ಸಿದ್ದು v/s ಯತ್ನಾಳ್: ವಿಧಾನಸಭೆಯ ಉಚ್ಚಾಟನೆ ಜಗಳ ವೈರಲ್‌

ಕರ್ನಾಟಕ ವಿಧಾನಸಭೆಯಲ್ಲಿ ಗುತ್ತಿಗೆದಾರರ ಬಿಲ್ ಪಾವತಿಗೆ ಸಂಬಂಧಿಸಿದ ಚರ್ಚೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಶಾಸಕರ ನಡುವೆ ತೀವ್ರ ಆರೋಪ-ಪ್ರತ್ಯಾರೋಪ ನಡೆದಿದೆ. 
Karnataka assembly 

ಕರ್ನಾಟಕ ವಿಧಾನಸಭೆಯಲ್ಲಿ ಗುತ್ತಿಗೆದಾರರ ಬಿಲ್ ಪಾವತಿಗೆ ಸಂಬಂಧಿಸಿದ ಚರ್ಚೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಶಾಸಕರ ನಡುವೆ ತೀವ್ರ ಆರೋಪ-ಪ್ರತ್ಯಾರೋಪ ನಡೆದಿದೆ. 

ಈ ವೇಳೆ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದ ಕಾಲದಲ್ಲಿ ಎಲ್ಲರಿಗೂ ಬಿಲ್‌ ಬರೆದುಕೊಡುವುದು ಸಾಮಾನ್ಯ ಎಂದು ಸಿದ್ದರಾಮಯ್ಯ ಅವರು ಬಿಜೆಪಿ ಶಾಸಕ ಸುರೇಶ್ ಗೌಡ ಅವರಿಗೆ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ” ನಿಮಗೆ ಬಾದಾಮಿಗೆ ಕೊಟ್ಟಿಲ್ವಾ?” ಎಂದು ಛೇಡಿಸಿದರು. ಇದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ, “ಕುತ್ಕೊಳ್ಳ್ರಿ ನಿಮ್ಮನ್ನು ಉಚ್ಚಾಟನೆ ಮಾಡಿದ್ದಾರೆ” ಎಂದು ಟಾಂಗ್ ಕೊಟ್ಟರು. ಯತ್ನಾಳ್ ಸಹ “ನಿಮ್ಮನ್ನು ಕೂಡ ದೇವೇಗೌಡ್ರು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಿದ್ರಲ್ಲ” ಎಂದು ತಿರುಗೇಟು ನೀಡಿದರು. ಈ ಸಂಭಾಷಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಗುತ್ತಿಗೆದಾರರ ಬಿಲ್ ಪಾವತಿಯ ಚರ್ಚೆಯು ರಾಜ್ಯದ ಆರ್ಥಿಕ ನಿರ್ವಹಣೆಯನ್ನು ಕುರಿತುದ್ದು. ಬಿಜೆಪಿ ಶಾಸಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಲ್ ಪಾವತಿಯಲ್ಲಿ ವಿಳಂಬ ಆರೋಪಿಸಿದರು. ಸಿದ್ದರಾಮಯ್ಯ ಅವರು ಬೊಮ್ಮಾಯಿ ಸರ್ಕಾರದ ಕಾಲದಲ್ಲಿ ಇದೇ ರೀತಿ ನಡೆದಿತ್ತು ಎಂದು ತಿರುಗೇಟು ನೀಡಿದರು. ಈ ಚರ್ಚೆಯು ರಾಜಕೀಯ ಬಾಣಗಳಾಗಿ ಪರಿವರ್ತನೆಯಾಯಿತು.

ಯತ್ನಾಳ್ ಅವರ ಉಚ್ಚಾಟ :


ಮಾರ್ಚ್ 27, 2025ರಂದು ಬಿಜೆಪಿ ಪಕ್ಷವು ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿತು. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧದ ನಿರಂತರ ಟೀಕೆ ಮತ್ತು ಅಶಿಸ್ತಿನ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಯಿತು. ಯತ್ನಾಳ್ ಅವರು ಬಿಜೆಪಿ ನಾಯಕತ್ವದ ವಿರುದ್ಧ ಹಲವು ಬಾರಿ ಧ್ವನಿ ಎತ್ತಿದ್ದರು, ವಂಶಪಾರಂಪರ್ಯ ರಾಜಕೀಯ ಮತ್ತು ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದರು. ಉಚ್ಚಾಟನೆಯ ನಂತರ ಅವರು ಪಕ್ಷದ ವಿರುದ್ಧ ಮುಂದುವರಿದು ಟೀಕಿಸುತ್ತಿದ್ದರೂ, ವಿಧಾನಸಭೆಯಲ್ಲಿ ಅವರು ಇನ್ನೂ ಬಿಜೆಪಿ ಶಾಸಕರಾಗಿ ಭಾಗವಹಿಸುತ್ತಿದ್ದಾರೆ ಎಂಬುದು ಗಮನಾರ್ಹ.

ಸಿದ್ದರಾಮಯ್ಯ ಅವರ ಉಚ್ಚಾಟನೆ : 

2005ರಲ್ಲಿ ಅಂದು ಜೆಡಿಎಸ್ ಪಕ್ಷದಿಂದ ಸಿದ್ದರಾಮಯ್ಯ ಅವರನ್ನು ಹೆಚ್.ಡಿ. ದೇವೇಗೌಡ ಅವರು ಉಚ್ಚಾಟನೆ ಮಾಡಿದ್ದರು. ಇದು ಕರ್ನಾಟಕ ರಾಜಕೀಯದಲ್ಲಿ ದೊಡ್ಡ ತಿರುವು ನೀಡಿತ್ತು, ನಂತರ ಸಿದ್ದರಾಮಯ್ಯ ಕಾಂಗ್ರೆಸ್ ಸೇರಿ ಮುಖ್ಯಮಂತ್ರಿಯಾದರು. 

ಇದನ್ನೂ ಓದಿ | ಎಸ್‌ಸಿ ಒಳಮೀಸಲಾತಿ: ಸಿದ್ಧರಾಮಯ್ಯ ಸರ್ಕಾರದ ಐತಿಹಾಸಿಕ ನಿರ್ಧಾರ

ವಿಡಿಯೋ ವೈರಲ್ ಆಗಿರುವುದು ರಾಜಕೀಯದ ಲಘು ಕ್ಷಣಗಳನ್ನು ಸಾರ್ವಜನಿಕರಿಗೆ ತೋರಿಸುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಇದು ಹಾಸ್ಯ ಮತ್ತು ಟೀಕೆಗಳಿಗೆ ಕಾರಣವಾಗಿದೆ. ಕೆಲವರು ಇದನ್ನು ರಾಜಕೀಯದ ಮನರಂಜನೆ ಎಂದು ಕರೆದರೆ, ಇತರರು ಗಂಭೀರ ಚರ್ಚೆಗಳಿಗೆ ಅಡ್ಡಿಯಾಗಿದೆ ಎಂದು ಟೀಕಿಸಿದ್ದಾರೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »