ರಾಜ್ಯದಿಂದ ಕೇರಳಕ್ಕೆ 15 ಟನ್ ಯೂರಿಯಾ ಕಳ್ಳಸಾಗಣೆ, ಲಾರಿ ವಶ

ಕರ್ನಾಟಕದ ನಂಜನಗೂಡಿನ ಗೋದಾಮಿನಿಂದ ಕೇರಳಕ್ಕೆ ಅಕ್ರಮವಾಗಿ 15 ಟನ್ ಯೂರಿಯಾ ಸಾಗಿಸುತ್ತಿದ್ದ ಲಾರಿಯನ್ನು ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Karnataka Urea Smuggling

ಕರ್ನಾಟಕದಲ್ಲಿ ಯೂರಿಯಾ ಗೊಬ್ಬರ ಕೊರತೆಯಿಂದ ರೈತರು ಪರಿತಪಿಸುತ್ತಿರುವ ಸಂದರ್ಭದಲ್ಲಿ, ನಂಜನಗೂಡಿನ ಗೋದಾಮಿನಿಂದ ಕೇರಳಕ್ಕೆ ಅಕ್ರಮವಾಗಿ 15 ಟನ್ ಯೂರಿಯಾ ಸಾಗಿಸುತ್ತಿದ್ದ ಲಾರಿಯನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಘಟನೆಯು ರಾಜ್ಯದ ರೈತರಿಗೆ ಗೊಬ್ಬರ ಕೊರತೆಯ ಸಂಕಷ್ಟದ ಮಧ್ಯೆ ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಕರ್ನಾಟಕದಲ್ಲಿ ಖಾರಿಫ್ ಋತುವಿನಲ್ಲಿ ಬಿತ್ತನೆ ಚಟುವಟಿಕೆಗಳು ಚುರುಕುಗೊಂಡಿವೆ. ಆದರೆ, ಯೂರಿಯಾ ಗೊಬ್ಬರದ ಕೊರತೆಯಿಂದ ರೈತರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ರಾಯಚೂರಿನಂತಹ ಕೆಲವು ಜಿಲ್ಲೆಗಳಲ್ಲಿ ರೈತರು ಕಾಳಸಂತೆಯಲ್ಲಿ ಯೂರಿಯಾ ಮಾರಾಟದ ಆರೋಪವನ್ನು ಮಾಡಿ ಪ್ರತಿಭಟನೆ ನಡೆಸಿದ್ದರು. 

ಈ ಸಂದರ್ಭದಲ್ಲಿ, ಆಗಸ್ಟ್ 4ರಂದು, ನಂಜನಗೂಡಿನ ಗೋದಾಮಿನಿಂದ 330 ಚೀಲಗಳಲ್ಲಿ 15 ಟನ್ ಯೂರಿಯಾ ಗೊಬ್ಬರವನ್ನು ಕೇರಳಕ್ಕೆ ಸಾಗಿಸುತ್ತಿದ್ದ ಲಾರಿಯನ್ನು ಬಂಡೀಪುರ ಚೆಕ್‌ಪೋಸ್ಟ್‌ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಈ ಸಾಗಾಟಕ್ಕೆ ಅಂತರರಾಜ್ಯ ಗೊಬ್ಬರ ಸಾಗಾಟದ ಅನುಮತಿ ಇರಲಿಲ್ಲ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸಧ್ಯ ಈ ಘಟನೆಯು ರಾಜ್ಯದಲ್ಲಿ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಜನತಾ ದಳ (ಜಾತ್ಯಾತೀತ) ರಾಜ್ಯ ಘಟಕವು, “ಕಾಂಗ್ರೆಸ್ ಸರ್ಕಾರವು ರೈತರಿಗೆ ಗೊಬ್ಬರ ಒದಗಿಸಲು ವಿಫಲವಾಗಿದ್ದು, ಕೇಂದ್ರ ಸರ್ಕಾರದಿಂದ ಬಂದ ಯೂರಿಯಾವನ್ನು ಕೇರಳಕ್ಕೆ ಕಳ್ಳಸಾಗಣೆ ಮಾಡುತ್ತಿದೆ” ಎಂದು ಆರೋಪಿಸಿದೆ. “ರೈತ ಸಂಪರ್ಕ ಕೇಂದ್ರಗಳಲ್ಲಿ ಗೊಬ್ಬರಕ್ಕಾಗಿ ರೈತರು ದಿನಗಟ್ಟಲೆ ಕಾಯುತ್ತಿದ್ದರೂ, ಸರ್ಕಾರವು ಗೊಬ್ಬರವನ್ನು ಅಕ್ರಮವಾಗಿ ರಾಜ್ಯದಿಂದ ಹೊರಗೆ ಕಳುಹಿಸುತ್ತಿದೆ” ಎಂದು ಜೆಡಿಎಸ್ ಟೀಕಿಸಿದೆ. 

ಇದನ್ನೂ ಓದಿ | ಯೂರಿಯಾ ಕೊರತೆಗೆ ಬಿಜೆಪಿಯೇ ಕಾರಣ: ಸಿದ್ದರಾಮಯ್ಯ ಕೇಂದ್ರಕ್ಕೆ ತಿರುಗೇಟು

ನಂಜನಗೂಡು ಪೊಲೀಸರು ಈ ಪ್ರಕರಣದ ತನಿಖೆಯನ್ನು ಆರಂಭಿಸಿದ್ದು, ಕಳ್ಳಸಾಗಣೆಯ ಹಿಂದಿನ ಜಾಲವನ್ನು ಭೇದಿಸಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕ ಸರ್ಕಾರವು ಕೇಂದ್ರದಿಂದ ಶೀಘ್ರದಲ್ಲಿ ಹೆಚ್ಚುವರಿ ಯೂರಿಯಾ ಪೂರೈಕೆಗೆ ಕೋರಿಕೆ ಸಲ್ಲಿಸಿದೆ.   ರೈತರಿಗೆ ಸಮರ್ಪಕವಾಗಿ ಗೊಬ್ಬರ ಒದಗಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »