ಚೀನಾ ಭೂ ಕಬಳಿಕೆ ಹೇಳಿಕೆಗೆ ಸುಪ್ರೀಂ ಕೋರ್ಟ್‌ ರಾಹುಲ್‌ಗೆ ತರಾಟೆ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಚೀನಾದಿಂದ ಭಾರತದ 2,000 ಚದರ ಕಿಲೋಮೀಟರ್ ಭೂಮಿ ಕಬಳಿಕೆಯ ಆರೋಪಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
Rahul Gandhi 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಚೀನಾದಿಂದ ಭಾರತದ 2,000 ಚದರ ಕಿಲೋಮೀಟರ್ ಭೂಮಿ ಕಬಳಿಕೆಯ ಆರೋಪಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ರಾಹುಲ್ ಗಾಂಧಿ ಅವರ ಈ ಹೇಳಿಕೆಯ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಆದರೆ, ಕೋರ್ಟ್ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದ್ದು, “ಚೀನಿಯರು 2,000 ಚದರ ಕಿಮೀ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ನಿಮಗೆ ಹೇಗೆ ತಿಳಿಯಿತು? ನೀವು ನಿಜವಾದ ಭಾರತೀಯರಾಗಿದ್ದರೆ, ಇಂತಹ ಹೇಳಿಕೆಗಳನ್ನು ನೀಡುವುದಿಲ್ಲ” ಎಂದು ಕಿಡಿಕಾರಿದೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ಈ ವಿಚಾರಣೆಯನ್ನು ನಡೆಸಿತು. ರಾಹುಲ್ ಗಾಂಧಿ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, “ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಈ ವಿಷಯಗಳನ್ನು ಎತ್ತದಿದ್ದರೆ, ಅದು ದುರದೃಷ್ಟಕರ ಸನ್ನಿವೇಶವಾಗುತ್ತದೆ” ಎಂದು ವಾದಿಸಿದರು. ಆದರೆ, ಕೋರ್ಟ್ ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, “ನೀವು ಈ ವಿಷಯಗಳನ್ನು ಸಂಸತ್ತಿನಲ್ಲಿ ಚರ್ಚಿಸಬೇಕು, ಸಾಮಾಜಿಕ ಜಾಲತಾಣಗಳಲ್ಲಿ ಏಕೆ ಹೇಳಬೇಕು?” ಎಂದು ಪ್ರಶ್ನಿಸಿತು.

ರಾಹುಲ್ ಗಾಂಧಿಯವರ ಹೇಳಿಕೆಯು ಭಾರತ-ಚೀನಾ ಗಡಿಯಲ್ಲಿ 2020ರ ಗಾಲ್ವಾನ್ ಕಣಿವೆ ಘರ್ಷಣೆಯ ಸಂದರ್ಭವನ್ನು ಉಲ್ಲೇಖಿಸಿತ್ತು, ಇದರಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದರು. ಈ ಘಟನೆಯನ್ನು ಉಲ್ಲೇಖಿಸಿ, ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಚೀನಾಕ್ಕೆ “ಶರಣಾಗತಿ” ನೀತಿಯನ್ನು ಅನುಸರಿಸಿದೆ ಎಂದು ಟೀಕಿಸಿದ್ದರು.  

2022ರ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ, ಚೀನಾದ ಸೈನಿಕರು ಭಾರತದ ಭೂಮಿಯನ್ನು ಆಕ್ರಮಿಸಿದ್ದಾರೆ ಮತ್ತು ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೈನಿಕರನ್ನು “ತೀವ್ರವಾಗಿ ಥಳಿಸಿದ್ದಾರೆ” ಎಂದು ಆರೋಪಿಸಿದ್ದರು. ಈ ಹೇಳಿಕೆಯು ಭಾರತೀಯ ಸೇನೆಯ ಬಗ್ಗೆ ಅವಮಾನಕರ ಎಂದು ಆರೋಪಿಸಿ, ಮಾಜಿ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ನಿರ್ದೇಶಕ ಉದಯ್ ಶಂಕರ್ ಶ್ರೀವಾಸ್ತವ್ ಎಂಬುವರು ಉತ್ತರ ಪ್ರದೇಶದಲ್ಲಿ ಮಾನನಷ್ಟ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಲಕ್ನೋದ ವಿಶೇಷ ನ್ಯಾಯಾಲಯವು ರಾಹುಲ್ ಗಾಂಧಿಗೆ ಸಮನ್ಸ್ ಜಾರಿಗೊಳಿಸಿತ್ತು.

ಇದನ್ನೂ ಓದಿ | ಭಾರತದ ಆರ್ಥಿಕತೆ ‘ಸತ್ತಿದೆ’ : ರಾಹುಲ್ ಗಾಂಧಿ ತೀವ್ರ ಟೀಕೆ

ಈ ಹಿಂದೆ, ಮೇ 2025ರಲ್ಲಿ, ಅಲಹಾಬಾದ್ ಹೈಕೋರ್ಟ್ ರಾಹುಲ್ ಗಾಂಧಿಯವರ ಅರ್ಜಿಯನ್ನು ತಿರಸ್ಕರಿಸಿತ್ತು. ಈ ದೂರು ದುರುದ್ದೇಶದಿಂದ ಕೂಡಿದೆ ಎಂದು ಗಾಂಧಿ ವಾದಿಸಿದ್ದರೂ, ಹೈಕೋರ್ಟ್ ಈ ವಿಷಯದಲ್ಲಿ ತಲೆಗೊಡದಿರಲು ನಿರ್ಧರಿಸಿತು. ಆದರೆ, ಸುಪ್ರೀಂ ಕೋರ್ಟ್ ಈಗ ಈ ಮಾನನಷ್ಟ ಕೇಸ್‌ನ ವಿಚಾರಣೆಯನ್ನು ಸ್ಥಗಿತಗೊಳಿಸಿದ್ದು, ಉತ್ತರ ಪ್ರದೇಶ ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್ ಜಾರಿಗೊಳಿಸಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »