ನೂತನ ಡಿಸಿಪಿ ನಾರಾಯಣ ಬರಮಣಿಗೆ ಕರವೇ ಗಜಸೇನೆಯಿಂದ ಸ್ವಾಗತ

ಬೆಳಗಾವಿಯ ನೂತನ ಉಪ ಪೊಲೀಸ್ ಆಯುಕ್ತರಾಗಿ (ಡಿಸಿಪಿ) ಆಗಮಿಸಿರುವ ನಾರಾಯಣ ಬರಮಣಿ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಗಜ ಸೇನೆಯಿಂದ ಆತ್ಮೀಯ ಸ್ವಾಗತವನ್ನು ಕೋರಲಾಯಿತು.
Narayan barmani promotion

ಬೆಳಗಾವಿಯ ಕಾನೂನು ಸುವ್ಯವಸ್ಥೆ ವಿಭಾಗದ ನೂತನ ಉಪ ಪೊಲೀಸ್ ಆಯುಕ್ತರಾಗಿ (ಡಿಸಿಪಿ) ಆಗಮಿಸಿರುವ ನಾರಾಯಣ ಬರಮಣಿ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಗಜ ಸೇನೆಯಿಂದ ಆತ್ಮೀಯ ಸ್ವಾಗತವನ್ನು ಕೋರಲಾಯಿತು. ಧಾರವಾಡದಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕರಾಗಿ (ಎಎಸ್‌ಪಿ) ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದ ಬರಮಣಿ ಅವರಿಗೆ ಈ ಬಡ್ತಿಯನ್ನು ಕರ್ನಾಟಕ ಸರ್ಕಾರವು ಇತ್ತೀಚೆಗೆ ಘೋಷಿಸಿತು. ಧಾರವಾಡದಲ್ಲಿ ಎಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದ ಬರಮಣಿ, 2007ರಲ್ಲಿ ಕುಖ್ಯಾತ ರೌಡಿ ಪ್ರವೀಣ್ ಶಿಂತ್ರೆ ಎನ್‌ಕೌಂಟರ್‌ನ ನೇತೃತ್ವ ವಹಿಸಿದ್ದರು.

ಬೆಳಗಾವಿಯಲ್ಲಿ ಏಪ್ರಿಲ್‌ನಲ್ಲಿ ನಡೆದ ಕಾಂಗ್ರೆಸ್‌ ಪ್ರತಿಭಟನಾ ಸಮಾವೇಶದಲ್ಲಿ, ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದ್ದರು. ಈ ಘಟನೆಯ ಸಂದರ್ಭದಲ್ಲಿ, ಭದ್ರತಾ ವ್ಯವಸ್ಥೆಯ ವೈಫಲ್ಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡದ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ನಾರಾಯಣ ಬರಮಣಿ ಅವರನ್ನು ವೇದಿಕೆಗೆ ಕರೆದು ಸಾರ್ವಜನಿಕವಾಗಿ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರು. ಈ ಘಟನೆಯಿಂದ ಅವಮಾನಕ್ಕೊಳಗಾದ ಬರಮಣಿ ಅವರು ಸ್ವಯಂ ನಿವೃತ್ತಿಗೆ (ವಿಆರ್‌ಎಸ್) ಮನವಿ ಸಲ್ಲಿಸಿದ್ದರು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ದೂರವಾಣಿ ಮೂಲಕ ಮಾತನಾಡಿ, ಉದ್ದೇಶಪೂರ್ವಕವಾಗಿ ಆ ರೀತಿ ವರ್ತಿಸಿಲ್ಲ ಎಂದು ಸಮಾಧಾನಪಡಿಸಿದ್ದರು. ಇದರಿಂದ ಬರಮಣಿ ಅವರು ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದರು.

ಇದನ್ನೂ ಓದಿ | ಶಿಗ್ಗಾವಿಯಲ್ಲಿ ಕರವೇ ಗಜಸೇನೆಯಿಂದ ದ್ವಿಭಾಷಾ ನೀತಿಗೆ ಒತ್ತಾಯ: ತಹಶೀಲ್ದಾರ್‌ಗೆ ಮನವಿ

ಬರಮಣಿ ಅವರ ಪ್ರತಿಕ್ರಿಯೆ

ನಾರಾಯಣ ಬರಮಣಿ ಅವರು ತಮ್ಮ ವರ್ಗಾವಣೆ ಕುರಿತು ಪ್ರತಿಕ್ರಿಯಿಸಿದ್ದು, “ಸರ್ಕಾರವು ಡಿಸಿಪಿಯಾಗಿ ವರ್ಗಾವಣೆ ಆದೇಶವನ್ನು ಹೊರಡಿಸಿದೆ. ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆಯ ನಿರ್ವಹಣೆಗೆ ಅವಕಾಶವನ್ನು ನೀಡಲಾಗಿದೆ. ಹಿರಿಯ ಅಧಿಕಾರಿಗಳ ಸಲಹೆ-ಸೂಚನೆಗಳನ್ನು ಪಾಲಿಸಿಕೊಂಡು ಕೆಲಸ ಮಾಡುತ್ತೇನೆ” ಎಂದು ಹೇಳಿದ್ದಾರೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »