ಬಿಜೆಪಿ ಶಾಸಕರ ಅಮಾನತು ವಾಪಸ್: ಸಂಧಾನ ಯಶಸ್ವಿ

ವಿಧಾನಸಭೆಯಲ್ಲಿ ಗಲಾಟೆಗೆ ಕಾರಣವಾಗಿದ್ದ ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಸ್ಪೀಕರ್ ಯು.ಟಿ. ಖಾದರ್ ಅವರ ನೇತೃತ್ವದ ಸಂಧಾನ ಸಭೆಯಲ್ಲಿ ವಾಪಸ್ ಪಡೆಯಲಾಗಿದೆ.

ಬೆಂಗಳೂರು: ವಿಧಾನಸಭೆಯಲ್ಲಿ ಗಲಾಟೆಗೆ ಕಾರಣವಾಗಿದ್ದ ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಸ್ಪೀಕರ್ ಯು.ಟಿ. ಖಾದರ್ ಅವರ ನೇತೃತ್ವದ ಸಂಧಾನ ಸಭೆಯಲ್ಲಿ ವಾಪಸ್ ಪಡೆಯಲಾಗಿದೆ. ಹನಿಟ್ರ್ಯಾಪ್ ಮತ್ತು ಮುಸ್ಲಿಮರಿಗೆ ಶೇ.4 ಮೀಸಲಾತಿ ವಿಚಾರದ ಚರ್ಚೆಯ ಸಂದರ್ಭದಲ್ಲಿ ಶಾಸಕರು ಸ್ಪೀಕರ್‌ಗೆ ಕಾಗದ ತೂರಿ, ಪೀಠಕ್ಕೆ ಅಗೌರವ ತೋರಿದ್ದ ಆರೋಪದ ಮೇಲೆ ಆರು ತಿಂಗಳ ಅಮಾನತುಗೊಂಡಿದ್ದರು. ಈಗ, ಸಂಧಾನದ ಮೂಲಕ ಈ ಆದೇಶವನ್ನು ರದ್ದುಗೊಳಿಸಲಾಗಿದೆ.

ಸ್ಪೀಕರ್ ಯು.ಟಿ. ಖಾದರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಆರ್. ಅಶೋಕ್, ಕಾನೂನು ಸಚಿವ ಎಚ್.ಕೆ. ಪಾಟೀಲ್, ಮತ್ತು ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಭಾಗವಹಿಸಿದ್ದರು. ಶಾಸಕರು ತಮ್ಮ ದುರ್ನಡತೆಗೆ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ಆರ್. ಅಶೋಕ್ ತಿಳಿಸಿದರು. “ನಮ್ಮ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ. ಸ್ಪೀಕರ್‌ರ ಆರು ತಿಂಗಳ ಅಮಾನತು ಆದೇಶ ಸರಿಯಲ್ಲ. ಇದನ್ನು ಇಲ್ಲಿಗೆ ಮುಗಿಸಬೇಕು,” ಎಂದು ಅವರು ಹೇಳಿದರು. ಸಿಎಂ ಸಿದ್ದರಾಮಯ್ಯ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

“ಶಾಸಕರು ತಮ್ಮ ತಪ್ಪಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಇನ್ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸುವ ಭರವಸೆ ನೀಡಿದ್ದಾರೆ. ಯಾವುದೇ ಷರತ್ತು ಇಲ್ಲದೆ ಅಮಾನತು ಆದೇಶವನ್ನು ವಾಪಸ್ ಪಡೆದಿದ್ದೇನೆ,” ಎಂದು ಸ್ಪೀಕರ್ ಖಾದರ್ ತಿಳಿಸಿದರು.

ಅಮಾನತಿಗೆ ಕಾರಣವೇನು?

ಮಾರ್ಚ್ 21, 2025ರ ಬಜೆಟ್ ಅಧಿವೇಶನದಲ್ಲಿ ಹನಿಟ್ರ್ಯಾಪ್ ಮತ್ತು ಮುಸ್ಲಿಂ ಮೀಸಲಾತಿ ವಿಷಯಗಳು ತೀವ್ರ ಗಲಾಟೆಗೆ ಕಾರಣವಾದವು. ಬಿಜೆಪಿ ಶಾಸಕರು ಸರ್ಕಾರವನ್ನು ‘ಹನಿಟ್ರ್ಯಾಪ್ ಸರ್ಕಾರ’ ಎಂದು ಗುಜರಿ, ವಿಧೇಯಕದ ಪ್ರತಿಗಳನ್ನು ಹರಿದು ಸ್ಪೀಕರ್‌ ಮೇಲೆ ಎಸೆದಿದ್ದರು. ಸ್ಪೀಕರ್‌ರ ಮನವಿಯನ್ನು ಲೆಕ್ಕಿಸದೆ ಪ್ರತಿಭಟನೆ ಮುಂದುವರಿಸಿದ್ದರಿಂದ, 18 ಶಾಸಕರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು.

ಅಮಾನತುಗೊಂಡ ಶಾಸಕರು

ಅಮಾನತುಗೊಂಡ ಶಾಸಕರೆಂದರೆ: ದೊಡ್ಡನಗೌಡ ಪಾಟೀಲ್, ಡಾ. ಅಶ್ವಥ್ ನಾರಾಯಣ, ಬೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರಾಜು, ಬಿ.ಪಿ. ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್, ಸಿ.ಕೆ. ರಾಮಮೂರ್ತಿ, ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗಾರ್, ಚನ್ನಬಸಪ್ಪ, ಬಸವರಾಜ ಮತ್ತಿಮೂಡ, ಎಸ್. ಆರ್. ವಿಶ್ವನಾಥ್, ಮತ್ತು ಎಂ.ಆರ್. ಪಾಟೀಲ್.

Share:

ಮತ್ತಷ್ಟು ಸುದ್ದಿ

ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮ

ಅಲೆದಾಟ ಮುಕ್ತ ಆಡಳಿತದತ್ತ ಮೇಲುಕೋಟೆ ಮನೆ ಬಾಗಿಲಿಗೇ ಬಂದ ‘ಸರ್ಕಾರಿ ಸೇವೆ’ ಕಾರ್ಯಕ್ರಮ  ತಂತ್ರಜ್ಞಾನದ ಅರಿವನ್ನು ಆಡಳಿತ ಯಂತ್ರಕ್ಕೆ ವರ್ಗಾಯಿಸಿದ

ಬೆಂಗಳೂರಿನಲ್ಲಿ ಮೇ 25 ರಂದು 3ನೇ ಕರ್ನಾಟಕ ಸಂಘಟಕರ ಸಮಾವೇಶ

ಸಾಂಸ್ಕೃತಿಕ ನೀತಿ ಜಾರಿ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಆಗ್ರಹಿಸಿ ರಂಗಕರ್ಮಿಗಳು ಹಾಗೂ ಸಾಂಸ್ಕೃತಿಕ ಸಂಘಟಕರ ಬೃಹತ್‌ ಸಮಾಲೋಚನೆ ಬೆಂಗಳೂರು: ಕರ್ನಾಟಕ

ಮುಂದೆ ಓದಿ »

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »