ರಾಯಚೂರಿನಲ್ಲಿ 4,000 ವರ್ಷಗಳ ಹಿಂದಿನ ಜನವಸತಿ ಕುರುಹು ಪತ್ತೆ

ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಈಗ ನಾಲ್ಕುಸಾವಿರ ವರ್ಷಗಳ ಹಿಂದೆಯೇ ಜನವಸತಿ ಇತ್ತು ಎನ್ನುವ ಕುರುಹುಗಳು ಉತ್ಖನನದ ವೇಳೆ ಸಿಕ್ಕಿವೆ.
Maski 4000year old settlement
ಚಿತ್ರ ಕೃಪೆ : ಪ್ರಜಾವಾಣಿ

ಅಶೋಕನ ಶಿಲಾಶಾಸನದಿಂದ ಐತಿಹಾಸಿಕ ಸ್ಥಳವಾಗಿದ್ದ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಈಗ ನಾಲ್ಕುಸಾವಿರ ವರ್ಷಗಳ ಹಿಂದೆಯೇ ಜನವಸತಿ ಇತ್ತು ಎನ್ನುವ ಕುರುಹುಗಳು ಉತ್ಖನನದ ವೇಳೆ ಸಿಕ್ಕಿವೆ.

ಮೌರ್ಯ ಚಕ್ರವರ್ತಿ ಅಶೋಕನ ಕಾಲದ ಶಾಸನ ಮಸ್ಕಿಯನ್ನು ಮೊಟ್ಟಮೊದಲ ಬಾರಿಗೆ ಪುರಾತತ್ತ್ವ ಶಾಸ್ತ್ರದ ವ್ಯಾಪ್ತಿಗೆ ಸೇರಿಸಿತ್ತು. ಈಗ, ಅಮೆರಿಕ ಸಂಯುಕ್ತ ಸಂಸ್ಥಾನ, ಕೆನಡಾ ಮತ್ತು ಭಾರತದ 20ಕ್ಕೂ ಹೆಚ್ಚು ಸಂಶೋಧಕರ ತಂಡವು ಮಸ್ಕಿ ಪಟ್ಟಣದಲ್ಲಿ 4,000 ವರ್ಷಗಳಷ್ಟು ಹಿಂದಿನ ಮಾನವ ವಸತಿ ಇತ್ತು ಎಂಬುದಕ್ಕೆ ಪುರಾವೆಗಳನ್ನು ಕಂಡುಕೊಂಡಿದೆ.

ಸಂಶೋಧಕರ ತಂಡ ಕಳೆದ ಮೂರು ತಿಂಗಳಿನಿಂದ ಇಲ್ಲಿನ ಮಲ್ಲಿಕಾರ್ಜುನ ಬೆಟ್ಟ, ಬಯಲು ಆಂಜನೇಯ ದೇವಸ್ಥಾನದ ಸುತ್ತಲಿನ ಪ್ರದೇಶದಲ್ಲಿ ನಡೆಸಿದ ಉತ್ಖನನ ಹಾಗೂ ಸಂಶೋಧನೆ ನಡೆಸುತ್ತಿದೆ. 

ಉತ್ಖನನ ಹಾಗೂ ಸಂಶೋಧನೆಗಾಗಿ ತಂಡ ಇಲ್ಲಿನ 271ಸ್ಥಳಗಳನ್ನು ಗುರುತಿಸಿ, ಆ ಸ್ಥಳಗಳಲ್ಲಿ ಭೂಮಿ ಅಗೆದಾಗ ವಿವಿಧ ಕಾಲಘಟ್ಟದ ಜನವಸತಿ ಇತ್ತು ಎಂಬುದು ದೃಢಪಟ್ಟಿದೆ. ಕ್ರಿ.ಪೂ 11 ಮತ್ತು 14ನೇ ಶತಮಾನಗಳ ನಡುವೆ ಜನರು ಇಲ್ಲಿ ವಾಸಿಸುತ್ತಿದ್ದರು ಎಂಬುದನ್ನು ದೃಢಪಡಿಸುವ ಪುರಾವೆಗಳನ್ನು ಸಂಶೋಧಕರು ಕಂಡುಕೊಂಡಿದ್ದಾರೆ.

ಜನರ ಜೀವನ ಮಟ್ಟ, ಆಹಾರ ಪದ್ಧತಿ ಹಾಗೂ ಅವರು ಬಳಸುತ್ತಿದ್ದ ಮನೆಗಳ ಆಕಾರ, ಮಣ್ಣಿನ ಮಡಕೆ ಸೇರಿದಂತೆ ಅನೇಕ ವಸ್ತುಗಳು ಪತ್ತೆಯಾಗಿವೆ. ಹೆಚ್ಚಿನ ಸಂಶೋಧನೆಗಾಗಿ ಅವುಗಳನ್ನು ಸಂಗ್ರಹಿಸಲಾಗಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಇದನ್ನೂ ಓದಿ | ಕೇತಗಾನಹಳ್ಳಿ ಭೂ ಪ್ರಕರಣ: ಕುಮಾರಸ್ವಾಮಿಗೆ ಸುಪ್ರೀಂಕೋರ್ಟ್‌ನಿಂದ ರಿಲೀಫ್

ಕೇಂದ್ರ ಪುರಾತತ್ವ ಇಲಾಖೆಯ ಅನುಮತಿ ಪಡೆದ ಅಮೆರಿಕದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಆ್ಯಂಡ್ರಿಮ್ ಎಂ. ಬವೆರ್, ಕೆನಡಾದ ಮ್ಯಾಕ್ ಗಿಲ್ ವಿಶ್ವವಿದ್ಯಾಲಯದ ಪೀಟರ್ ಜಿ. ಜೋಹಾನ್ಸನ್ ಹಾಗೂ ದೆಹಲಿಯ ನೊಯಿಡಾ ವಿಶ್ವವಿದ್ಯಾಲಯದ ಹೇಮಂತ್ ಕಡಾಂಬಿ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳ ತಂಡ ಈ ಭಾಗದಲ್ಲಿ ಉತ್ಖನನ ಮಾಡಿ ಪ್ರಾಚೀನ ಕಾಲದಲ್ಲಿ ಬಳಕೆಯಲ್ಲಿದ್ದ ಪಳಿಯುಳಿಕೆಗಳನ್ನು ಸಂಗ್ರಹಿಸುತ್ತಿದೆ.

Share:

ಮತ್ತಷ್ಟು ಸುದ್ದಿ

ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮ

ಅಲೆದಾಟ ಮುಕ್ತ ಆಡಳಿತದತ್ತ ಮೇಲುಕೋಟೆ ಮನೆ ಬಾಗಿಲಿಗೇ ಬಂದ ‘ಸರ್ಕಾರಿ ಸೇವೆ’ ಕಾರ್ಯಕ್ರಮ  ತಂತ್ರಜ್ಞಾನದ ಅರಿವನ್ನು ಆಡಳಿತ ಯಂತ್ರಕ್ಕೆ ವರ್ಗಾಯಿಸಿದ

ಬೆಂಗಳೂರಿನಲ್ಲಿ ಮೇ 25 ರಂದು 3ನೇ ಕರ್ನಾಟಕ ಸಂಘಟಕರ ಸಮಾವೇಶ

ಸಾಂಸ್ಕೃತಿಕ ನೀತಿ ಜಾರಿ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಆಗ್ರಹಿಸಿ ರಂಗಕರ್ಮಿಗಳು ಹಾಗೂ ಸಾಂಸ್ಕೃತಿಕ ಸಂಘಟಕರ ಬೃಹತ್‌ ಸಮಾಲೋಚನೆ ಬೆಂಗಳೂರು: ಕರ್ನಾಟಕ

ಮುಂದೆ ಓದಿ »

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »