ಆರ್‌ಸಿಬಿ ಕಾಲ್ತುಳಿತ: ತಂಡದ ತರಾತುರಿಯೇ ದುರಂತಕ್ಕೆ ಕಾರಣ, ಸಿಐಡಿ ವರದಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದ ತನಿಖೆಯನ್ನು ನಡೆಸುತ್ತಿರುವ ಸಿಐಡಿ, ಆರ್‌ಸಿಬಿ ಆಡಳಿತ ಮಂಡಳಿಯ ತರಾತುರಿಯ ನಿರ್ಧಾರವೇ ಜನರ ಸಾವಿಗೆ ಕಾರಣವಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.
RCB Stampede: CID Blames RCB’s Hasty Decision

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 2025ರ ಜೂನ್ 4ರಂದು ಸಂಭವಿಸಿದ ಕಾಲ್ತುಳಿತ ದುರಂತದ ತನಿಖೆಯನ್ನು ನಡೆಸುತ್ತಿರುವ ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್‌ಮೆಂಟ್ (ಸಿಐಡಿ), ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಆಡಳಿತ ಮಂಡಳಿಯ ತರಾತುರಿಯ ನಿರ್ಧಾರವೇ  ಜನರ ಸಾವಿಗೆ ಕಾರಣವಾಗಿದೆ ಎಂದು ವರದಿಯಲ್ಲಿ ತಿಳಿಸಿದೆ. ಸಿಐಡಿ ಮೂಲಗಳ ಪ್ರಕಾರ, ಈ ವರದಿಗೆ ಇನ್ನಷ್ಟು ಸಾಕ್ಷಾಧಾರಗಳನ್ನು ಸಂಗ್ರಹಿಸಲಾಗುತ್ತಿದ್ದು, ತನಿಖೆ ಪೂರ್ಣಗೊಂಡ ನಂತರ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು.

ಘಟನೆಯ ಬಳಿಕ ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ (ಅನಾಮಿಕ ಸಾವು) ಪ್ರಕರಣ ದಾಖಲಾಗಿತ್ತು. ಮೃತರ ಕುಟುಂಬಸ್ಥರ ಆಕ್ರೋಶದ ಬೆನ್ನಲ್ಲೇ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ), ಡಿಎನ್‌ಎ ಇವೆಂಟ್ ಮ್ಯಾನೇಜ್‌ಮೆಂಟ್, ಮತ್ತು ಆರ್‌ಸಿಬಿ ಫ್ರಾಂಚೈಸಿಯ ವಿರುದ್ಧ ಎಫ್‌ಐಆರ್ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದರು. ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿತ್ತು. ರಾಜ್ಯ ಸರ್ಕಾರವು ಈ ಎರಡೂ ಪ್ರಕರಣಗಳ ತನಿಖೆಯನ್ನು ಸಿಐಡಿಗೆ ವಹಿಸಿತು.

ಸಿಐಡಿ ತನಿಖಾಧಿಕಾರಿಗಳು ಕಾಲ್ತುಳಿತಕ್ಕೆ ಕಾರಣವಾದ ಅಂಶಗಳನ್ನು ಪತ್ತೆ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮಗಳು ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಹರಿದಾಡಿದ ವಿಡಿಯೊಗಳನ್ನು ವಶಕ್ಕೆ ಪಡೆದು ಪರಿಶೀಲಿಸಲಾಗಿದೆ. ಕ್ರೀಡಾಂಗಣದ ಗೇಟ್‌ಗಳ ಬಳಿಯ ಅವ್ಯವಸ್ಥೆ, ಪೊಲೀಸ್ ನಿಯೋಜನೆಯ ಕೊರತೆ, ಮತ್ತು ನೂಕುನುಗ್ಗಲಿನ ಕಾರಣಗಳನ್ನು ವಿಶ್ಲೇಷಿಸಲಾಗಿದೆ. “ಆರ್‌ಸಿಬಿ ಐಪಿಎಲ್ ಟ್ರೋಫಿಯನ್ನು ಗೆದ್ದರೆ ಜೂನ್ 4ರಂದೇ ವಿಜಯೋತ್ಸವ ಆಯೋಜಿಸಬೇಕೆಂದು ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿತ್ತು. ಆರ್‌ಸಿಬಿ ಸಿಇಒ ರಾಜೇಶ್ ಮೆನನ್ ಮತ್ತು ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಈ ಕಾರ್ಯಕ್ರಮದ ಯೋಜನೆಯನ್ನು ರೂಪಿಸಿದ್ದರು. ವಿರಾಟ್ ಕೊಹ್ಲಿಯವರ ಒತ್ತಡದಿಂದಾಗಿ ನಿಖಿಲ್ ಸೋಸಲೆ ಕೆಎಸ್‌ಸಿಎ ಮೇಲೆ ಒತ್ತಡ ಹೇರಿದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ,” ಎಂದು ಸಿಐಡಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ | ಆರ್‌ಸಿಬಿ ವಿಜಯೋತ್ಸವ| ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಉಚಿತ ಟಿಕೆಟ್ ಘೋಷಣೆಯಿಂದ ಗೊಂದಲ: ಬಿ. ದಯಾನಂದ

ತನಿಖೆಯ ಪ್ರಕಾರ, ಪೊಲೀಸ್ ಇಲಾಖೆ ಮತ್ತು ಕೆಎಸ್‌ಸಿಎ ಕಾರ್ಯಕ್ರಮವನ್ನು ಮುಂದೂಡುವಂತೆ ಸಲಹೆ ನೀಡಿದ್ದವು. ಆದರೆ, ವಿರಾಟ್ ಕೊಹ್ಲಿಯವರು ಲಂಡನ್‌ಗೆ ತೆರಳಬೇಕಿರುವ ಕಾರಣ, ಕಾರ್ಯಕ್ರಮವನ್ನು ಮುಂದೂಡಿದರೆ ಕೊಹ್ಲಿ ಭಾಗವಹಿಸುವುದಿಲ್ಲ ಎಂದು ನಿಖಿಲ್ ಸೋಸಲೆ ಒತ್ತಡ ಹೇರಿದ್ದರು. ಈ ಒತ್ತಡದಿಂದಾಗಿ ಜೂನ್ 4ರಂದೇ ಕಾರ್ಯಕ್ರಮ ಆಯೋಜಿಸಲಾಯಿತು. ಆರ್‌ಸಿಬಿಯ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಉಚಿತ ಟಿಕೆಟ್ ಘೋಷಣೆಯಿಂದ ಲಕ್ಷಾಂತರ ಜನರು ಕ್ರೀಡಾಂಗಣದ ಬಳಿ ಜಮಾಯಿಸಿದ್ದರು, ಇದು ಗೊಂದಲಕ್ಕೆ ಕಾರಣವಾಯಿತು. ಈ ಘೋಷಣೆಗೂ ನಿಖಿಲ್ ಸೋಸಲೆಯವರೇ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕ್ರೀಡಾಂಗಣದ 21 ಗೇಟ್‌ಗಳ ಪೈಕಿ ಕೇವಲ ಮೂರು ಗೇಟ್‌ಗಳನ್ನು ತೆರೆಯಲಾಗಿತ್ತು, ಇದರಿಂದ ಜನಸಂದಣಿ ಉಂಟಾಗಿ ಕಾಲ್ತುಳಿತ ಸಂಭವಿಸಿತು. ಸಿಐಡಿ ವರದಿಯಲ್ಲಿ ಈ ಎಲ್ಲ ಅಂಶಗಳನ್ನು ವಿವರವಾಗಿ ದಾಖಲಿಸಲಾಗಿದೆ. ಈ ದುರಂತಕ್ಕೆ ಕಾರಣವಾದವರ ವಿರುದ್ಧ ಕಾನೂನು ಕ್ರಮಕ್ಕೆ ಸಿಐಡಿ ಶಿಫಾರಸು ಮಾಡಿದೆ. ರಾಜ್ಯ ಸರ್ಕಾರವು ಈ ಘಟನೆಗೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು, ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಡಿಕುನ್ಹಾ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »