ಕಮಲ್ ಹಾಸನ್ ಹೇಳಿಕೆಗೆ ಆಕ್ರೋಶ; ಕನ್ನಡ ಪರ ಸಂಘಟನೆಯ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಬಹುಭಾಷಾ ನಟ ಕಮಲ್ ಹಾಸನ್ ಅವರ "ತಮಿಳಿನಿಂದ ಕನ್ನಡ ಹುಟ್ಟಿದೆ" ಎಂಬ ವಿವಾದಾತ್ಮಕ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಬೆಂಗಳೂರಿನ  ಬಸವೇಶ್ವರ ನಗರದ ಬಳಿ ಕಮಲ್ ಹಾಸನ್ ಅವರ ಭಾವಚಿತ್ರಕ್ಕೆ ಬೆಂಕಿ ಹಾಕಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಬೆಂಗಳೂರು, ಮೇ 31: ಬಹುಭಾಷಾ ನಟ ಕಮಲ್ ಹಾಸನ್ ಅವರ “ತಮಿಳಿನಿಂದ ಕನ್ನಡ ಹುಟ್ಟಿದೆ” ಎಂಬ ವಿವಾದಾತ್ಮಕ ಹೇಳಿಕೆಯು ಕರ್ನಾಟಕದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹೇಳಿಕೆಯನ್ನು ಖಂಡಿಸಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಬೆಂಗಳೂರಿನ  ಬಸವೇಶ್ವರ ನಗರದ ಪವಿತ್ರ ಪ್ಯಾರಡೈಸ್ ಬಳಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಒಟ್ಟಿಗೆ ಸೇರಿ ಕಮಲ್ ಹಾಸನ್ ಅವರ ಭಾವಚಿತ್ರಕ್ಕೆ ಬೆಂಕಿ ಹಾಕಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಈ ಪ್ರತಿಭಟನೆಯ ಸಮಯದಲ್ಲಿ ರಸ್ತೆಯ ಮೇಲೆ ಬೆಂಕಿ ಹಾಕುವ ಮೂಲಕ ಸಾರ್ವಜನಿಕ ಸ್ಥಳದಲ್ಲಿ ಅಶಾಂತಿ ಸೃಷ್ಟಿಸಿದ ಆರೋಪದ ಮೇಲೆ ಪೊಲೀಸರು ಕ್ರಮ ಕೈಗೊಂಡರು. ಪೊಲೀಸರಿಗೆ ಮೊದಲೇ ಮಾಹಿತಿ ನೀಡದೆ ಮತ್ತು ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ್ದರಿಂದ ಇಬ್ಬರು ಕಾರ್ಯಕರ್ತರಾದ ರವಿಕುಮಾರ್ ಮತ್ತು ಬಸವೇಶ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ, ನೋಟಿಸ್ ನೀಡಿ ಬಿಡುಗಡೆ ಮಾಡಿದ್ದಾರೆ.

ಪ್ರತಿಭಟನೆಯ ಸಮಯದಲ್ಲಿ ಕಾರ್ಯಕರ್ತರು ಕಮಲ್ ಹಾಸನ್ ಅವರ ಹೇಳಿಕೆಯನ್ನು ಖಂಡಿಸಿ, ಕನ್ನಡ ಭಾಷೆಯ ಘನತೆ ಮತ್ತು ಸ್ವಾಭಿಮಾನವನ್ನು ಎತ್ತಿ ಹಿಡಿಯುವಂತೆ ಘೋಷಣೆಗಳನ್ನು ಕೂಗಿದರು. ಕನ್ನಡ ಪರ ಸಂಘಟನೆಗಳು ಕಮಲ್ ಹಾಸನ್ ಅವರಿಗೆ ಕ್ಷಮೆಯಾಚನೆ ಮಾಡುವಂತೆ ಒತ್ತಾಯಿಸಿದವು.  

 ವಿವಾದದ ಹಿನ್ನೆಲೆ

ಕಮಲ್ ಹಾಸನ್ ಅವರು ಮೇ 27, 2025ರಂದು ತಮ್ಮ ಹೊಸ ಸಿನಿಮಾ ‘ಥಗ್ ಲೈಫ್’ (Thug Life) ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವಾಗ ಅವರು, “ತಮಿಳಿನಿಂದ ಕನ್ನಡ ಹುಟ್ಟಿದೆ” ಎಂಬ ಹೇಳಿಕೆ ನೀಡಿದರು. ಈ ಹೇಳಿಕೆಯು ಕನ್ನಡಿಗರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಯಿತು. ಕನ್ನಡ ಪರ ಸಂಘಟನೆಗಳು ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದವು ಮತ್ತು ಕಮಲ್ ಹಾಸನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು.

ಕನ್ನಡ ಭಾಷೆಯ ಮೂಲದ ಬಗ್ಗೆ ಇತಿಹಾಸಕಾರರು ಮತ್ತು ಭಾಷಾತಜ್ಞರು ಹಲವು ಸಂಶೋಧನೆಗಳನ್ನು ನಡೆಸಿದ್ದಾರೆ. ಕನ್ನಡವು ದ್ರಾವಿಡ ಭಾಷಾ ಕುಟುಂಬಕ್ಕೆ ಸೇರಿದ್ದರೂ, ಇದು ಸ್ವತಂತ್ರವಾಗಿ ಬೆಳೆದು ಬಂದ ಭಾಷೆಯಾಗಿದೆ. ಕನ್ನಡದ ಸಾಹಿತ್ಯ ಇತಿಹಾಸವು ಕ್ರಿ.ಶ. 9ನೇ ಶತಮಾನದಿಂದಲೂ ದಾಖಲಾಗಿದ್ದು “ಕವಿರಾಜಮಾರ್ಗ” ಎಂಬ ರಾಷ್ಟ್ರಕೂಟರ ಕಾಲದ ಕೃತಿಯಿಂದ ಪ್ರಾರಂಭವಾಗುತ್ತದೆ. ಇಂತಹ ಶ್ರೀಮಂತ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ತಮಿಳಿನಿಂದ ಹುಟ್ಟಿದೆ ಎಂದು ಕಮಲ್ ಹಾಸನ್ ಹೇಳಿರುವುದು ಕನ್ನಡಿಗರ ಸಂವೇದನೆಗೆ ಧಕ್ಕೆ ತಂದಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »