ಆಯುಷ್ ಔಷಧಿಗಳಿಗೆ FDAನ ಕಠಿಣ ನಿಯಂತ್ರಣ: ಕರ್ನಾಟಕದ ದಿಟ್ಟ ನಡೆ

ಸಚಿವ ದಿನೇಶ್ ಗುಂಡೂರಾವ್ ಅವರು ಆಯುಷ್ ಇಲಾಖೆಯ ಆಯುರ್ವೇದ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿ ವಿಭಾಗಗಳ ಎಲ್ಲ ಔಷಧಿಗಳನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್ ಡಿಎ) ಇಲಾಖೆಯ ಔಷಧ ನಿಯಂತ್ರಣ ವಿಭಾಗದ ಅಡಿಯಲ್ಲಿ ಒಗ್ಗೂಡಿಸುವ ನಿರ್ಧಾರವನ್ನು ಘೋಷಿಸಿದ್ದಾರೆ.
ayush medicines fda

ಕರ್ನಾಟಕ ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆಯುಷ್ ಇಲಾಖೆಯ ಆಯುರ್ವೇದ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿ ವಿಭಾಗಗಳ ಎಲ್ಲ ಔಷಧಿಗಳನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್ ಡಿಎ) ಇಲಾಖೆಯ ಔಷಧ ನಿಯಂತ್ರಣ ವಿಭಾಗದ ಅಡಿಯಲ್ಲಿ ಒಗ್ಗೂಡಿಸುವ ನಿರ್ಧಾರವನ್ನು ಘೋಷಿಸಿದ್ದಾರೆ. ಈ ಕ್ರಮವು ಔಷಧಿಗಳ ಗುಣಮಟ್ಟವನ್ನು ಉನ್ನತೀಕರಿಸುವ ಗುರಿಯನ್ನು ಹೊಂದಿದೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸಚಿವ ಗುಂಡೂರಾವ್, ಗುಣಮಟ್ಟವಿಲ್ಲದ ಔಷಧಿಗಳನ್ನು ಮಾರುಕಟ್ಟೆಯಿಂದ ತ್ವರಿತವಾಗಿ ಹಿಂಪಡೆಯುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ ಎಂದು ವಿವರಿಸಿದರು. ಈ ಹಿಂದೆ, ಒಂದು ಔಷಧವನ್ನು ಕಡಿಮೆ ಗುಣಮಟ್ಟದ್ದು ಎಂದು ಗುರುತಿಸಿದರೆ, ಅದನ್ನು ಔಷಧಾಲಯಗಳು ಮತ್ತು ವಿತರಕರಿಂದ ಹಿಂದಕ್ಕೆ ಪಡೆಯಲು 30 ದಿನಗಳ ಕಾಲಾವಕಾಶವಿತ್ತು. ಆದರೆ, ಈಗ ಈ ಅವಧಿಯನ್ನು ಕೇವಲ ಎರಡು ದಿನಗಳಿಗೆ ಕಡಿಮೆಗೊಳಿಸಲಾಗಿದೆ. ಈ ಕ್ರಮದ ಫಲಿತಾಂಶವಾಗಿ, ಸುಮಾರು 40,48,436 ರೂಪಾಯಿ ಮೌಲ್ಯದ ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಹಿಂಪಡೆದು ಜಪ್ತಿ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಜೂನ್ 24 ಮತ್ತು 25ರಂದು ಔಷಧ ಆಡಳಿತದ ಅಮಲು ಜಾರಿ ಅಧಿಕಾರಿಗಳು ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟಲು 279 ವಿಶೇಷ ಪರಿಶೀಲನೆಗಳನ್ನು ಮಾಡಿದ್ದಾರೆ. ಈ ಪರಿಶೀಲನೆಯಲ್ಲಿ 231 ಪ್ರಕರಣಗಳಲ್ಲಿ ಉಲ್ಲಂಘನೆ ಕಂಡುಬಂದಿದ್ದು, ಈ ಸಂಬಂಧ ಶೋಕಾಸ್ ನೋಟೀಸ್‌ಗಳನ್ನು ಜಾರಿಗೊಳಿಸಲಾಗಿದೆ. ಇದರ ಜೊತೆಗೆ, 15 ಔಷಧ ಮಳಿಗೆಗಳಿಗೆ ಆಜ್ಞಾಪಾಲನೆ ಪತ್ರಗಳನ್ನು (ಕಂಪ್ಲೈನ್ಸ್ ಲೆಟರ್) ನೀಡಲಾಗಿದೆ. ಔಷಧ ಮತ್ತು ಕಾಸ್ಮೆಟಿಕ್ ಅಧಿನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 29 ಸಂಸ್ಥೆಗಳ ವಿರುದ್ಧ ನ್ಯಾಯಾಲಯಗಳಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಎಂದು ಗುಂಡೂರಾವ್ ತಿಳಿಸಿದರು.

ಇದನ್ನೂ ಓದಿ | ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರಕ್ಕೆ ಬ್ರೇಕ್: HCನಿಂದ ಆಗಸ್ಟ್ 6ಕ್ಕೆ ವಿಚಾರಣೆ

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »