ಬಿಜೆಪಿ ಎಂಎಲ್‌ಸಿಯ ರವಿಕುಮಾರ್‌ ಅವಹೇಳನಕಾರಿ ಹೇಳಿಕೆಗೆ ಆಕ್ರೋಶ

BJP MLC’s Derogatory Remarks on Chief Secretary Shalini Rajneesh Spark Outrage

ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ವಿರುದ್ಧ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ನೀಡಿರುವ ಅವಹೇಳನಕಾರಿ ಹೇಳಿಕೆಗೆ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ರವಿಕುಮಾರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹ ಹೆಚ್ಚಾಗಿದೆ. ಇತ್ತೀಚೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸರ್ಕಾರ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ರವಿಕುಮಾರ್, ಮುಖ್ಯ ಕಾರ್ಯದರ್ಶಿ ಅವರು ಇಡೀ ದಿನ ಮುಖ್ಯಮಂತ್ರಿಗಾಗಿ ಮತ್ತು ರಾತ್ರಿಯೆಲ್ಲ ರಾಜ್ಯ ಸರ್ಕಾರಕ್ಕಾಗಿ ಕೆಲಸ ಮಾಡುತ್ತಾರೆ ಎಂಬ ಹೇಳಿಕೆ ನೀಡಿದ್ದರು.

ಮಹಿಳೆಯರ ವಿರುದ್ಧ ಬಿಜೆಪಿ ನಾಯಕರ ಈ ರೀತಿ ಅವಹೇಳನಕಾರಿಯಾಗಿ ಹೇಳಿಕೆ ನೀಡುವ ಖಯಾಲಿ ಇಂದು ನಿನ್ನೆಯದಲ್ಲ. ಈ ಹಿಂದೆಯೂ ಅನೇಕ ಬಿಜೆಪಿ ನಾಯಕರು ಮಹಿಳಾ ರಾಜಕಾರಣಿಗಳು, ಮಹಿಳಾ ಅಧಿಕಾರಿಗಳ ವಿರುದ್ಧ ಇಂತಹ ಸಾಕಷ್ಟು ಹೇಳಿಕೆಗಳನ್ನು ನೀಡಿದ್ದಾರೆ. ಬಿಜೆಪಿಯಲ್ಲಿ ಮಹಿಳೆಯರನ್ನು ನಿಂದಿಸದ ನಾಯಕರು ಬೆರಳೆಣಿಕೆಯಷ್ಟು ಸಿಗಬಹುದಷ್ಟೇ ಬಿಟ್ಟರೆ ಎಲ್ಲರೂ ಒಂದಿಲ್ಲೊಂದು ಬಾರಿ ಈ ರೀತಿಯ ಹೇಳಿಕೆ ನೀಡಿದವರೆ ಆಗಿದ್ದಾರೆ.

ಈ ಹಿಂದೆಯೂ ರವಿಕುಮಾರ್ ಅವರು ಕಲಬುರಗಿಯಲ್ಲಿ ನಡೆದ ಬಿಜೆಪಿ ರ್ಯಾಲಿ ವೇಳೆ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ʼಪಾಕಿಸ್ತಾನದಿಂದ ಬಂದವರೇʼ ಎಂದು ಜಿಲ್ಲಾಧಿಕಾರಿ ವಿರುದ್ಧ ಆಧಾರರಹಿತ ಮತ್ತು ಕೋಮುವಾದಿ ಹೇಳಿಕೆ ನೀಡಿದ್ದರು. ಈಗ ಮುಖ್ಯ ಕಾರ್ಯದರ್ಶಿ ಅವರಿಗೆ ಅಪಮಾನ ಮಾಡಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಜೋರಾಗಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ. ರವಿ ಸದನದಲ್ಲಿಯೇ ಆಕ್ಷೇಪಾರ್ಹ ಪದ ಬಳಸಿ ಬಂಧನಕ್ಕೂ ಈಡಾಗಿದ್ದರು. ಈ ಸಮಯದಲ್ಲಿ ಬಿಜೆಪಿಯ ನಾಯಕರು ಸಿ.ಟಿ.ರವಿಯವರನ್ನು ಸಮರ್ಥಿಸಿಕೊಂಡಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಹಿಂದೆ ಕೋಲಾರ ಬಿಜೆಪಿ ಸಂಸದರಾಗಿದ್ದ ವೇಳೆ ಮುನಿಸ್ವಾಮಿ, ರಸ್ತೆಬದಿ ಅಂಗಡಿ ಇಟ್ಟುಕೊಂಡಿದ್ದ ಮಹಿಳೆಗೆ, ʼನಿನ್ನ ಗಂಡ ಬದುಕಿದ್ದಾನೆ ತಾನೇ? ಮತ್ತೇಕೆ ಹಣೆಗೆ ಕುಂಕುಮ ಇಟ್ಟಿಲ್ಲ? ನಿನಗೆ ಕಾಮನ್ ಸೆನ್ಸ್ ಇಲ್ವʼ ಎಂದು ಬೀದಿಯಲ್ಲಿಯೇ ನಿಂದಿಸಿದ್ದರು.

ಮಾಜಿ ಗೃಹಮಂತ್ರಿ ಆರಗ ಜ್ಞಾನೇಂದ್ರ, ಮೈಸೂರಿನ ನಂದಿಬೆಟ್ಟದಲ್ಲಿ ನಡೆದಿದ್ದ ಯುವತಿಯ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆಗೆ ಸಂಬಂಧಿಸಿದಂತೆ ಹೇಳಿಕೆಯೊಂದನ್ನು ನೀಡುವಾಗ ʼಸಂಜೆ 7.30ರ ಹೊತ್ತಿಗೆ ಯುವತಿ ಅಲ್ಲಿಗೆ ಹೋಗಬಾರದಿತ್ತುʼ ಎಂದು ನೀಡಿದ್ದ ಹೇಳಿಕೆ ರಾಜ್ಯಾದಂತೆ ಖಂಡನೆಗೆ ಕಾರವಾಗಿತ್ತು.

ಇಂದು ಬಿಜೆಪಿ ಮೈತ್ರಿಯಲ್ಲಿರುವ ಜೆಡಿಎಸ್‌ನ ಮಾಜಿ ಸಚಿವ ಎಚ್.ಡಿ.ರೇವಣ್ಣ, 2019ರ ಚುನಾವಣೆ ಸಮಯದಲ್ಲಿ ಸುಮಲತಾ ಅವರ ಸ್ಪರ್ಧೆಯ ಕುರಿತು ʼಗಂಡ ಸತ್ತು ಇನ್ನೂ ಒಂದೆರಡು ತಿಂಗಳು ಕಳೆದಿಲ್ಲ ಆದರೂ, ಅಂಬರೀಷ್ ಪತ್ನಿ ನಟಿ ಸುಮಲತಾ ಅವರಿಗೆ ರಾಜಕೀಯ ಯಾಕೆ ಬೇಕಿತ್ತುʼ ಎಂದು ಜರಿದಿದ್ದರು.

ಇದು ಕೇವಲ ನಮ್ಮ ರಾಜ್ಯದ ಬಿಜೆಪಿ ನಾಯಕರ ಮನಸ್ಥಿತಿಯಲ್ಲ, ಈ ಹಿಂದೆ ರಾಷ್ಟ್ರನಾಯಕರೂ ತಮ್ಮ ಸ್ತ್ರೀ ಧ್ವೇಷವನ್ನು ಮುಲಾಜಿಲ್ಲದೆ ಹೊರಹಾಕಿದ್ದಾರೆ. ಪ್ರಧಾನಿಯಿಂದ ಹಿಡಿದು ಶಾಸಕರವರೆಗೆ ಹಲವು ನಾಯಕರು ಇಂತಹ ನುಡಿಗಳನ್ನು ಆಡಿದ್ದಾರೆ. ದೇಶದ ಅನೇಕ ಬಿಜೆಪಿ ನಾಯಕರು ಮಹಿಳಾ ವಿರೋಧಿ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ಈಗಲೂ ನೀಡುತ್ತಿದ್ದಾರೆ. ಮಹಿಳೆಯರನ್ನು ಹೀಗಳೆದು ಮಾತನಾಡುವ ಜನ ಎಲ್ಲ ಪಕ್ಷದಲ್ಲೂ ಇದ್ದಾರೆ. ಆದರೆ, ಬಿಜೆಪಿ ಪಕ್ಷದ ನಾಕಯರು ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ.

ಬಿಜೆಪಿ ಮತ್ತು ಆರ್ ಎಸ್ ಎಸ್ ಮಹಿಳೆ ಮತ್ತು ಸಂಸ್ಕೃತಿಯ ಬಗ್ಗೆ ದೊಡ್ಡದಾಗಿ ಮಾತಾಡುತ್ತದೆ ಆದರೆ ಈಗ ನೋಡಿದರೆ ಎಂಎಲ್ ಸಿ ರವಿ ಕುಮಾರ್ ಅವರು ಶಾಲಿನಿ ರಜನೇಶ್  ಅವರ ವಿರುದ್ಧ ಬಾಯಿಗೆ ಬಂದಿರುವ ಹಾಗೆ ಮಾತನಾಡಿರುವುದು ಇದು ಎಷ್ಟರ ಮಟ್ಟಿಗೆ ಸರಿ, ಮಹಿಳೆಯರ ಮೇಲೆ ಎಷ್ಟು ಗೌರವ ಇದೆ  ಎಂದು ನೋಡಬಹುದಾಗಿದೆ. ಇತ್ತೀಚೆಗೆ ಪತ್ತೂರು ಬಿಜೆಪಿ ಮುಖಂಡನ ಮಗನು ಕೂಡ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿರುವ ಘಟನೆ ನಮಗೆಲ್ಲರಿಗೂ ಗೊತ್ತೇಇದೇ ಇದು ಬಿಜೆಪಿ ಮತ್ತು ಆರ್ ಎಸ್ ಎಸ್ ನ ಮನಸಲ್ಲಿ ಹೆಣ್ಣಿನ ಮೇಲೆ ಎಷ್ಟು ಕೀಳು ಮಟ್ಟದ ಮನೋಭಾವನೆ ಇದೆ ಎಂದು ತೋರಿಸಿಕೊಡುತ್ತದೆ.

 

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »