ಬೆಳಗಾವಿಯಲ್ಲಿ ಕೊರೊನಾಗೆ ಮೊದಲ ಬಲಿ: ರಾಜ್ಯದಲ್ಲಿ ಕೋವಿಡ್‌ನಿಂದ ಎರಡನೇ ಮರಣ

ಬೆಳಗಾವಿಯಲ್ಲಿ 70 ವರ್ಷದ ವೃದ್ಧರೊಬ್ಬರು ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಕೋವಿಡ್-19ನಿಂದ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿದೆ.

ಬೆಳಗಾವಿ : ಕೊರೊನಾ ವೈರಸ್ ಮಹಾಮಾರಿಯು ಬೆಳಗಾವಿಯಲ್ಲಿ ತನ್ನ ಮೊದಲ ಬಲಿಯನ್ನು ಪಡೆದಿದೆ, ಇದರೊಂದಿಗೆ ಕರ್ನಾಟಕದಲ್ಲಿ ಕೋವಿಡ್-19ನಿಂದ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿದೆ. ಬೆಳಗಾವಿ ತಾಲೂಕಿನ 70 ವರ್ಷ ವಯಸ್ಸಿನ ವೃದ್ಧರೊಬ್ಬರು ಕೊರೊನಾದಿಂದ ಮೃತಪಟ್ಟಿದ್ದಾರೆ. ಈ ರೋಗಿಯು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಕೊರೊನಾ ಸೋಂಕಿನಿಂದ ಆರೋಗ್ಯ ಇನ್ನಷ್ಟು ಕ್ಷೀಣಿಸಿತು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ಮೇ 28, 2025ರಂದು ಸೋಂಕು ದೃಢಪಟ್ಟಿತ್ತು. ತಕ್ಷಣವೇ ರೋಗಿಯನ್ನು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (BIMS) ಆಸ್ಪತ್ರೆಯ ಕೋವಿಡ್ ವಾರ್ಡ್‌ಗೆ ಸ್ಥಳಾಂತರಿಸಿ ಚಿಕಿತ್ಸೆ ಆರಂಭಿಸಲಾಯಿತು. ಆದರೆ, ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ರೋಗಿ ಮೃತಪಟ್ಟಿದ್ದಾರೆ.

ರೋಗಿಯು ಈಗಾಗಲೇ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಾದ ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಕೊರೊನಾ ಸೋಂಕು ದೃಢಪಟ್ಟ ಕೂಡಲೇ, ರೋಗಿಯನ್ನು ಕೋವಿಡ್-19ಗೆ ನಿಗದಿತ ವಿಶೇಷ ವಾರ್ಡ್‌ಗೆ ಸ್ಥಳಾಂತರಿಸಲಾಯಿತು. ಆದರೆ, ವಯಸ್ಸಿನ ಕಾರಣ ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದಾಗಿ ರೋಗಿಯ ಸ್ಥಿತಿ ಗಂಭೀರವಾಯಿತು. ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಯಿತಾದರೂ, ರೋಗಿಯ ಆರೋಗ್ಯ ಸುಧಾರಿಸಲಿಲ್ಲ. ಕೊನೆಗೆ, ಮೇ 28ರ ರಾತ್ರಿ ರೋಗಿ ಕೊನೆಯುಸಿರೆಳೆದರು. ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಕುಟುಂಬಸ್ಥರು ರಾತ್ರಿಯೇ ಅಂತ್ಯಸಂಸ್ಕಾರವನ್ನು ಪೂರ್ಣಗೊಳಿಸಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊವಿಡ್-19 ಸೋಂಕು ಕಂಡುಬಂದಿದ್ದು, ರಾಜ್ಯದಲ್ಲಿ ಮತ್ತೆ ತನ್ನ ಅಧಿಪತ್ಯ ಸಾಧಿಸುತ್ತಿದೆ. ನಿನ್ನೆ ಬೆಳಗ್ಗೆವರೆಗೂ ಒಟ್ಟು 100 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿತ್ತು. ಸಂಜೆಯೊಳಗೆ ಮತ್ತಷ್ಟು ಪ್ರಕರಣಗಳು ಪತ್ತೆಯಾಗಿವೆ.

Share:

ಮತ್ತಷ್ಟು ಸುದ್ದಿ

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »