ಕೇರಳದ  ಮಾಜಿ ಮುಖ್ಯಮಂತ್ರಿ ವಿ.ಎಸ್.ಅಚ್ಯುತಾನಂದನ್ ನಿಧನ  

ಕೇರಳದ ಮಾಜಿ ಮುಖ್ಯಮಂತ್ರಿ ಮತ್ತು ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಸ್ಥಾಪಕರಾದ   ವಿ.ಎಸ್.ಅಚ್ಯುತಾನಂದನ್ ಅವರು ಸೋಮವಾರ ತಿರುವನಂತಪುರಂನಲ್ಲಿ ನಿಧನರಾದರು.
VS Achuthanandan Death 

ಕೇರಳದ ಮಾಜಿ ಮುಖ್ಯಮಂತ್ರಿ ಮತ್ತು ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಸ್ಥಾಪಕ ನಾಯಕರಾದ   ವಿ.ಎಸ್.ಅಚ್ಯುತಾನಂದನ್ ಅವರು ಸೋಮವಾರ (ಜುಲೈ 21, 2025) ತಿರುವನಂತಪುರಂನ ಎಸ್‌ಯುಟಿ ಆಸ್ಪತ್ರೆಯಲ್ಲಿ ನಿಧನರಾದರು. 101 ವರ್ಷದವರಾಗಿದ್ದ ಅವರು ಜೂನ್ 23, 2025ರಂದು ತೀವ್ರ ಹೃದಯಾಘಾತಕ್ಕೊಳಗಾಗಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3:20ಕ್ಕೆ ಕೊನೆಯುಸಿರೆಳೆದರು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ದೃಢಪಡಿಸಿದ್ದಾರೆ.

1923ರ ಅಕ್ಟೋಬರ್ 20ರಂದು ಆಲಪ್ಪುಳ ಜಿಲ್ಲೆಯ ಪುನ್ನಪ್ರದಲ್ಲಿ ಶಂಕರನ್ ಮತ್ತು ಅಕ್ಕಮ್ಮ ದಂಪತಿಗಳಿಗೆ ಜನಿಸಿದ ವಿ.ಎಸ್, ಬಾಲ್ಯದಲ್ಲಿ ತಾಯಿಯನ್ನು ಕಳೆದುಕೊಂಡು ಕಷ್ಟದ ಜೀವನ ನಡೆಸಿದರು. ಕೇವಲ ಏಳನೇ ತರಗತಿಯವರೆಗೆ ಶಿಕ್ಷಣ ಪಡೆದ ಇವರು 1939ರಲ್ಲಿ ರಾಜಕೀಯ ಚಳವಳಿಗೆ ಕಾಲಿಟ್ಟರು. 1940ರಲ್ಲಿ ಕಮ್ಯುನಿಸ್ಟ್ ಪಕ್ಷಕ್ಕೆ ಸೇರಿದರು. 1946ರ ಪುನ್ನಪ್ರ-ವಯಲಾರ್ ದಂಗೆಯಲ್ಲಿ ಪಾಲ್ಗೊಂಡ ಅವರು, 1964ರಲ್ಲಿ ಸಿಪಿಐನಿಂದ ಒಡಕುಗೊಂಡು ಸಿಪಿಐ(ಎಂ) ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ 32 ನಾಯಕರಲ್ಲಿ ಒಬ್ಬರಾಗಿದ್ದರು.

ಕೇರಳದ ರಾಜಕಾರಣದಲ್ಲಿ ಐದು ದಶಕಗಳಿಗೂ ಹೆಚ್ಚು ಕಾಲ ಪ್ರಾಬಲ್ಯ ಹೊಂದಿದ್ದ ವಿ.ಎಸ್., 1967, 1970, 1991, 2001, 2006, 2011 ಮತ್ತು 2016ರಲ್ಲಿ ಏಳು ಬಾರಿ ಶಾಸಕರಾಗಿ ಆಯ್ಕೆಯಾದರು. 2006ರಿಂದ 2011ರವರೆಗೆ ಕೇರಳದ 20ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಅವರು, 1991-1996, 2001-2006 ಮತ್ತು 2011-2016ರಲ್ಲಿ ಮೂರು ಬಾರಿ ವಿಪಕ್ಷ ನಾಯಕರಾಗಿದ್ದರು.

ಇದನ್ನೂ ಓದಿ | ಕನ್ನಡ ಚಿತ್ರರಂಗದ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ವಿಧಿವಶ 

ಸಿಪಿಐ(ಎಂ)ನಲ್ಲಿ ತಮ್ಮ ದೃಢನಿಲುವಿನಿಂದಾಗಿ ವಿವಾದಗಳಿಗೆ ಒಳಗಾದರೂ, ಅವರ ಸರಳತೆ ಮತ್ತು ಭ್ರಷ್ಟಾಚಾರ ವಿರುದ್ಧದ ಹೋರಾಟವು ಜನರ ಮನಗೆದ್ದಿತು. ಕೇರಳದ ಪ್ರಸ್ತುತ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.  

ಕೇರಳದ ರಾಜಕೀಯದಲ್ಲಿ ಅವರ ಕೊಡುಗೆ ಅವಿಸ್ಮರಣೀಯವಾಗಿದೆ. ಅವರ ನಿಧನದಿಂದ ಕೇರಳ ಕಮ್ಯುನಿಸ್ಟ್ ಚಳವಳಿಯ ಒಂದು ಯುಗ ಕೊನೆಗೊಂಡಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

 

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »