ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ನೀಡಿ: ಸಿಎಂಗೆ ಅನಿರುದ್ಧ ಮನವಿ!

ಕನ್ನಡ ಚಿತ್ರರಂಗದ ದಿಗ್ಗಜ ನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಅವರ ಅಳಿಯ ಮತ್ತು ನಟ ಅನಿರುದ್ಧ ಜತ್ಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
Aniruddha Jatkar  

ಕನ್ನಡ ಚಿತ್ರರಂಗದ ದಿಗ್ಗಜ ನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಅವರ ಅಳಿಯ ಮತ್ತು ನಟ ಅನಿರುದ್ಧ ಜಟ್ಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಆಗಸ್ಟ್ 28ರಂದು ಕಾವೇರಿ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ ಅನಿರುದ್ಧ ಅವರು ಪ್ರಶಸ್ತಿ ನೀಡುವಂತೆ ಕೋರಿದ್ದು, ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ.

ಭೇಟಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅನಿರುದ್ಧ ಜಟ್ಕರ್, “ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೇನೆ. ಹಿಂದೆಯೂ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಇವತ್ತು ಸಹ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ” ಎಂದು ತಿಳಿಸಿದರು. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ನೀಡುವುದು ತಪ್ಪಲ್ಲ, ಅವರು ಅದಕ್ಕೆ ಅರ್ಹರು. ಹೀಗಾಗಿ ಇದನ್ನು ಕೇಳುವುದಲ್ಲದೆ ನೆನಪಿಸುತ್ತಿದ್ದೇನೆ ಎಂದು ಅನಿರುದ್ಧ ಹೇಳಿದ್ದಾರೆ.

ವಿಷ್ಣುವರ್ಧನ್ ಅವರ ಸಮಾಧಿ ಧ್ವಂಸದ ಬಗ್ಗೆ ಪ್ರತಿಕ್ರಿಯಿಸಿದ ಅನಿರುದ್ಧ, ಈ ವಿಷಯ ಸರ್ಕಾರ ಮತ್ತು ಸಿಎಂ ಗಮನಕ್ಕೆ ಈಗಾಗಲೇ ಬಂದಿದೆ ಎಂದರು. ಹಿಂದೆ ಕೋರಿದಂತೆ ಕರ್ನಾಟಕ ಸರ್ಕಾರ ಮೈಸೂರಿನಲ್ಲಿ 5 ಎಕರೆ ಜಮೀನಿನಲ್ಲಿ ಸ್ಮಾರಕ ನಿರ್ಮಿಸಿದೆ. ಮೊನ್ನೆ ಸಮಾಧಿ ಧ್ವಂಸದ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದೇನೆ. ಬೆಂಗಳೂರಿನಲ್ಲಿ ಮತ್ತೊಂದು ಸ್ಮಾರಕ ಬೇಕು ಎಂದು ಕೋರಿದರೆ ತಪ್ಪಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಈ ಹಿನ್ನೆಲೆಯಲ್ಲಿ ಅನಿರುದ್ಧ ಅವರು ಸಿಎಂ ಭೇಟಿಯಲ್ಲಿ ಪ್ರಶಸ್ತಿ ಕೋರಿಕೆಯ ಜೊತೆಗೆ ಸಮಾಧಿ ವಿಷಯವನ್ನೂ ಚರ್ಚಿಸಿದ್ದಾರೆ. ವಿಷ್ಣುವರ್ಧನ್ ಅವರ 75ನೇ ಜಯಂತಿ ಸೆಪ್ಟೆಂಬರ್ 18, 2025ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡುವಂತೆ ಮನವಿ ಮಾಡಿದ್ದಾರೆ. ವಿಷ್ಣುವರ್ಧನ್ ಅವರ ಕನ್ನಡ ಚಿತ್ರರಂಗಕ್ಕೆ ಮತ್ತು ಸಾಂಸ್ಕೃತಿಕ ಪರಂಪರೆಗೆ ನೀಡಿದ ಕೊಡುಗೆ ಅಪಾರವಾಗಿದ್ದು, ಸಾಮಾಜಿಕ ಜವಾಬ್ದಾರಿ ನಿರ್ವಹಿಸಿ ಪ್ರೇರಣೆಯಾಗಿದ್ದಾರೆ ಎಂದು ಅನಿರುದ್ಧ ಹೇಳಿದ್ದಾರೆ. ನಿಧನದ 15 ವರ್ಷಗಳ ನಂತರವೂ ಜನರ ಹೃದಯದಲ್ಲಿ ಅಚಲ ಸ್ಥಾನ ಪಡೆದಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಆಗಸ್ಟ್ 9, 2025ರಂದು ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ಧ್ವಂಸ ಮಾಡಲಾಗಿತ್ತು. ಇದು ಕನ್ನಡ ಚಿತ್ರರಂಗ ಮತ್ತು ಅಭಿಮಾನಿಗಳಲ್ಲಿ ಆಘಾತ ಉಂಟುಮಾಡಿತ್ತು. 2009ರ ಡಿಸೆಂಬರ್‌ನಲ್ಲಿ ವಿಷ್ಣುವರ್ಧನ್ ಅವರನ್ನು ಅಲ್ಲಿ ಸಮಾಧಿ ಮಾಡಲಾಗಿತ್ತು ಮತ್ತು 15 ವರ್ಷಗಳಿಂದ ಅಭಿಮಾನಿಗಳ ಯಾತ್ರಾ ಸ್ಥಳವಾಗಿತ್ತು. ಅನಿರುದ್ಧ ಜಟ್ಕರ್ ಈ ಕ್ರಮವನ್ನು “ಆಳವಾದ ನೋವು” ಮತ್ತು “ಪದಗಳಲ್ಲಿ ವ್ಯಕ್ತಪಡಿಸಲು ಅಸಾಧ್ಯ” ಎಂದು ಕರೆದಿದ್ದರು. ಸಮಾಧಿ ಅಭಿಮಾನಿಗಳ ಪ್ರೀತಿ, ಗೌರವ ಮತ್ತು ಭಾವನಾತ್ಮಕ ಸಂಬಂಧದ ಸ್ಥಳವಾಗಿತ್ತು ಎಂದು ಹೇಳಿದ್ದರು. ಸೆಪ್ಟೆಂಬರ್ 18ರ ಜನ್ಮದಿನ ಮತ್ತು ಡಿಸೆಂಬರ್ 30ರ ಸ್ಮರಣೆಯಲ್ಲಿ ಜನಸಾಗರ ಜಮಾಯಿಸುತ್ತಿತ್ತು ಎಂದು ನೆನಪಿಸಿದ್ದರು. ಸಮಾಧಿಯನ್ನು ಸಂರಕ್ಷಿಸಿ ಎಂದು ಪದೇಪದೇ ಕೋರಿದ್ದರೂ, ರಾತ್ರೋರಾತ್ರಿ ಧ್ವಂಸ ಮಾಡಿರುವುದು ದುಃಖಕರ ಎಂದು ಆರೋಪಿಸಿದ್ದರು. ತಮ್ಮ ಸಮ್ಮತಿಯೊಂದಿಗೆ ಧ್ವಂಸ ಮಾಡಲಾಗಿದೆ ಎಂಬ ಊಹಾಪೋಹವನ್ನು ನಿರಾಕರಿಸಿದ್ದರು.

ಇದನ್ನೂ ಓದಿ | ರಾತ್ರೋರಾತ್ರಿ  ವಿಷ್ಣುವರ್ಧನ್ ಸಮಾಧಿ ಧ್ವಂಸ: ಅಭಿಮಾನಿಗಳ ಆಕ್ರೋಶ

ಈ ಮನವಿ ಸರ್ಕಾರದ ಸಚಿವ ಸಂಪುಟದಲ್ಲಿ ಚರ್ಚೆಯಾಗಲಿದ್ದು, ವಿಷ್ಣುವರ್ಧನ್ ಅವರ ಅಭಿಮಾನಿಗಳು ಪ್ರಶಸ್ತಿ ನಿರೀಕ್ಷಿಸುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ವಿಷ್ಣುವರ್ಧನ್ ಅವರ ಕೊಡುಗೆ ಅನನ್ಯವಾಗಿದ್ದು, ಕರ್ನಾಟಕ ರತ್ನ ಅವರಿಗೆ ಸೂಕ್ತ ಗೌರವವಾಗಲಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »