ಆಗಸ್ಟ್‌ 15ರಿಂದ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ನಿಷೇಧ

ಕರ್ನಾಟಕದ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಾಲಯಗಳಲ್ಲಿ ಆಗಸ್ಟ್ 15, 2025ರಿಂದ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಧಾರ್ಮಿಕ ದತ್ತಿ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ.

ಬೆಂಗಳೂರು: ಕರ್ನಾಟಕದ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಾಲಯಗಳಲ್ಲಿ ಆಗಸ್ಟ್ 15, 2025ರಿಂದ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಧಾರ್ಮಿಕ ದತ್ತಿ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ. ವಿಕಾಸಸೌಧದಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕ್ರಮವು ರಾಜ್ಯದ ದೇವಾಲಯಗಳನ್ನು ಪರಿಸರ ಸ್ನೇಹಿಯಾಗಿಸುವ ಗುರಿಯನ್ನು ಹೊಂದಿದೆ. “ನೀರಿನ ಬಾಟಲ್‌ ಸೇರಿದಂತೆ ಯಾವುದೇ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ದೇವಾಲಯದ ಆವರಣದಲ್ಲಿ ಬಳಸುವಂತಿಲ್ಲ. ಈಗಿರುವ ಪ್ಲಾಸ್ಟಿಕ್‌ ಸಂಗ್ರಹವನ್ನು ಆಗಸ್ಟ್ 15ರ ಒಳಗೆ ಬಳಸಿಕೊಂಡು ಮುಗಿಸಬೇಕು,” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಈ ಆದೇಶವನ್ನು ಜಾರಿಗೊಳಿಸಲು ದೇವಾಲಯ ಆಡಳಿತ ಮಂಡಳಿಗಳಿಗೆ ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ಪ್ಲಾಸ್ಟಿಕ್‌-ಮುಕ್ತ ದೇವಾಲಯಗಳ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ. ಈ ಕ್ರಮವು ರಾಜ್ಯದ ಪರಿಸರ ಸಂರಕ್ಷಣೆಗೆ ದೊಡ್ಡ ಕೊಡುಗೆಯಾಗಲಿದೆ ಎಂದು ಸಚಿವರು ಒತ್ತಿ ಹೇಳಿದರು. ಇದರ ಜೊತೆಗೆ, ದೇವಾಲಯಗಳಲ್ಲಿ ಪರಿಸರ ಸ್ನೇಹಿ ವಸ್ತುಗಳ ಬಳಕೆಯನ್ನು ಉತ್ತೇಜಿಸಲು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಯೋಜನೆ ರೂಪಿಸಲಾಗುವುದು.

ಸಭೆಯಲ್ಲಿ ಚಾಮುಂಡೇಶ್ವರಿ ಬೆಟ್ಟದ ಒತ್ತುವರಿ ತೆರವುಗೊಳಿಸುವ ಕುರಿತು ಮಹತ್ವದ ಚರ್ಚೆ ನಡೆಯಿತು. ಈಗಾಗಲೇ 11 ಎಕರೆ ಒತ್ತುವರಿಯಾದ ಜಾಗವನ್ನು ತೆರವುಗೊಳಿಸಲಾಗಿದ್ದು, ಉಳಿದ ಜಾಗವನ್ನು ಶೀಘ್ರವಾಗಿ ತೆರವುಗೊಳಿಸಲು ಸೂಚನೆ ನೀಡಲಾಗಿದೆ. ರಾಜ್ಯದಾದ್ಯಂತ ಇರುವ ಮುಜರಾಯಿ ದೇವಾಲಯಗಳ ಒಟ್ಟು 20 ಸಾವಿರ ಎಕರೆ ಜಮೀನಿನ ಇಂಡೀಕರಣವನ್ನು ಮೂರು ತಿಂಗಳ ಒಳಗೆ ಪೂರ್ಣಗೊಳಿಸಲು ಆದೇಶಿಸಲಾಗಿದೆ. ಗ್ರಾಮಾಂತರ ಮತ್ತು ನಗರ ಭಾಗದ ದೇವಾಲಯ ಆಸ್ತಿಗಳನ್ನು ಪ್ರತ್ಯೇಕವಾಗಿ ಸರ್ವೆ ಮಾಡಿ, ದಾಖಲೆಗಳನ್ನು ಸರಿಪಡಿಸಿ ನೋಟಿಫಿಕೇಶನ್‌ಗೆ ಸಿದ್ಧಪಡಿಸಲು ಸೂಚಿಸಲಾಗಿದೆ.

ಅರ್ಚಕರಿಗೆ ತಸ್ತೀಕ್‌ (ವೇತನ) ನೇರ ಬ್ಯಾಂಕ್‌ ವರ್ಗಾವಣೆ (ಡಿಬಿಟಿ) ಮೂಲಕ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಒಟ್ಟು 25 ಸಾವಿರ ಅರ್ಚಕರ ಪೈಕಿ 14 ಸಾವಿರ ಮಂದಿ ತಮ್ಮ ವಿವರಗಳನ್ನು ಈಗಾಗಲೇ ಸಲ್ಲಿಸಿದ್ದಾರೆ. ಉಳಿದವರು ಶೀಘ್ರವಾಗಿ ಮಾಹಿತಿ ನೀಡಿದರೆ, ಎಲ್ಲರಿಗೂ (ಡಿಬಿಟಿ)  ಮೂಲಕ ತಸ್ತೀಕ್‌ ವಿತರಣೆ ಸಾಧ್ಯವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯದ 31 ಜಿಲ್ಲೆಗಳಲ್ಲಿ ಧಾರ್ಮಿಕ ಪರಿಷತ್‌ ರಚನೆಗೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ 8 ಜಿಲ್ಲೆಗಳಲ್ಲಿ ಇದು ರಚನೆಯಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಶೀಘ್ರವಾಗಿ ರಚನೆಗೊಳಿಸಲು ಆದೇಶ ನೀಡಲಾಗಿದೆ. ಇದರ ಜೊತೆಗೆ, ತಿರುಪತಿ, ತುಳಿಜಾಪುರ, ಪಂಡರಾಪುರ ಸೇರಿದಂತೆ ಇತರ ರಾಜ್ಯಗಳಲ್ಲಿರುವ ಮುಜರಾಯಿ ಇಲಾಖೆಯ ವಸತಿ ಭವನಗಳಲ್ಲಿ 3-ಸ್ಟಾರ್‌ ಸೌಲಭ್ಯಗಳನ್ನು ಒದಗಿಸಲು ಯೋಜನೆ ರೂಪಿಸಲಾಗಿದೆ. ಈ ಭವನಗಳ ರೂಮ್‌ ಬುಕ್ಕಿಂಗ್‌ಗೆ ಆನ್‌ಲೈನ್‌ ವ್ಯವಸ್ಥೆಯನ್ನು ಜಾರಿಗೆ ತರಲು ಸೂಚನೆ ನೀಡಲಾಗಿದೆ.

ಹುಲಿಗೆಮ್ಮ, ಮಲೆ ಮಹದೇಶ್ವರ, ಘಾಟಿ ಸುಬ್ರಮಣ್ಯ, ರೇಣುಕಾ ಎಲ್ಲಮ್ಮ, ಮತ್ತು ಚಾಮುಂಡೇಶ್ವರಿ ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರದ ಮಾಸ್ಟರ್‌ ಪ್ಲ್ಯಾನ್‌ ರೂಪಿಸಲು ನಿರ್ಧರಿಸಲಾಗಿದೆ. ಈ ಯೋಜನೆಯು ದೇವಾಲಯಗಳ ಮೂಲಸೌಕರ್ಯವನ್ನು ಆಧುನೀಕರಣಗೊಳಿಸಿ, ಭಕ್ತರಿಗೆ ಉತ್ತಮ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಿದೆ ಎಂದರು. 

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »