ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಒಳನಾಡು ಪ್ರದೇಶಗಳಲ್ಲಿ ಜೂನ್ 4ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಸವಾರರು ಮತ್ತು ನಾಗರಿಕರು ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗಿದೆ.
heavy-rain-in-the-state-in-the-next-5-days

ಬೆಂಗಳೂರು: ಕರ್ನಾಟಕದಲ್ಲಿ ಮಾನ್ಸೂನ್ ಮಳೆಯ ಆರ್ಭಟದ ಮಧ್ಯೆ, ಕರಾವಳಿ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದೆ. ಆದರೆ, ಒಳನಾಡು ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಜೂನ್ 4ರಂದು ರಾಜ್ಯದ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಸವಾರರು ಮತ್ತು ನಾಗರಿಕರು ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗಿದೆ.

ಇಂದು (ಜೂನ್ 3) ರಾಜ್ಯದ ಬಹುತೇಕ ಕಡೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಆದರೆ, ಕೆಲವೆಡೆ ಹಗುರ ಮಳೆಯ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಗರಿಷ್ಠ ತಾಪಮಾನ 31°C ಮತ್ತು ಕನಿಷ್ಠ ತಾಪಮಾನ 21°C ಇರಲಿದೆ. ಜೂನ್ 4ರಂದು ದಕ್ಷಿಣ ಮತ್ತು ಉತ್ತರ ಒಳನಾಡಿನ 18 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಈ ಜಿಲ್ಲೆಗಳಲ್ಲಿ ಬೆಳಗಾವಿ, ಹಾವೇರಿ, ಧಾರವಾಡ, ರಾಯಚೂರು, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ತುಮಕೂರು ಮತ್ತು ಕೊಡಗು ಸೇರಿವೆ. ಈ ಪ್ರದೇಶಗಳಲ್ಲಿ 30-40 ಕಿ.ಮೀ. ವೇಗದಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜೂನ್ 5ರಂದು ಮಳೆಯ ಪ್ರಮಾಣ ಹೆಚ್ಚಾಗಿ, ಕರಾವಳಿಯ ಮೂರು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲೆಡೆ ವ್ಯಾಪಕ ಮಳೆಯ ನಿರೀಕ್ಷೆ ಇದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಹಾವೇರಿ, ಬೆಳಗಾವಿ ಮತ್ತು ಧಾರವಾಡದಲ್ಲಿ ಒಂದೆರಡು ಕಡೆ ಬಿರುಗಾಳಿಯೊಂದಿಗೆ ಹಗುರ ಮಳೆ ಸಾಧ್ಯತೆ ಇದೆ. ಆದರೆ, ಬಾಗಲಕೋಟೆ, ಗದಗ, ಕೊಪ್ಪಳ ಮತ್ತು ವಿಜಯಪುರದಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಹಾಸನ, ಮೈಸೂರು, ಮಂಡ್ಯ ಮತ್ತು ರಾಮನಗರದಲ್ಲಿ ಒಂದೆರಡು ಕಡೆ ಹಗುರ ಮಳೆಯ ಸಾಧ್ಯತೆ ಇದೆ. ಆದರೆ, ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು ಮತ್ತು ವಿಜಯನಗರದಲ್ಲಿ ಒಣಹವೆ ಇರಲಿದೆ.

ರಾಜ್ಯದಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಜಲಾಶಯಗಳಲ್ಲಿ ನೀರಿನ ಒಳಹರಿವು ಗಣನೀಯವಾಗಿ ಏರಿಕೆಯಾಗಿದೆ. ಮಂಡ್ಯದ ಕೆಆರ್‌ಎಸ್‌ ಜಲಾಶಯದಲ್ಲಿ 27.167 ಟಿಎಂಸಿ, ಕೊಡಗಿನ ಹಾರಂಗಿ ಜಲಾಶಯದಲ್ಲಿ 6.046 ಟಿಎಂಸಿ, ಹಾಸನದ ಹೇಮಾವತಿ ಜಲಾಶಯದಲ್ಲಿ 23.802 ಟಿಎಂಸಿ ಮತ್ತು ಮೈಸೂರಿನ ಕಬಿನಿ ಜಲಾಶಯದಲ್ಲಿ 17.44 ಟಿಎಂಸಿ ನೀರಿನ ಒಳಹರಿವು ದಾಖಲಾಗಿದೆ. ಮಲೆನಾಡು ಪ್ರದೇಶಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ ಮತ್ತು ಹಾಸನದಲ್ಲಿ ಉತ್ತಮ ಮುಂಗಾರು ಮಳೆಯಾಗುತ್ತಿದ್ದು, ಮುಂದಿನ ಒಂದು ವಾರವೂ ಈ ಪ್ರಮಾಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಾರ್ಮಾಡಿ ಘಾಟಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಸೋಮವಾರ ಭಾರಿ ಮಳೆಯಿಂದಾಗಿ ಬೃಹತ್ ಮರವೊಂದು ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಅಡ್ಡಲಾಗಿ ಬಿದ್ದಿದೆ. ಇದರಿಂದ ಎರಡೂ ದಿಕ್ಕುಗಳಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳ ಸಾಲು ಸೃಷ್ಟಿಯಾಗಿ, ಸವಾರರು ಮತ್ತು ಪ್ರವಾಸಿಗರು ತೀವ್ರ ತೊಂದರೆ ಅನುಭವಿಸಿದರು. ಪಶ್ಚಿಮ ಘಟ್ಟದಲ್ಲಿ ಮಾನ್ಸೂನ್ ಮಳೆ ಆರಂಭವಾಗಿರುವುದರಿಂದ, ಮರ ಬೀಳುವಿಕೆ ಮತ್ತು ಮಣ್ಣಿನ ಜರಿತದಂತಹ ಸಮಸ್ಯೆಗಳು ಹೆಚ್ಚಾಗಿವೆ. ಸ್ಥಳೀಯ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ, ಮರವನ್ನು ತೆರವುಗೊಳಿಸುವ ಕಾರ್ಯ ಕೈಗೊಂಡರು. ಈ ಘಟನೆಯಿಂದ ಘಾಟಿ ಪ್ರದೇಶದಲ್ಲಿ ಪ್ರಯಾಣಿಸುವವರು ಹೆಚ್ಚು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Share:

ಮತ್ತಷ್ಟು ಸುದ್ದಿ

ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮ

ಅಲೆದಾಟ ಮುಕ್ತ ಆಡಳಿತದತ್ತ ಮೇಲುಕೋಟೆ ಮನೆ ಬಾಗಿಲಿಗೇ ಬಂದ ‘ಸರ್ಕಾರಿ ಸೇವೆ’ ಕಾರ್ಯಕ್ರಮ  ತಂತ್ರಜ್ಞಾನದ ಅರಿವನ್ನು ಆಡಳಿತ ಯಂತ್ರಕ್ಕೆ ವರ್ಗಾಯಿಸಿದ

ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಲು ಮನವಿ

ಕಾಂಗ್ರೆಸ್‌ ಹೈಕಮಾಂಡ್‌ಗೆ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ಒತ್ತಾಯ ಮೈಸೂರು: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರಿಗೆ

ಮುಂದೆ ಓದಿ »

ಬೆಂಗಳೂರಿನಲ್ಲಿ ಮೇ 25 ರಂದು 3ನೇ ಕರ್ನಾಟಕ ಸಂಘಟಕರ ಸಮಾವೇಶ

ಸಾಂಸ್ಕೃತಿಕ ನೀತಿ ಜಾರಿ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಆಗ್ರಹಿಸಿ ರಂಗಕರ್ಮಿಗಳು ಹಾಗೂ ಸಾಂಸ್ಕೃತಿಕ ಸಂಘಟಕರ ಬೃಹತ್‌ ಸಮಾಲೋಚನೆ ಬೆಂಗಳೂರು: ಕರ್ನಾಟಕ

ಮುಂದೆ ಓದಿ »

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »