ಚರ್ಚ್ ಸ್ಟ್ರೀಟ್‌ನಲ್ಲಿ ಬೀದಿಬದಿ ವ್ಯಾಪಾರಿಗಳ ತೆರವು, ಸಾಮಗ್ರಿಗಳನ್ನ ವಶಕ್ಕೆ ಪಡೆದ ಬಿಬಿಎಮ್‌ಪಿ

ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಬುಧವಾರ  ಸಂಜೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಿಬ್ಬಂದಿಯಿಂದ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ನಡೆದಿದ್ದು, ವ್ಯಾಪಾರಿಗಳ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು: ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಬುಧವಾರ  ಸಂಜೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಮ್‌ಪಿ) ಸಿಬ್ಬಂದಿಯಿಂದ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ನಡೆದಿದ್ದು, ವ್ಯಾಪಾರಿಗಳ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕ್ರಮಕ್ಕೆ ವ್ಯಾಪಾರಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಸ್ಥಳದಲ್ಲಿ ಒಂದಷ್ಟು ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

 ಈ ತೆರವುಗೊಳಿಸುವ ಕಾರ್ಯಾಚರಣೆಯನ್ನು ಬಿಬಿಎಮ್‌ಪಿ ಮಾರ್ಷಲ್‌ಗಳು ನಡೆಸಿದ್ದಾರೆ. ಕನಿಷ್ಠ ಐದಕ್ಕೂ ಹೆಚ್ಚು ವ್ಯಾಪಾರಿಗಳು ತಾವು ವ್ಯಾಪಾರ ನಡೆಸಲು ಬಿಬಿಎಮ್‌ಪಿಯಿಂದ ದೃಢೀಕರಣ ಪತ್ರ (ಹಾಕಿಂಗ್ ರಿಜಿಸ್ಟ್ರೇಷನ್ ಆಕ್‌ನಾಲೆಡ್ಜ್‌ಮೆಂಟ್) ಹೊಂದಿದ್ದೇವೆ ಎಂದು ಆರೋಪಿಸಿದ್ದಾರೆ. ಆದರೆ, ಬಿಬಿಎಮ್‌ಪಿ ಅಧಿಕಾರಿಗಳು ಚರ್ಚ್ ಸ್ಟ್ರೀಟ್‌ನಲ್ಲಿ ಯಾರಿಗೂ ಬೀದಿಬದಿ ವ್ಯಾಪಾರಕ್ಕೆ ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವ್ಯಾಪಾರಿಗಳ ಸಾಮಗ್ರಿಗಳನ್ನು ಲಾರಿಯಲ್ಲಿ ಕೊಂಡೊಯ್ದು ಬಿಬಿಎಮ್‌ಪಿ ಕೇಂದ್ರ ಕಚೇರಿಗೆ ರವಾನಿಸಲಾಗಿದೆ.

ತೆರವು ಕಾರ್ಯಾಚರಣೆಯ ವಿರುದ್ಧ ವ್ಯಾಪಾರಿಗಳು ತಕ್ಷಣವೇ ಪ್ರತಿಭಟನೆ ಆರಂಭಿಸಿದರು. ಸ್ವಾಮಿ ಗೌಡ ಎಂಬ ವ್ಯಾಪಾರಿಯೊಬ್ಬರು, “ನವೆಂಬರ್ 2024ರಿಂದ ಬಿಬಿಎಮ್‌ಪಿ, ಸ್ಥಳೀಯ ಅಂಗಡಿಮಾಲೀಕರ ಮತ್ತು ನಿವಾಸಿಗಳ ಒತ್ತಡದಿಂದ ನಮ್ಮನ್ನು ತೆರವುಗೊಳಿಸಲು ಪ್ರಯತ್ನಿಸುತ್ತಿದೆ. ಸಾಮಗ್ರಿಗಳ ವಶಕ್ಕೆ ಯಾವುದೇ ದಾಖಲೆಯನ್ನೂ ನೀಡಿಲ್ಲ,” ಎಂದು ಆಕ್ಷೇಪಿಸಿದರು. ವ್ಯಾಪಾರಿಗಳು ಗುಂಪುಗೂಡಿ, ತೆರವು ಕಾರ್ಯಾಚರಣೆಯನ್ನು ನಿಲ್ಲಿಸಿ ವಶಪಡಿಸಿಕೊಂಡ ಸಾಮಗ್ರಿಗಳನ್ನು ವಾಪಸ್ ನೀಡುವಂತೆ ಒತ್ತಾಯಿಸಿದರು.ಈ ಗೊಂದಲದಿಂದಾಗಿ ಸ್ಥಳೀಯ ಪೊಲೀಸರು ಆಗಮಿಸಿ, ಬಿಬಿಎಮ್‌ಪಿ ಸಿಬ್ಬಂದಿ ಮತ್ತು ವ್ಯಾಪಾರಿಗಳಿಗೆ ಸಮಸ್ಯೆಯನ್ನು ಚರ್ಚಿಸಿ ಬಗೆಹರಿಸಿಕೊಳ್ಳಲು ಸೂಚಿಸಿದರು. 

ಬಿಬಿಎಮ್‌ಪಿಯ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆಯು ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದು. ಸಮೀಕ್ಷೆಯಲ್ಲಿ ಸಾವಿರಾರು ವ್ಯಾಪಾರಿಗಳನ್ನು ಅಧಿಕೃತ ಪಟ್ಟಿಯಿಂದ ಕೈಬಿಡಲಾಗಿದ್ದು, ಅವರ ಜೀವನೋಪಾಯವನ್ನು ರಾತ್ರೋರಾತ್ರಿ ಅಕ್ರಮವೆಂದು ಘೋಷಿಸಲಾಗಿದೆ. 2024ರಲ್ಲಿ ಜಯನಗರ, ವಿಜಯನಗರ, ಮತ್ತು ಚರ್ಚ್ ಸ್ಟ್ರೀಟ್‌ನಂತಹ ಪ್ರದೇಶಗಳಲ್ಲಿ ಬಿಬಿಎಮ್‌ಪಿ ತೆರವು ಕಾರ್ಯಾಚರಣೆಗಳನ್ನು ನಡೆಸಿತ್ತು. ಜಯನಗರದಲ್ಲಿ, ವ್ಯಾಪಾರಿಗಳು ಬಿಬಿಎಮ್‌ಪಿ ನೀಡಿದ ಗುರುತಿನ ಚೀಟಿಗಳನ್ನು ಹೊಂದಿದ್ದರೂ ತೆರವುಗೊಂಡಿದ್ದರು.

ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೇ 2025ರಲ್ಲಿ, ಕಾನೂನಾತ್ಮಕವಾಗಿ ನೋಂದಾಯಿತ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶವಿದೆ ಎಂದು ಘೋಷಿಸಿದ್ದರು. ಆದರೆ, ವ್ಯಾಪಾರಿಗಳು ಬಿಬಿಎಮ್‌ಪಿಯ ಸಮೀಕ್ಷೆಯನ್ನು ಮುಂದುವರಿಸಿ, ಹೊಸ ನೋಂದಣಿಗಳನ್ನು ಸ್ವೀಕರಿಸಬೇಕೆಂದು ಒತ್ತಾಯಿಸಿದ್ದಾರೆ.

ಕರ್ನಾಟಕ ಹೈಕೋರ್ಟ್‌ನ 2024ರ ಆದೇಶದಂತೆ, ಜಯನಗರದ 78 ವ್ಯಾಪಾರಿಗಳನ್ನು ತೆರವುಗೊಳಿಸದಂತೆ ರಕ್ಷಣೆ ನೀಡಲಾಗಿತ್ತು. ಆದರೆ, ಬಿಬಿಎಮ್‌ಪಿ ಈ ಆದೇಶವನ್ನು ಉಲ್ಲಂಘಿಸಿ ತೆರವು ಕಾರ್ಯಾಚರಣೆ ನಡೆಸಿತ್ತು. ಇದೀಗ ಚರ್ಚ್ ಸ್ಟ್ರೀಟ್‌ನ ಘಟನೆಯು ಮತ್ತೊಮ್ಮೆ ಕಾನೂನಾತ್ಮಕ ಚರ್ಚೆಗೆ ಎಡೆಮಾಡಿಕೊಟ್ಟಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »