ಎಂಎಲ್‌ಸಿ ರವಿಕುಮಾರ್‌ನಿಂದ ಶಾಲಿನಿ ರಾಜನೀಶ್‌ಗೆ ಅವಮಾನ: ಕಾಂಗ್ರೆಸ್‌ನಿಂದ ತೀವ್ರ ಖಂಡನೆ

ಕರ್ನಾಟಕ ಬಿಜೆಪಿ ಶಾಸಕಾಂಗ ಸದಸ್ಯ ಎನ್ ರವಿಕುಮಾರ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಮಾತನಾಡಿದ ವಿವಾದಾತ್ಮಕ ಹೇಳಿಕೆಯು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
BJP MLC Ravi Kumar’s Derogatory Remark on Shalini Rajneesh Sparks Outrage

ಬಿಜೆಪಿ ಎಂಎಲ್‌ಸಿ ಮತ್ತು ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್ ರವಿಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಕೀಳುಮಟ್ಟದ ಪದ ಬಳಸುವ ಮೂಲಕ ಟೀಕಿಸಿದ್ದಾರೆ. ಈ ಹೇಳಿಕೆಯು ರಾಜಕೀಯ ವಲಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಬಿಜೆಪಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ, ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿರುವ ಮಹಿಳೆ ವಿರುದ್ಧ ಅಸಭ್ಯವಾಗಿ ಮಾತನಾಡಿರುವುದು ನಿಜಕ್ಕೂ ಖಂಡನೀಯವಾಗಿದೆ.

ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ಇದು ಅವರ ಮನಸ್ಥಿತಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶಾಖೆಗಳಲ್ಲಿ ಕಲಿಸಲಾದ ಮಾನಸಿಕತೆಯನ್ನು ತೋರಿಸುತ್ತದೆ. ರವಿಕುಮಾರ್ ಆರ್‌ಎಸ್‌ಎಸ್‌ನವರೇ ತಾನೇ? ಇವರು ಜನರ ಆಯ್ಕೆಯಿಂದ ಗೆದ್ದವರಲ್ಲ, ಆರ್‌ಎಸ್‌ಎಸ್‌ನಿಂದ ಬಿಜೆಪಿಗೆ ತಳಕಿಹಾಕಲ್ಪಟ್ಟವರು. ಇವರ ಈ ಚಿಂತನೆಯು ಮನುಸ್ಮೃತಿಯಿಂದ ಪ್ರೇರಿತವಾಗಿದೆ” ಎಂದು ಖರ್ಗೆ ಆರೋಪಿಸಿದ್ದಾರೆ.

ಈ ಘಟನೆಯ ಬಗ್ಗೆ ಕಾಂಗ್ರೆಸ್ ಸರ್ಕಾರವು ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರವಿಕುಮಾರ್ ವಿರುದ್ಧ ಕಾನೂನು ಕ್ರಮಕ್ಕೆ ಸೂಚನೆ ನೀಡಿದ್ದಾರೆ. “ಈ ರೀತಿಯ ಕೀಳುಮಾತುಗಳು ಸರ್ಕಾರಿ ಅಧಿಕಾರಿಗಳಿಗೆ ಮಾತ್ರವಲ್ಲ, ಇಡೀ ಆಡಳಿತ ವ್ಯವಸ್ಥೆಗೆ ಅವಮಾನವಾಗಿದೆ” ಎಂದು ಶಿವಕುಮಾರ್ ಹೇಳಿದ್ದಾರೆ.

ಕರ್ನಾಟಕದ ಐಎಎಸ್ ಅಧಿಕಾರಿಗಳ ಸಂಘವು ಈ ಹೇಳಿಕೆಯನ್ನು ಖಂಡಿಸಿದ್ದು, ಶಾಲಿನಿ ರಜನೀಶ್ ಅವರ ಗೌರವ ಮತ್ತು ಸೇವೆಯನ್ನು ಶ್ಲಾಘಿಸಿದೆ. “ಶಾಲಿನಿ ರಜನೀಶ್ ಅವರು ಶ್ರೇಷ್ಠ ದಾಖಲೆಯನ್ನು ಹೊಂದಿರುವ ಸಮರ್ಥ ಅಧಿಕಾರಿಯಾಗಿದ್ದಾರೆ. ಈ ರೀತಿಯ ಆರೋಪಗಳು ಆಧಾರ ರಹಿತ ಮತ್ತು ಅನ್ಯಾಯವಾಗಿವೆ” ಎಂದು ಸಂಘದ ಹೇಳಿಕೆಯಲ್ಲಿ ತಿಳಿಸಿದೆ.

ರವಿಕುಮಾರ್ ಈ ಹಿಂದೆಯೂ ಸರ್ಕಾರಿ ಅಧಿಕಾರಿಗಳ ವಿರುದ್ಧ ಟೀಕಾತ್ಮಕ ಹೇಳಿಕೆ, ಜಾತಿ ನಿಂದನೆಯಂತಹ ಸಾಲು ಸಾಲು ಆರೋಪಗಳಿವೆ. ರವಿಕುಮಾರ್ ಅವರ ಈ ಹೇಳಿಕೆಯು ಇತ್ತೀಚೆಗೆ ಫೌಜಿಯಾ ತರನ್ನುಮ್ ಅವರ ವಿರುದ್ಧ ಮೇ 24, 2025ರಂದು ಕಲಬುರಗಿಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಇಂತಹದ್ದೆ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದ ಉಂಟಾದ ಆಕ್ರೋಶದಿಂದಾಗಿ, ರವಿಕುಮಾರ್ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಕರ್ನಾಟಕ ಹೈಕೋರ್ಟ್ ಈ ಕಾಮೆಂಟ್‌ಗಾಗಿ ರವಿಕುಮಾರ್‌ಗೆ ಫೌಜಿಯಾ ಅವರಿಗೆ ಕ್ಷಮೆಯಾಚಿಸುವಂತೆ ಸೂಚಿಸಿತ್ತು, ಆದರೆ ರವಿಕುಮಾರ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿಲ್ಲ ಎಂದು ಖರ್ಗೆ ಆರೋಪಿಸಿದ್ದಾರೆ.

Share:

ಮತ್ತಷ್ಟು ಸುದ್ದಿ

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »