ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ತುರ್ತು ಲ್ಯಾಂಡಿಂಗ್

ಸ್ಯಾನ್‌ ಫ್ರಾನ್ಸಿಸ್ಕೋದಿಂದ ಮುಂಬೈಗೆ ತೆರಳುತ್ತಿದ್ದ ಮತ್ತೊಂದು ಏರ್ ಇಂಡಿಯಾದ ವಿಮಾನ (AI180) ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದ ತುರ್ತು ಲ್ಯಾಂಡಿಂಗ್ ಮಾಡಿದೆ. ವಿಮಾನದ ಬಾಯಿಂಗ್ 777-200LRನ ಎಡ ಎಂಜಿನ್‌ನಲ್ಲಿ ಸಮಸ್ಯೆ ಕಂಡುಬಂದಿದ್ದು, ಪ್ರಯಾಣಿಕರ ಸುರಕ್ಷತೆಗಾಗಿ ಎಲ್ಲರನ್ನೂ ಬೆಳಿಗ್ಗೆ 5:20ರ ಸುಮಾರಿಗೆ ಇಳಿಸಲಾಯಿತು.

ಕೋಲ್ಕತ್ತಾ : ಸ್ಯಾನ್‌ ಫ್ರಾನ್ಸಿಸ್ಕೋದಿಂದ ಮುಂಬೈಗೆ ತೆರಳುತ್ತಿದ್ದ ಮತ್ತೊಂದು ಏರ್ ಇಂಡಿಯಾದ ವಿಮಾನ (AI180) ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದ ತುರ್ತು ಲ್ಯಾಂಡಿಂಗ್ ಮಾಡಿದೆ. ವಿಮಾನದ ಬಾಯಿಂಗ್ 777-200LRನ ಎಡ ಎಂಜಿನ್‌ನಲ್ಲಿ ಸಮಸ್ಯೆ ಕಂಡುಬಂದಿದ್ದು, ಪ್ರಯಾಣಿಕರ ಸುರಕ್ಷತೆಗಾಗಿ ಎಲ್ಲರನ್ನೂ ಬೆಳಿಗ್ಗೆ 5:20ರ ಸುಮಾರಿಗೆ ಇಳಿಸಲಾಯಿತು. ಈ ಘಟನೆಯಿಂದ ವಿಮಾನದ ಮುಂಬೈಗೆ ತೆರಳುವ ವೇಳಾಪಟ್ಟಿಯಲ್ಲಿ ವಿಳಂಬವಾಗಿದೆ.

ವಿಮಾನವು ಮಧ್ಯರಾತ್ರಿ 12:45ಕ್ಕೆ ಕೋಲ್ಕತ್ತಾದಲ್ಲಿ ನಿಗದಿತ ವಿರಾಮಕ್ಕೆ ಇಳಿದಿತ್ತು. ಆದರೆ, ಎಂಜಿನ್ ತಪಾಸಣೆ ವೇಳೆ ದೋಷ ಕಂಡುಬಂದಿದ್ದು, ಕ್ಯಾಪ್ಟನ್ ಸುರಕ್ಷತೆಯ ದೃಷ್ಟಿಯಿಂದ ಪ್ರಯಾಣಿಕರನ್ನು ಇಳಿಸುವ ನಿರ್ಧಾರ ಕೈಗೊಂಡರು. ಏರ್ ಇಂಡಿಯಾವು ಪ್ರಯಾಣಿಕರಿಗಾಗಿ ಮತ್ತೊಂದು ವಿಮಾನವನ್ನು ವ್ಯವಸ್ಥೆಗೊಳಿಸಿದ್ದು, ದೋಷದ ತೀವ್ರತೆಯನ್ನು ತಾಂತ್ರಿಕ ತಂಡ ಪರಿಶೀಲಿಸುತ್ತಿದೆ.

ಈ ಘಟನೆಯಿಂದ ಯಾವುದೇ ಪ್ರಾಣಹಾನಿಯಾಗಿಲ್ಲವಾದರೂ, ಏರ್ ಇಂಡಿಯಾದ ಬೋಯಿಂಗ್ ವಿಮಾನಗಳ ಸುರಕ್ಷತೆಯ ಕುರಿತು ಭಾರತದ ವಿಮಾನಯಾನ ನಿಯಂತ್ರಣಾಧಿಕಾರಿ (DGCA) ತೀವ್ರ ತಪಾಸಣೆಗೆ ಆದೇಶಿಸಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ವಿಮಾನವನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಗಿದೆ.  

ಈ ಘಟನೆಯು ಏರ್ ಇಂಡಿಯಾದ ಇತ್ತೀಚಿನ ತಾಂತ್ರಿಕ ಸಮಸ್ಯೆಗಳ ಸರಣಿಯ ಭಾಗವಾಗಿದೆ. ಸೋಮವಾರ, ಹಾಂಗ್ ಕಾಂಗ್‌ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್‌ಲೈನರ್ (AI315) ವಿಮಾನವು ತಾಂತ್ರಿಕ ದೋಷದಿಂದಾಗಿ ಹಾಂಗ್ ಕಾಂಗ್‌ಗೆ ಹಿಂತಿರುಗಿತ್ತು. ಅದೇ ರೀತಿ, ದೆಹಲಿಯಿಂದ ರಾಂಚಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲಿ ದೆಹಲಿಗೆ ಮರಳಿತ್ತು.

ಇದಕ್ಕೂ ಮೊದಲು, ಜೂನ್ 13ರಂದು ಫುಕೆಟ್‌ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ (AI379) ಬಾಂಬ್ ದಾಳಿಯ ಭೀತಿಯಿಂದ ಫುಕೆಟ್‌ಗೆ ಮರಳಿತ್ತು. ಇಂತಹ ಘಟನೆಗಳು ಏರ್ ಇಂಡಿಯಾದ ವಿಮಾನಗಳ ಸುರಕ್ಷತೆಯ ಕುರಿತು ಆತಂಕವನ್ನು ಹೆಚ್ಚಿಸಿವೆ, ವಿಶೇಷವಾಗಿ ಜೂನ್ 12ರಂದು ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ (AI171) ಅಪಘಾತಕ್ಕೀಡಾಗಿ 270ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »