ಮಳೆಗಾಲದಲ್ಲಿ ಹೆಚ್ಚಿರಲಿ ಆರೋಗ್ಯದ ಕಾಳಜಿ: ರೋಗಗಳಿಂದ ದೂರವಿರಿ

ಮಳೆಗಾಲದಲ್ಲಿ ಸೊಳ್ಳೆ ಮತ್ತು ಬ್ಯಾಕ್ಟೀರಿಯಾಗಳಿಂದ ಡೆಂಗ್ಯೂ, ಮಲೇರಿಯಾದಂತಹ ರೋಗಗಳು ಹರಡುವ ಸಾಧ್ಯತೆಯಿರುತ್ತದೆ. ಸ್ವಚ್ಛತೆ ಕಾಪಾಡಿಕೊಂಡು, ಶುದ್ಧ ನೀರು ಮತ್ತು ತಾಜಾ ಆಹಾರ ಸೇವಿಸಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಅಗತ್ಯ. ಮಕ್ಕಳ ಬಗ್ಗೆ ವಿಶೇಷ ಕಾಳಜಿಯಿರಲಿ. ಅನಾರೋಗ್ಯ ಲಕ್ಷಣ ಕಂಡ ತಕ್ಷಣ ವೈದ್ಯಕೀಯ ಸಲಹೆ ಪಡೆದು ರೋಗಗಳಿಂದ ದೂರವಿರಬೇಕು ಎಂದು ಅಶ್ವಿನಿ ತಮ್ಮ ಲೇಖನದಲ್ಲಿ ತಿಳಿಸಿದ್ದಾರೆ.

ಮಳೆಗಾಲವು ತಂಪಾದ ವಾತಾವರಣವನ್ನು ತರುವ ಜೊತೆಗೆ ರೋಗಕಾರಕ ಬ್ಯಾಕ್ಟೀರಿಯಾಗಳನ್ನೂ ಹೊತ್ತುತರುತ್ತದೆ. ಈ ಋತುವಿನಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಸ್ವಚ್ಛತೆ, ಸರಿಯಾದ ಆಹಾರ ಸೇವನೆ ಮತ್ತು ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ. ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳು ಮತ್ತು ನೀರು ಸಂಗ್ರಹವಾಗುವ ಜಾಗಗಳಲ್ಲಿ ಸೊಳ್ಳೆಗಳು, ನೊಣಗಳು ಮತ್ತು ರೋಗಕಾರಕ ಬ್ಯಾಕ್ಟೀರಿಯಾಗಳು ಉತ್ಪತ್ತಿಯಾಗುತ್ತವೆ, ಇದು ಡೆಂಗ್ಯೂ, ಮಲೇರಿಯಾ, ಚಿಕುನ್‌ಗುನ್ಯಾ ಮತ್ತು ಅತಿಸಾರದಂತಹ ರೋಗಗಳಿಗೆ ಕಾರಣವಾಗುತ್ತದೆ. ಈ ರೋಗಗಳಿಂದ ರಕ್ಷಣೆ ಪಡೆಯಲು ಕೆಲವು ಪರಿಣಾಮಕಾರಿ ಕ್ರಮಗಳನ್ನು ಅನುಸರಿಸಬೇಕು.

ತಂಪು ವಾತಾವರಣ ಮತ್ತು ಹೆಚ್ಚಿನ ಆರ್ದತೆ ಬ್ಯಾಕ್ಟೀರಿಯಾ, ಶಿಲೀಂದ್ರಗಳು ಬೆಳೆಯಲು ಸಹಕಾರಿಯಾಗಿದ್ದು, ಆಹಾರ ಮತ್ತು ಇತರೆ ತಿಂಡಿಗಳ ಮೇಲೆ ಬೇಗ ಪರಿಣಾಮ ಬೀರಿ ಆಹಾರ ಬೇಗ ಕೆಡಲು ಕಾರಣವಾಗುತ್ತವೆ. ಸರಿಯಾದ ಕ್ರಮದಲ್ಲಿ ಆಹಾರ ನಿರ್ವಹಣೆ ಮತ್ತು ಸಂಗ್ರಹ ಮಾಡದೇ ಹೋದರೆ ಫುಡ್ ಪಾಯಿಸನ್ ಮತ್ತು ಹೊಟ್ಟೆಗೆ ಸಂಬಂಧಿಸಿದ ಅನಾರೋಗ್ಯ ಬಾಧಿಸದೇಇರದು.

ಮಳೆಗಾದಲ್ಲಿ ರೋಗಗಳನ್ನು ತಡೆಗಟ್ಟಲು ನಾವು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ ಖಾಯಿಲೆಗಳಿಂದ ದೂರವಿರಬಹುದು.

ಸ್ವಚ್ಛತೆ ಕಾಪಾಡಿಕೊಳ್ಳಿ

ಮನೆ ಮತ್ತು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಿ. ಟಯರ್, ತೆಂಗಿನ ಚಿಪ್ಪು, ಪ್ಲಾಸ್ಟಿಕ್ ಡಬ್ಬಿಗಳು ಮತ್ತು ಇತರ ವಸ್ತುಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಿ, ಏಕೆಂದರೆ ಇವು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುತ್ತವೆ. ನೀರಿನ ಟ್ಯಾಂಕ್ ಮತ್ತು ಸಂಗ್ರಹ ಪಾತ್ರೆಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಿ. 

ಕೈಗಳನ್ನು ಆಗಾಗ ಸೋಪಿನಿಂದ ತೊಳೆಯಿರಿ, ವಿಶೇಷವಾಗಿ ಊಟದ ಮೊದಲು ಮತ್ತು ಶೌಚಾಲಯ ಬಳಕೆಯ ನಂತರ. ಇದು ರೋಗಾಣುಗಳ ಹರಡುವಿಕೆಯನ್ನು ಕಡಿಮೆ ಮಾಡುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಸಹ ಮುಖ್ಯ.

ಆಹಾರ ಮತ್ತು ನೀರು

ಮಳೆಗಾಲದಲ್ಲಿ ಕುಡಿಯುವ ನೀರು ಮಲಿನಗೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ, ಕಾಯಿಸಿ ಆರಿಸಿದ ಅಥವಾ ಫಿಲ್ಟರ್ ಮಾಡಿದ ಶುದ್ಧ ನೀರನ್ನು ಮಾತ್ರ ಕುಡಿಯಿರಿ. ಮನೆಯಲ್ಲಿ ತಯಾರಿಸಿದ ತಾಜಾ, ಬಿಸಿಯಾದ ಆಹಾರವನ್ನು ಸೇವಿಸಿ. ಹಿಂದಿನ ದಿನದ ಆಹಾರ ಅಥವಾ ತಂಪಾದ ಆಹಾರವನ್ನು ತಿನ್ನದಿರಿ, ಏಕೆಂದರೆ ಇದು ಫುಡ್ ಪಾಯ್ಸನಿಂಗ್‌ಗೆ ಕಾರಣವಾಗಬಹುದು. ಹಣ್ಣು, ತರಕಾರಿ ಮತ್ತು ಸೊಪ್ಪುಗಳನ್ನು ಸ್ವಚ್ಛವಾಗಿ ತೊಳೆದ ನಂತರವೇ ಬಳಸಿ. ಬೀದಿ ಆಹಾರ, ಕತ್ತರಿಸಿಟ್ಟ ಹಣ್ಣುಗಳು, ಮತ್ತು ಪಾನಿಪುರಿಯಂತಹ ಚಾಟ್‌ಗಳನ್ನು ತಪ್ಪಿಸಿ, ಏಕೆಂದರೆ ಇವು ಬ್ಯಾಕ್ಟೀರಿಯಾದಿಂದ ಮಲಿನಗೊಳ್ಳುವ ಸಾಧ್ಯತೆ ಹೆಚ್ಚು. ಹಗುರವಾದ, ಬೇಗ ಜೀರ್ಣವಾಗುವ ಆಹಾರವನ್ನು ಆಯ್ಕೆ ಮಾಡಿ. ಕಲ್ಲಂಗಡಿ, ಸೌತೆಕಾಯಿಯಂತಹ ನೀರಿನಾಂಶವಿರುವ ಹಣ್ಣುಗಳನ್ನು ಸೇವಿಸಿ, ಇದು ದೇಹದ ನಿರ್ಜಲೀಕರಣವನ್ನು ತಡೆಯುತ್ತದೆ

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ

ಮಳೆಗಾಲದಲ್ಲಿ ಸೋಂಕುಗಳು ತ್ವರಿತವಾಗಿ ಹರಡುವುದರಿಂದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದು ಅಗತ್ಯ. ವಿಟಮಿನ್ ಸಿ ಭರಿತ ಹಣ್ಣುಗಳಾದ ದ್ರಾಕ್ಷಿಹಣ್ಣು, ಕಿತ್ತಳೆ, ಮತ್ತು ಟೊಮೆಟೊಗಳನ್ನು ಸೇವಿಸಿ. ಧಾನ್ಯಗಳು, ಕಾಳುಗಳು, ಮತ್ತು ಪ್ರೋಟೀನ್ ಭರಿತ ಆಹಾರವನ್ನು ಆಹಾರಕ್ರಮದಲ್ಲಿ ಸೇರಿಸಿ. ದೈಹಿಕ ಚಟುವಟಿಕೆಯಾದ ಯೋಗ, ವಾಯುವಿಹಾರ, ಅಥವಾ ಮನೆಯೊಳಗಿನ ವ್ಯಾಯಾಮವನ್ನು ಅಭ್ಯಾಸ ಮಾಡಿ. ಇದು ದೇಹವನ್ನು ಬೆಚ್ಚಗಿಡುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಜ್ವರ ಮತ್ತು ಶೀತದ ಬಗ್ಗೆ ಎಚ್ಚರಿಕೆ ಇರಲಿ

ಮಳೆಗಾಲದಲ್ಲಿ ಜ್ವರ, ಶೀತ, ಮತ್ತು ಉಸಿರಾಟದ ಸೋಂಕುಗಳು ಸಾಮಾನ್ಯ. ತಾಪಮಾನದ ಏರಿಳಿತಗಳು ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುತ್ತವೆ. ಆದ್ದರಿಂದ, ಬೆಚ್ಚಗಿನ ಬಟ್ಟೆಗಳನ್ನು ಧರಿಸಿ, ಶುದ್ಧ ನೀರು ಕುಡಿಯಿರಿ, ಮತ್ತು ರೋಗ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ. ಸ್ವಯಂ-ಚಿಕಿತ್ಸೆಯನ್ನು ತಪ್ಪಿಸಿ, ಏಕೆಂದರೆ ಇದು ರೋಗವನ್ನು ತೀವ್ರಗೊಳಿಸಬಹುದು.

ಮಕ್ಕಳ ಆರೋಗ್ಯಕ್ಕೆ ವಿಶೇಷ ಕಾಳಜಿಯಿರಲಿ

ಮಕ್ಕಳು ಮಳೆಗಾಲದಲ್ಲಿ ಸೋಂಕುಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚು. ಮಕ್ಕಳನ್ನು ಮಳೆಯಿಂದ ನೆನೆಯದಂತೆ ರಕ್ಷಿಸಿ. ಬೆಚ್ಚಗಿನ ಬಟ್ಟೆಗಳಾದ ಉದ್ದನೆಯ ತೋಳಿನ ಅಂಗಿಗಳು, ಪ್ಯಾಂಟ್, ಮತ್ತು ಕಿವಿಮುಚ್ಚುವ ಟೋಪಿಗಳನ್ನು ಧರಿಸಲು ಪ್ರೋತ್ಸಾಹಿಸಿ. ಮಕ್ಕಳಿಗೆ ಸಾಕಷ್ಟು ಶುದ್ಧ ನೀರು ಮತ್ತು ನೀರಿನಾಂಶವಿರುವ ಆಹಾರವನ್ನು ನೀಡಿ, ಇದು ನಿರ್ಜಲೀಕರಣವನ್ನು ತಡೆಯುತ್ತದೆ. ಸೊಳ್ಳೆಗಳಿಂದ ರಕ್ಷಣೆಗಾಗಿ ಸೊಳ್ಳೆಪರದೆ, ರಿಪೆಲೆಂಟ್ ಕ್ರೀಮ್‌ಗಳು, ಮತ್ತು ಉದ್ದನೆಯ ಬಟ್ಟೆಗಳನ್ನು ಬಳಸಿ. ರೋಗ ಲಕ್ಷಣಗಳು ಕಂಡುಬಂದರೆ, ತಕ್ಷಣ ವೈದ್ಯರನ್ನು ಭೇಟಿಯಾಗಿ.

ಮಳೆಗಾಲವನ್ನು ಆರೋಗ್ಯಕರವಾಗಿ ಕಳೆಯಲು ಈ ಕ್ರಮಗಳನ್ನು ಅನುಸರಿಸಿ.  

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »