ಅಮೆರಿಕದಲ್ಲಿ ವಿದೇಶಿ ವಿದ್ಯಾರ್ಥಿಗಳ ವೀಸಾ ಸಂದರ್ಶನಕ್ಕೆ ತಾತ್ಕಾಲಿಕ ವಿರಾಮ

ಅಮೆರಿಕದಲ್ಲಿ ವ್ಯಾಸಂಗ ಮಾಡಲು ಇಚ್ಛಿಸುವ ವಿದೇಶಿ ವಿದ್ಯಾರ್ಥಿಗಳ ವೀಸಾ ಅರ್ಜಿ ಸಂದರ್ಶನ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಡೊನಾಲ್ಡ್ ಟ್ರಂಪ್ ಆಡಳಿತವು ಮಂಗಳವಾರ ಸೂಚಿಸಿದೆ.

ವಾಷಿಂಗ್ಟನ್: ಅಮೆರಿಕದಲ್ಲಿ ವ್ಯಾಸಂಗ ಮಾಡಲು ಇಚ್ಛಿಸುವ ವಿದೇಶಿ ವಿದ್ಯಾರ್ಥಿಗಳ ವೀಸಾ ಅರ್ಜಿ ಸಂದರ್ಶನ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಡೊನಾಲ್ಡ್ ಟ್ರಂಪ್ ಆಡಳಿತವು ಮಂಗಳವಾರ ಸೂಚಿಸಿದೆ. ವಿದೇಶಿ ವಿದ್ಯಾರ್ಥಿಗಳ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಪರಿಶೀಲನೆಗೆ ಒಳಪಡಿಸುವ ನೀತಿಯನ್ನು ಪರಿಗಣಿಸುತ್ತಿರುವ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ವಿಶ್ವದಾದ್ಯಂತ ಇರುವ ಅಮೆರಿಕದ ರಾಯಭಾರ ಕಚೇರಿಗಳಿಗೆ ಈ ಕುರಿತು ಆದೇಶ ಹೊರಡಿಸಿದ್ದಾರೆ. “ಸಾಮಾಜಿಕ ಮಾಧ್ಯಮ ಖಾತೆಗಳ ಪರಿಶೀಲನೆಗೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗಸೂಚಿಗಳನ್ನು ರೂಪಿಸಲು ವಿದೇಶಾಂಗ ಇಲಾಖೆ ಸಿದ್ಧತೆ ನಡೆಸುತ್ತಿದೆ. ಆದ್ದರಿಂದ, ಮುಂದಿನ ಆದೇಶದವರೆಗೆ ಎಲ್ಲ ಕಾನ್ಸಲರ್ ವಿಭಾಗಗಳು ವಿದ್ಯಾರ್ಥಿ ವೀಸಾ ಸಂದರ್ಶನ ಪ್ರಕ್ರಿಯೆಯನ್ನು ನಿಲ್ಲಿಸಬೇಕು” ಎಂದು ರುಬಿಯೊ ಸೂಚಿಸಿದ್ದಾರೆ.

ಈಗಾಗಲೇ ನಿಗದಿಯಾಗಿರುವ ವೀಸಾ ಅರ್ಜಿದಾರರ ಸಂದರ್ಶನಗಳನ್ನು ಪ್ರಸ್ತುತ ಮಾರ್ಗಸೂಚಿಗಳ ಅಡಿಯಲ್ಲಿ ಮುಂದುವರಿಸಬಹುದು ಎಂದು ರುಬಿಯೊ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ, ಪ್ಯಾಲೆಸ್ಟೀನ್ ಪರ ಪ್ರತಿಭಟನೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಮಾತ್ರ ಪರಿಶೀಲಿಸಲಾಗುತ್ತಿತ್ತು. ಆದರೆ, ಇದೀಗ ಎಲ್ಲ ವಿದೇಶಿ ವಿದ್ಯಾರ್ಥಿಗಳ ಸಾಮಾಜಿಕ ಮಾಧ್ಯಮ ಖಾತೆಗಳನ್ನು ತಪಾಸಣೆಗೆ ಒಳಪಡಿಸುವ ಸಾಧ್ಯತೆಯನ್ನು ಟ್ರಂಪ್ ಆಡಳಿತ ಪರಿಗಣಿಸುತ್ತಿದೆ. ಈ ನಿರ್ಧಾರವು ವಿದೇಶಿ ವಿದ್ಯಾರ್ಥಿಗಳಿಗೆ ಅಮೆರಿಕದಲ್ಲಿ ವ್ಯಾಸಂಗ ಮಾಡುವ ಪ್ರಕ್ರಿಯೆಯ ಮೇಲೆ ಗಮನಾರ್ಹ ಪರಿಣಾಮ ಬೀರಬಹುದು.

Share:

ಮತ್ತಷ್ಟು ಸುದ್ದಿ

ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮ

ಅಲೆದಾಟ ಮುಕ್ತ ಆಡಳಿತದತ್ತ ಮೇಲುಕೋಟೆ ಮನೆ ಬಾಗಿಲಿಗೇ ಬಂದ ‘ಸರ್ಕಾರಿ ಸೇವೆ’ ಕಾರ್ಯಕ್ರಮ  ತಂತ್ರಜ್ಞಾನದ ಅರಿವನ್ನು ಆಡಳಿತ ಯಂತ್ರಕ್ಕೆ ವರ್ಗಾಯಿಸಿದ

ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಲು ಮನವಿ

ಕಾಂಗ್ರೆಸ್‌ ಹೈಕಮಾಂಡ್‌ಗೆ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ಒತ್ತಾಯ ಮೈಸೂರು: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರಿಗೆ

ಮುಂದೆ ಓದಿ »

ಬೆಂಗಳೂರಿನಲ್ಲಿ ಮೇ 25 ರಂದು 3ನೇ ಕರ್ನಾಟಕ ಸಂಘಟಕರ ಸಮಾವೇಶ

ಸಾಂಸ್ಕೃತಿಕ ನೀತಿ ಜಾರಿ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಆಗ್ರಹಿಸಿ ರಂಗಕರ್ಮಿಗಳು ಹಾಗೂ ಸಾಂಸ್ಕೃತಿಕ ಸಂಘಟಕರ ಬೃಹತ್‌ ಸಮಾಲೋಚನೆ ಬೆಂಗಳೂರು: ಕರ್ನಾಟಕ

ಮುಂದೆ ಓದಿ »

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »