ರಾಜ್ಯ ಸರ್ಕಾರದಿಂದ ರಾಜ್ಯ ಹೆದ್ದಾರಿ ಸುಧಾರಣೆಗೆ ಚಾಲನೆ

ರಾಜ್ಯದಲ್ಲಿ ಬರೋಬ್ಬರಿ 915 ಕಿ.ಮೀ. ರಾಜ್ಯ ಹೆದ್ದಾರಿಗಳ ಅಭಿವೃದ್ಧಿಗೆ ಸರ್ಕಾರ ಒಪ್ಪಿಗೆ ನೀಡಿದ್ದು, ಈ ಯೋಜನೆಯು ಕರ್ನಾಟಕ ರಾಜ್ಯ ಹೆದ್ದಾರಿ ಸುಧಾರಣಾ ಯೋಜನೆ ಅಡಿಯಲ್ಲಿ ಕೈಗೊಳ್ಳಲಾಗುತ್ತಿದೆ. ಶೀಘ್ರದಲ್ಲಿಯೇ ಈ ಯೋಜನೆಯ ಕಾಮಗಾರಿಗಳು ಆರಂಭವಾಗಲಿವೆ ಎಂದು ಹೇಳಲಾಗಿದೆ.
ಸರ್ಕಾರ ಬೇಡಿಕೆ ಉದ್ಯೋಗ ಸೃಷ್ಟಿಗೆ ಬದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಸರ್ಕಾರವು ವಾಹನ ಸವಾರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬರೋಬ್ಬರಿ 915 ಕಿ.ಮೀ. ರಾಜ್ಯ ಹೆದ್ದಾರಿಗಳ ಅಭಿವೃದ್ಧಿಗೆ ಸರ್ಕಾರ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲಿಯೇ ಈ ಯೋಜನೆಯ ಕಾಮಗಾರಿಗಳು ಆರಂಭವಾಗಲಿವೆ. ಈ ಯೋಜನೆಯು ಕರ್ನಾಟಕ ರಾಜ್ಯ ಹೆದ್ದಾರಿ ಸುಧಾರಣಾ ಯೋಜನೆ (ಕೆಶಿಪ್) ಅಡಿಯಲ್ಲಿ ಕೈಗೊಳ್ಳಲಾಗುತ್ತಿದ್ದು, ಸವಾರರಿಗೆ ಸುಗಮವಾದ ರಸ್ತೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಹೆದ್ದಾರಿಗಳ ಸ್ಥಿತಿ ಹದಗೆಟ್ಟಿದ್ದರಿಂದ ಸವಾರರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಈಗ ಸರ್ಕಾರದ ಈ ನಿರ್ಧಾರವು ರಸ್ತೆ ಸಂಚಾರವನ್ನು ಸುಲಭಗೊಳಿಸಲಿದೆ ಎಂದು ನಿರೀಕ್ಷಿಸಲಾಗಿದೆ.

ರಾಜ್ಯದ ಹೆದ್ದಾರಿಗಳಲ್ಲಿ ಗುಂಡಿಗಳು, ಸಮರ್ಪಕವಲ್ಲದ ಮೇಲ್ಮೈ ಮತ್ತು ಕಿರಿದಾದ ರಸ್ತೆಗಳಿಂದಾಗಿ ವಾಹನ ಸವಾರರು ಹೈರಾಣಾಗಿದ್ದರು. ಈ ಬಗ್ಗೆ ಸಾರ್ವಜನಿಕರಿಂದ ಹಲವು ಬಾರಿ ದೂರುಗಳು ಕೇಳಿಬಂದಿದ್ದವು. ಸವಾರರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ, ರಾಜ್ಯ ಹೆದ್ದಾರಿಗಳ ಸುಧಾರಣೆಗಾಗಿ ಮನವಿ ಸಲ್ಲಿಸಿದ್ದವರ ಒತ್ತಾಯಕ್ಕೆ ಮಣಿದಿದೆ 

ರಾಜ್ಯ ಸರ್ಕಾರವು ಈಗಾಗಲೇ ರಸ್ತೆ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. 2025-26ರ ಬಜೆಟ್‌ನಲ್ಲಿ ಸಿದ್ದರಾಮಯ್ಯ ಅವರು 4,420 ಕಿ.ಮೀ. ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ರಸ್ತೆಗಳ ಅಭಿವೃದ್ಧಿಗೆ 4,848 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದ್ದಾರೆ. ಇದರಲ್ಲಿ 915 ಕಿ.ಮೀ. ರಾಜ್ಯ ಹೆದ್ದಾರಿಗಳ ಸುಧಾರಣೆಯೂ ಸೇರಿದೆ. ಇದರ ಜೊತೆಗೆ, 39 ದುರ್ಬಲ ಸೇತುವೆಗಳ ಪುನರ್‌ನಿರ್ಮಾಣಕ್ಕೆ 1,000 ಕೋಟಿ ರೂಪಾಯಿ ಮತ್ತು ಮಳೆಯಿಂದ ಹಾನಿಗೊಂಡ ರಸ್ತೆಗಳ ದುರಸ್ತಿಗೆ 20 ಕೋಟಿ ರೂಪಾಯಿ ಅನುದಾನವನ್ನು ಘೋಷಿಸಲಾಗಿದೆ.  

Share:

ಮತ್ತಷ್ಟು ಸುದ್ದಿ

ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮ

ಅಲೆದಾಟ ಮುಕ್ತ ಆಡಳಿತದತ್ತ ಮೇಲುಕೋಟೆ ಮನೆ ಬಾಗಿಲಿಗೇ ಬಂದ ‘ಸರ್ಕಾರಿ ಸೇವೆ’ ಕಾರ್ಯಕ್ರಮ  ತಂತ್ರಜ್ಞಾನದ ಅರಿವನ್ನು ಆಡಳಿತ ಯಂತ್ರಕ್ಕೆ ವರ್ಗಾಯಿಸಿದ

ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಲು ಮನವಿ

ಕಾಂಗ್ರೆಸ್‌ ಹೈಕಮಾಂಡ್‌ಗೆ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ಒತ್ತಾಯ ಮೈಸೂರು: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರಿಗೆ

ಮುಂದೆ ಓದಿ »

ಬೆಂಗಳೂರಿನಲ್ಲಿ ಮೇ 25 ರಂದು 3ನೇ ಕರ್ನಾಟಕ ಸಂಘಟಕರ ಸಮಾವೇಶ

ಸಾಂಸ್ಕೃತಿಕ ನೀತಿ ಜಾರಿ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಆಗ್ರಹಿಸಿ ರಂಗಕರ್ಮಿಗಳು ಹಾಗೂ ಸಾಂಸ್ಕೃತಿಕ ಸಂಘಟಕರ ಬೃಹತ್‌ ಸಮಾಲೋಚನೆ ಬೆಂಗಳೂರು: ಕರ್ನಾಟಕ

ಮುಂದೆ ಓದಿ »

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »