಲು ಮನವಿ

ಕಾಂಗ್ರೆಸ್‌ ಹೈಕಮಾಂಡ್‌ಗೆ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ಒತ್ತಾಯ ಮೈಸೂರು: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರಿಗೆ

ಮುಂದೆ ಓದಿ »

ಬೆಂಗಳೂರಿನಲ್ಲಿ ಮೇ 25 ರಂದು 3ನೇ ಕರ್ನಾಟಕ ಸಂಘಟಕರ ಸಮಾವೇಶ

ಸಾಂಸ್ಕೃತಿಕ ನೀತಿ ಜಾರಿ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಆಗ್ರಹಿಸಿ ರಂಗಕರ್ಮಿಗಳು ಹಾಗೂ ಸಾಂಸ್ಕೃತಿಕ ಸಂಘಟಕರ ಬೃಹತ್‌ ಸಮಾಲೋಚನೆ ಬೆಂಗಳೂರು: ಕರ್ನಾಟಕ

ಮುಂದೆ ಓದಿ »

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »