ಕಮಲ್ ಹಾಸನ್‌ ವಿವಾದಾತ್ಮಕ ಹೇಳಿಕೆಗೆ ಕನ್ನಡಿಗರ ಟೀಕೆಗಳು

"ತಮಿಳಿನಿಂದ ಕನ್ನಡ ಹುಟ್ಟಿತು" ಎಂಬ ನಟ ಕಮಲ್ ಹಾಸನ್‌ರ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿವಾದಾತ್ಮಕ ಹೇಳಿಕೆಯಿಂದ ಕರ್ನಾಟಕದಾದ್ಯಂತ ಪ್ರತಿಭಟನೆಗಳು ಭುಗಿಲೇಳುತ್ತಿವೆ.

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ನಟ ಕಮಲ್ ಹಾಸನ್‌ರ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿವಾದಾತ್ಮಕ ಹೇಳಿಕೆಯಿಂದ ಕರ್ನಾಟಕದಾದ್ಯಂತ ಪ್ರತಿಭಟನೆಗಳು ಭುಗಿಲೇಳುತ್ತಿವೆ. ಕನ್ನಡಪರ ಸಂಘಟನೆಗಳು ಮತ್ತು ರಾಜಕೀಯ ನಾಯಕರು ಕಮಲ್ ಹಾಸನ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಹೊರಗಡೆ ಕರ್ನಾಟಕ ರಕ್ಷಣಾ ವೇದಿಕೆಯ (ಕರವೇ) ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕಮಲ್ ಹಾಸನ್‌ರ ಚಿತ್ರ ‘ಥಗ್ ಲೈಫ್’ ನಿಷೇಧಿಸುವಂತೆ ಆಗ್ರಹಿಸಿದ್ದಾರೆ.

ಚೆನ್ನೈನಲ್ಲಿ ‘ಥಗ್ ಲೈಫ್’ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ನಟ ಶಿವರಾಜ್‌ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ ಕಮಲ್ ಹಾಸನ್, “ಕನ್ನಡಿಗರ ಪ್ರೀತಿಗೆ ತಲೆಬಾಗುತ್ತೇನೆ, ಆದರೆ ಕನ್ನಡ ತಮಿಳಿನಿಂದ ಹುಟ್ಟಿದೆ” ಎಂದು ಹೇಳಿದ್ದರು. ಈ ಮಾತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಕನ್ನಡಿಗರು ತಮ್ಮ ಭಾಷೆಯ ಪುರಾತನ ಇತಿಹಾಸವನ್ನು ಒತ್ತಿಹೇಳಿದ್ದಾರೆ. ಕನ್ನಡ ಭಾಷೆಯು ಕ್ರಿ.ಪೂ. 3ನೇ ಶತಮಾನಕ್ಕಿಂತಲೂ ಹಳೆಯದು ಎಂಬ ಸಂಶೋಧನೆಗಳನ್ನು ಉಲ್ಲೇಖಿಸಿ, ಕಮಲ್‌ರ ಹೇಳಿಕೆಯನ್ನು ಖಂಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕಮಲ್‌ರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. “ಕನ್ನಡಕ್ಕೆ 2,500 ವರ್ಷಗಳ ಇತಿಹಾಸವಿದೆ. ಕಮಲ್ ಹಾಸನ್‌ಗೆ ಕನ್ನಡದ ಇತಿಹಾಸ ಗೊತ್ತಿಲ್ಲ” ಎಂದು ವ್ಯಂಗ್ಯವಾಡಿದರು. ಕನ್ನಡಪರ ಕಾರ್ಯಕರ್ತ ಅಹಿಂಸಾ ಚೇತನ್, “ತಮಿಳು ಕನ್ನಡಕ್ಕಿಂತ ಹಳೆಯದಿರಬಹುದು, ಆದರೆ ಕನ್ನಡ ಅದರ ಉತ್ಪನ್ನವಲ್ಲ. ಎರಡೂ ದ್ರಾವಿಡ ಭಾಷೆಗಳು ಒಂದೇ ಮೂಲದಿಂದ ಬೇರೆಯಾಗಿ ಬೆಳೆದಿವೆ” ಎಂದು ಸ್ಪಷ್ಟಪಡಿಸಿದ್ದಾರೆ. ನಟ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ, “ಕಲೆಗೆ ಜಾತಿಯಿಲ್ಲ, ಆದರೆ ಕನ್ನಡ ತಮಿಳಿನಿಂದ ಹುಟ್ಟಿಲ್ಲ. ಕನ್ನಡಕ್ಕೆ ಎರಡೂವರೆ ಸಾವಿರ ವರ್ಷದ ಇತಿಹಾಸವಿದೆ” ಎಂದು ಖಂಡಿಸಿದ್ದಾರೆ.

ಕರವೇ ಸಂಘಟನೆಯು ಕಮಲ್ ಹಾಸನ್ ಕ್ಷಮೆಯಾಚಿಸದಿದ್ದರೆ ‘ಥಗ್ ಲೈಫ್’ ಚಿತ್ರದ ಬಿಡುಗಡೆಯನ್ನು ತಡೆಯುವುದಾಗಿ ಎಚ್ಚರಿಕೆ ನೀಡಿದೆ. KFCC ಅಧ್ಯಕ್ಷ ಎಂ.ನರಸಿಂಹಲು, “ಚಿತ್ರದ ನಿಷೇಧದ ಬಗ್ಗೆ ಚರ್ಚಿಸಲು ಎಲ್ಲಾ ಪಾಲುದಾರರೊಂದಿಗೆ ಸಭೆ ನಡೆಸಿ, ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳುತ್ತೇವೆ” ಎಂದಿದ್ದಾರೆ. ಕೇರಳದಲ್ಲಿ ಚಿತ್ರದ ಪ್ರಚಾರದ ವೇಳೆ ಕಮಲ್ ಸ್ಪಷ್ಟನೆ ನೀಡಿದ್ದು, “ನನ್ನ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ. ಇತಿಹಾಸಜ್ಞರು ಕಲಿಸಿದ್ದನ್ನೇ ಹೇಳಿದೆ. ಭಾಷೆಯ ಚರ್ಚೆಯನ್ನು ತಜ್ಞರಿಗೆ ಬಿಟ್ಟುಬಿಡೋಣ” ಎಂದಿದ್ದಾರೆ. ಆದರೆ, ಈ ಸ್ಪಷ್ಟನೆ ಕನ್ನಡಿಗರ ಆಕ್ರೋಶವನ್ನು ಶಮನಗೊಳಿಸಿಲ್ಲ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, “ಕಮಲ್‌ರ ಹೇಳಿಕೆ ಆರೂವರೆ ಕೋಟಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ” ಎಂದು ಕ್ಷಮೆಯಾಚನೆಗೆ ಒತ್ತಾಯಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ತಮ್ಮ ಭಾಷೆಯ ಶ್ರೇಷ್ಠತೆಯನ್ನು ಒತ್ತಿಹೇಳುತ್ತಿದ್ದಾರೆ. ಕಮಲ್‌ರ ಈ ಹೇಳಿಕೆ ‘ಥಗ್ ಲೈಫ್’ ಚಿತ್ರದ ಬಿಡುಗಡೆಗೆ ಕರ್ನಾಟಕದಲ್ಲಿ ಸವಾಲಾಗಿ ಪರಿಣಮಿಸಿದೆ. ಈ ವಿವಾದವು ಭಾಷಾ ಸಂವೇದನೆಯ ತೀವ್ರತೆಯನ್ನು ಎತ್ತಿ ತೋರಿಸಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »