ಅನ್ನಭಾಗ್ಯಕ್ಕೆ ಅಡ್ಡಿ: 4,500 ಲಾರಿ ಮಾಲಕರ ಮುಷ್ಕರ, ಸರಕಾರದ ವಿರುದ್ಧ ಆಕ್ರೋಶ

ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಯ ಆಹಾರ ಧಾನ್ಯ ಸಾಗಾಣಿಕೆಗೆ ಸಂಬಂಧಿಸಿದಂತೆ ಸುಮಾರು 250 ಕೋಟಿ ರೂಪಾಯಿಗಳ ಬಾಕಿ ಪಾವತಿಯಾಗದಿರುವುದರಿಂದ ಕರ್ನಾಟಕ ರಾಜ್ಯ ಪಡಿತರ ಆಹಾರ ಧಾನ್ಯಗಳ ಸಗಟು ಹಾಗೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರ ಸಂಘವು ರಾಜ್ಯವ್ಯಾಪಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.
4,500 Trucks Halted: Karnataka Faces Rice Supply Crisis Over Unpaid Dues

ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಯ ಆಹಾರ ಧಾನ್ಯ ಸಾಗಾಣಿಕೆಗೆ ಸಂಬಂಧಿಸಿದಂತೆ ಸುಮಾರು 250 ಕೋಟಿ ರೂಪಾಯಿಗಳ ಬಾಕಿ ಪಾವತಿಯಾಗದಿರುವುದರಿಂದ ಕರ್ನಾಟಕ ರಾಜ್ಯ ಪಡಿತರ ಆಹಾರ ಧಾನ್ಯಗಳ ಸಗಟು ಹಾಗೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರ ಸಂಘವು ರಾಜ್ಯವ್ಯಾಪಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಈ ಮುಷ್ಕರದಿಂದಾಗಿ ಸುಮಾರು 4,500 ಲಾರಿಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ರಾಜ್ಯದ ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಧಾನ್ಯ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿದೆ.

ಕರ್ನಾಟಕ ರಾಜ್ಯ ಲಾರಿ ಮಾಲಕರು ಹಾಗೂ ಏಜೆಂಟರ ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “ಕಳೆದ 5-6 ತಿಂಗಳಿಂದ ಸರಕಾರ ಆಹಾರ ಧಾನ್ಯ ಸಾಗಾಣಿಕೆಗೆ ಸಂಬಂಧಿಸಿದ ವೆಚ್ಚವನ್ನು ಪಾವತಿಸಿಲ್ಲ. ಆಹಾರ ಇಲಾಖೆಯಿಂದ 250 ಕೋಟಿ ರೂಪಾಯಿಗಳ ಬಾಕಿ ಬರಬೇಕಿದೆ. ಪ್ರತಿ ತಿಂಗಳು ರಾಜ್ಯಾದ್ಯಂತ 4.50 ಲಕ್ಷ ಟನ್ ಆಹಾರ ಧಾನ್ಯಗಳನ್ನು ಲಾರಿಗಳ ಮೂಲಕ ಸಾಗಿಸಲಾಗುತ್ತದೆ. ಆದರೆ, ಬಾಕಿ ಹಣ ಪಾವತಿಯಾಗದ ಕಾರಣ ಸಾಗಾಣಿಕೆ ವೆಚ್ಚ ಮತ್ತು ಡೀಸೆಲ್ ವೆಚ್ಚ ಭರಿಸಲಾಗದೆ ತೊಂದರೆಯಾಗಿದೆ,” ಎಂದು ತಿಳಿಸಿದ್ದಾರೆ.

ಜೂನ್ 19, 2025 ರಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿಗಳು ಲಾರಿ ಮಾಲಕರೊಂದಿಗೆ ಸಭೆ ನಡೆಸಿ, ಜೂನ್ 25 ರ ಒಳಗೆ ಬಾಕಿ ಪಾವತಿಸುವ ಭರವಸೆ ನೀಡಿದ್ದರು. ಆದರೆ, ಗಡುವು ಮೀರಿದರೂ ಹಣ ಬಿಡುಗಡೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಲಾರಿ ಮಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಮುಷ್ಕರದಿಂದಾಗಿ ಸುಮಾರು 3,000 ರಿಂದ 4,000 ಓನರ್-ಕಮ್-ಡ್ರೈವರ್‌ಗಳಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. “ಸರಕಾರದ ಭರವಸೆ ಈಡೇರದ ಕಾರಣ ಅನಿವಾರ್ಯವಾಗಿ ಈ ನಿರ್ಧಾರ ಕೈಗೊಳ್ಳಬೇಕಾಯಿತು,” ಎಂದು ಷಣ್ಮುಗಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಕಾರದ ಬಾಕಿ ಪಾವತಿಯ ವಿಳಂಬವು ಲಾರಿ ಮಾಲಕರಿಗೆ ಗಂಭೀರ ಸಮಸ್ಯೆಗಳನ್ನು ಉಂಟುಮಾಡಿದೆ. ಟೆಂಡರ್‌ಗೆ ಸಂಬಂಧಿಸಿದ ಇಎಂಡಿ ಮೊತ್ತವನ್ನು ಕೂಡ ಬ್ಯಾಂಕ್ ಗ್ಯಾರಂಟಿ ನೀಡಿದ ನಂತರ ಮರುಪಾವತಿ ಮಾಡಿಲ್ಲ. ಆಯ್ಕೆಯಾಗದ ಬಿಡ್‌ದಾರರಿಗೂ ಇಎಂಡಿ ಹಣ ಹಿಂತಿರುಗಿಸಿಲ್ಲ. ಇದರಿಂದ ಲಾರಿ ಮಾಲಕರಿಗೆ ಆರ್ಥಿಕ ಒತ್ತಡ ಹೆಚ್ಚಾಗಿದೆ. “ಒಂದು ದಿನ ತೆರಿಗೆ ಕಟ್ಟದಿದ್ದರೆ ದಂಡ ವಿಧಿಸುವ ಸರಕಾರ, ಲಾರಿ ಮಾಲಕರ ಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು,” ಎಂದು ಷಣ್ಮುಗಪ್ಪ ಒತ್ತಾಯಿಸಿದ್ದಾರೆ.

ಈ ಮುಷ್ಕರದಿಂದ ರಾಜ್ಯದಲ್ಲಿ ಆಹಾರ ಧಾನ್ಯ ವಿತರಣೆಯಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ. ನ್ಯಾಯಬೆಲೆ ಅಂಗಡಿಗಳಿಗೆ ಅಕ್ಕಿ ಮತ್ತು ಇತರ ಆಹಾರ ಧಾನ್ಯಗಳ ಪೂರೈಕೆ ಕಡಿಮೆಯಾಗಬಹುದು. ಸರಕಾರ ತಕ್ಷಣವೇ ಬಾಕಿ ಪಾವತಿಸದಿದ್ದರೆ, ಈ ಸಮಸ್ಯೆ ತೀವ್ರಗೊಳ್ಳಬಹುದು ಎಂದು ಲಾರಿ ಮಾಲಕರು ಎಚ್ಚರಿಕೆ ನೀಡಿದ್ದಾರೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »