ಡಾ. ರಾಜಕುಮಾರ್ ಅವರ ಸಹೋದರಿ ನಾಗಮ್ಮ ನಿಧನ

ಡಾ. ರಾಜಕುಮಾರ್ ಅವರ ಸಹೋದರಿ ನಾಗಮ್ಮ (94) ಅವರು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಗಾಜನೂರಿನ ತಮ್ಮ ಸ್ವಗೃಹದಲ್ಲಿ ವಯೋಸಹಜ ಖಾಯಿಲೆಯಿಂದ ನಿಧನರಾದರು.
 Nagamma Death 

ಕನ್ನಡ ಚಿತ್ರರಂಗದ ವರನಟ ಡಾ. ರಾಜಕುಮಾರ್ ಅವರ ಸಹೋದರಿ ನಾಗಮ್ಮ (94) ಅವರು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಗಾಜನೂರಿನ ತಮ್ಮ ಸ್ವಗೃಹದಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ನಾಲ್ವರು ಪುತ್ರರು, ಇಬ್ಬರು ಪುತ್ರಿಯರು, ಹಾಗೂ ಮೊಮ್ಮಕ್ಕಳು ಇದ್ದಾರೆ. ನಾಗಮ್ಮ ಅವರ ಅಂತ್ಯಕ್ರಿಯೆ ಶನಿವಾರ, ಆಗಸ್ಟ್ 2ರಂದು ಗಾಜನೂರಿನಲ್ಲಿ ನಡೆಯಲಿದೆ.

ಇದನ್ನೂ ಓದಿ | ಕನ್ನಡ ಚಿತ್ರರಂಗದ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ವಿಧಿವಶ 

ನಾಗಮ್ಮ ಅವರು ಡಾ. ರಾಜಕುಮಾರ್ ಕುಟುಂಬದ ಕೊನೆಯ ಹಿರಿಯ ಸದಸ್ಯರಾಗಿದ್ದರು. ಸಿಂಗಾನಲ್ಲೂರು ಪುಟ್ಟಸ್ವಾಮಯ್ಯ ಮತ್ತು ಲಕ್ಷ್ಮಮ್ಮ ಅವರ ನಾಲ್ವರು ಮಕ್ಕಳಾದ ಡಾ. ರಾಜಕುಮಾರ್, ಎಸ್.ಪಿ. ವರದರಾಜು, ಶಾರದಮ್ಮ, ಮತ್ತು ನಾಗಮ್ಮ ಅವರಲ್ಲಿ ಕೊನೆಯವರಾಗಿದ್ದರು. ಗಾಜನೂರಿನಲ್ಲಿ ಕುಟುಂಬದೊಂದಿಗೆ ವಾಸಿಸುತ್ತಿದ್ದ ನಾಗಮ್ಮ, ರಾಜಕುಮಾರ್ ಕುಟುಂಬದ ಸದಸ್ಯರಾದ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್, ಮತ್ತು ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಪ್ರೀತಿಯ ತಾಯಿಯಂತೆ ಇದ್ದರು. ಕರ್ನಾಟಕ-ತಮಿಳುನಾಡು ಗಡಿಯ ಗಾಜನೂರಿನಲ್ಲಿ ನಾಗಮ್ಮನವರು ತಮ್ಮ ಕುಟುಂಬದೊಂದಿಗೆ  ಜೀವನ ನಡೆಸುತ್ತಿದ್ದರು.  

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »