ಕುಸುಮ್ ಬಿ ಯೋಜನೆ| 40,000 ಸೌರ ಪಂಪ್‌ಸೆಟ್‌ಗಳಿಗೆ ಅನುಮೋದನೆ

ಕರ್ನಾಟಕದ ರೈತರಿಗೆ ಸೌರ ಶಕ್ತಿಯ ಮೂಲಕ ಇಂಧನ ಸ್ವಾವಲಂಬನೆ ಸಾಧಿಸಲು ಸಹಾಯವಾಗುವ 'ಕುಸುಮ್ ಬಿ' ಯೋಜನೆಯಡಿ 40,000 ಸೌರ ಕೃಷಿ ಪಂಪ್‌ಸೆಟ್‌ಗಳಿಗೆ ಅನುಮೋದನೆ ನೀಡಲಾಗಿದೆ.
Kusum B Scheme Karnataka

ಕರ್ನಾಟಕದ ರೈತರಿಗೆ ಸೌರ ಶಕ್ತಿಯ ಮೂಲಕ ಇಂಧನ ಸ್ವಾವಲಂಬನೆ ಸಾಧಿಸಲು ಸಹಾಯವಾಗುವ ‘ಕುಸುಮ್ ಬಿ’ ಯೋಜನೆಯಡಿ 40,000 ಸೌರ ಕೃಷಿ ಪಂಪ್‌ಸೆಟ್‌ಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನ ಶಕ್ತಿ ಭವನದಲ್ಲಿ ಮಂಗಳವಾರ ನಡೆದ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

ಕುಸುಮ್ ಬಿ ಯೋಜನೆಯಡಿ ಸೌರ ಕೃಷಿ ಪಂಪ್‌ಸೆಟ್‌ಗಳ ಅಳವಡಿಕೆಗೆ ಕೇಂದ್ರ ಸರಕಾರ ಶೇ.30 ಮತ್ತು ರಾಜ್ಯ ಸರಕಾರ ಶೇ.50ರಷ್ಟು ಸಬ್ಸಿಡಿ ಒದಗಿಸಲಿದೆ, ಫಲಾನುಭವಿಗಳು ಉಳಿದ ಶೇ.20ರಷ್ಟು ವೆಚ್ಚವನ್ನು ಭರಿಸಬೇಕು. ಈ ಯೋಜನೆಗಾಗಿ ರಾಜ್ಯ ಸರಕಾರವು ₹752 ಕೋಟಿ ವೆಚ್ಚವನ್ನು ಒದಗಿಸಲಿದೆ. ಸುಮಾರು 25,000 ರೈತರು ಈ ಯೋಜನೆಯಡಿ ಹೆಚ್ಚುವರಿಯಾಗಿ ಅರ್ಜಿ ಸಲ್ಲಿಸಿದ್ದಾರೆ. ಇದು ರೈತರಲ್ಲಿ ಈ ಯೋಜನೆಯ ಬಗ್ಗೆ ಇರುವ ಉತ್ಸಾಹವನ್ನು ತೋರಿಸುತ್ತದೆ. ಯೋಜನೆಯ ಸಮರ್ಪಕ ಅನುಷ್ಠಾನದಿಂದ ಸಬ್ಸಿಡಿ ಮೊತ್ತವನ್ನು ಕ್ರಮೇಣ ಕಡಿಮೆ ಮಾಡುವ ಸಾಧ್ಯತೆಯಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದಲ್ಲಿ 4.5 ಲಕ್ಷ ಅನಧಿಕೃತ ಐಪಿ (ನೀರಾವರಿ ಪಂಪ್‌ಸೆಟ್‌) ಸಂಪರ್ಕಗಳಿದ್ದು, ಇವುಗಳಲ್ಲಿ 2 ಲಕ್ಷ ಸಂಪರ್ಕಗಳನ್ನು ಈಗಾಗಲೇ ಅಧಿಕೃತಗೊಳಿಸಲಾಗಿದೆ. ಉಳಿದ ಅನಧಿಕೃತ ಐಪಿ ಸೆಟ್‌ಗಳನ್ನು ಕುಸುಮ್ ಬಿ ಯೋಜನೆಯ ವ್ಯಾಪ್ತಿಗೆ ಆದ್ಯತೆಯ ಮೇರೆಗೆ ತರಲು ಕ್ರಮ ಕೈಗೊಳ್ಳಲಾಗುವುದು. ಈ ಕ್ರಮವು ರೈತರಿಗೆ ಶಾಶ್ವತ ವಿದ್ಯುತ್ ಪರಿಹಾರವನ್ನು ಒದಗಿಸಲಿದೆ ಮತ್ತು ಉಚಿತ ವಿದ್ಯುತ್‌ನ ಭಾರವನ್ನು ಕಡಿಮೆ ಮಾಡಲಿದೆ. 2024-25ರ ಸಾಲಿನಲ್ಲಿ ನೀರಾವರಿ ಪಂಪ್‌ಸೆಟ್‌ಗಳಿಗೆ ₹12,785 ಕೋಟಿ ಅನುದಾನವನ್ನು ಹಂಚಿಕೆ ಮಾಡಲಾಗಿದ್ದು, ಫೆಬ್ರವರಿ 2025ರ ವರೆಗೆ ₹11,720 ಕೋಟಿ ಬಿಡುಗಡೆಯಾಗಿದೆ. 2025-26ರ ಆಯವ್ಯಯದಲ್ಲಿ ₹16,021 ಕೋಟಿಯನ್ನು ಈ ಯೋಜನೆಗೆ ಮೀಸಲಿಡಲಾಗಿದೆ.

ಇದನ್ನೂ ಓದಿ | ಕರ್ನಾಟಕದಲ್ಲಿ 2028ರಲ್ಲಿಯೂ ಕಾಂಗ್ರೆಸ್ ಅಧಿಕಾರ: ಸಿದ್ದರಾಮಯ್ಯ

ಈ ಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕುಸುಮ್ ಬಿ ಯೋಜನೆಯು ಕೇಂದ್ರ ಸರಕಾರದ ಪಿಎಂ-ಕುಸುಮ್ ಯೋಜನೆಯ ಒಂದು ಭಾಗವಾಗಿದ್ದು, ರಾಜ್ಯದ ರೈತರಿಗೆ ಆರ್ಥಿಕ ಮತ್ತು ಪರಿಸರಾತ್ಮಕ ಪ್ರಯೋಜನಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.  

Share:

ಮತ್ತಷ್ಟು ಸುದ್ದಿ

ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮ

ಅಲೆದಾಟ ಮುಕ್ತ ಆಡಳಿತದತ್ತ ಮೇಲುಕೋಟೆ ಮನೆ ಬಾಗಿಲಿಗೇ ಬಂದ ‘ಸರ್ಕಾರಿ ಸೇವೆ’ ಕಾರ್ಯಕ್ರಮ  ತಂತ್ರಜ್ಞಾನದ ಅರಿವನ್ನು ಆಡಳಿತ ಯಂತ್ರಕ್ಕೆ ವರ್ಗಾಯಿಸಿದ

ಬೆಂಗಳೂರಿನಲ್ಲಿ ಮೇ 25 ರಂದು 3ನೇ ಕರ್ನಾಟಕ ಸಂಘಟಕರ ಸಮಾವೇಶ

ಸಾಂಸ್ಕೃತಿಕ ನೀತಿ ಜಾರಿ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಆಗ್ರಹಿಸಿ ರಂಗಕರ್ಮಿಗಳು ಹಾಗೂ ಸಾಂಸ್ಕೃತಿಕ ಸಂಘಟಕರ ಬೃಹತ್‌ ಸಮಾಲೋಚನೆ ಬೆಂಗಳೂರು: ಕರ್ನಾಟಕ

ಮುಂದೆ ಓದಿ »

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »