ಕೇರಳದಲ್ಲಿ ದೇಶದ ಮೊದಲ ಹಿರಿಯ ನಾಗರಿಕರ ಆಯೋಗ ಸ್ಥಾಪನೆ

ಕೇರಳ ಸರ್ಕಾರವು ದೇಶದ ಮೊದಲ ಹಿರಿಯ ನಾಗರಿಕರ ಆಯೋಗವನ್ನು ಸ್ಥಾಪಿಸಿದ್ದು, ಹಿರಿಯರ ಹಕ್ಕುಗಳ ರಕ್ಷಣೆ ಮತ್ತು ನಿರ್ಲಕ್ಷ್ಯ, ನಿಂದನೆಯಂತಹ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಂಡಿದೆ.
kerala senior citizens commission

ಕೇರಳ ಸರ್ಕಾರವು ದೇಶದ ಮೊದಲ ಹಿರಿಯ ನಾಗರಿಕರ ಆಯೋಗವನ್ನು ಸ್ಥಾಪಿಸಿದ್ದು, ಹಿರಿಯರ ಹಕ್ಕುಗಳ ರಕ್ಷಣೆ ಮತ್ತು ನಿರ್ಲಕ್ಷ್ಯ, ನಿಂದನೆಯಂತಹ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಂಡಿದೆ. ಕೇರಳ ರಾಜ್ಯ ಹಿರಿಯ ನಾಗರಿಕರ ಆಯೋಗದ ಅಧ್ಯಕ್ಷರಾಗಿ ಕೆ. ಸೋಮಪ್ರಸಾದ್ ಅವರನ್ನು ನೇಮಿಸಲಾಗಿದೆ ಎಂದು ಸಾಮಾಜಿಕ ನ್ಯಾಯ ಸಚಿವೆ ಆರ್. ಬಿಂದು ತಿಳಿಸಿದ್ದಾರೆ.  

ಆಯೋಗದ ಸದಸ್ಯರಾಗಿ ಅಮರವಿಲಾ ರಾಮಕೃಷ್ಣನ್, ಇ.ಎಂ. ರಾಧಾ, ಕೆ.ಎನ್.ಕೆ. ನಂಬೂದಿರಿ, ಮತ್ತು ಲೋಪ್ಸ್ ಮ್ಯಾಥ್ಯೂ ಅವರನ್ನು ನೇಮಕ ಮಾಡಲಾಗಿದೆ. ಇದೇ ಮಾರ್ಚ್‌ನಲ್ಲಿ ರಚನೆಯಾದ ಕೇರಳ ರಾಜ್ಯ ಹಿರಿಯ ನಾಗರಿಕರ ಆಯೋಗ ಕಾಯ್ದೆಯಡಿ ಈ ಆಯೋಗವು ಕಾರ್ಯನಿರ್ವಹಿಸಲಿದೆ. ಆಯೋಗವು ಹಿರಿಯರ ಕಲ್ಯಾಣಕ್ಕಾಗಿ ಮಾರ್ಗಸೂಚಿಗಳನ್ನು ಒದಗಿಸುವುದು, ಪುನರ್ವಸತಿಗೆ ಸಹಾಯ ಮಾಡುವುದು ಮತ್ತು ಸಾಮಾಜಿಕ ಸೇರ್ಪಡೆಯನ್ನು ಉತ್ತೇಜಿಸುವುದು ಇದರ ಗುರಿಯಾಗಿದೆ.

ಇದನ್ನೂ ಓದಿ | ಅಮೇರಿಕಾ ಸುಂಕ ಭಾರತದ ಆರ್ಥಿಕತೆಗೆ ಯಾವ ರೀತಿ ಪರಿಣಾಮಬೀರುತ್ತದೆ?

ಕೇರಳದಲ್ಲಿ ಹಿರಿಯ ನಾಗರಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, 2036ರ ವೇಳೆಗೆ 22.8% ಜನಸಂಖ್ಯೆ 60 ವರ್ಷಕ್ಕಿಂತ ಮೇಲ್ಪಟ್ಟವರಾಗಿರುತ್ತಾರೆ ಎಂದು ಯುಎನ್ ವರದಿ ತಿಳಿಸಿದೆ. ಈ ಆಯೋಗವು ಹಿರಿಯರಿಗೆ ಆರ್ಥಿಕ ಭದ್ರತೆ, ಆರೋಗ್ಯ ಸೇವೆ, ಮತ್ತು ಕಾನೂನು ಸಹಾಯವನ್ನು ಒದಗಿಸಲು ಕೆಲಸ ಮಾಡಲಿದೆ.  

ಆಯೋಗಕ್ಕೆ ವಾರ್ಷಿಕ 1 ಕೋಟಿ ರೂ. ಮತ್ತು ಮೊದಲಬಾರಿಗೆ 9ಲಕ್ಷ ರೂ. ಸ್ಥಾಪನೆಗೆ ಖರ್ಚಾಗಲಿದೆ. ಕೇರಳದ ಈ ಮಾದರಿಯು ಇತರ ರಾಜ್ಯಗಳಿಗೆ ದಾರಿದೀಪವಾಗಬಹುದು ಎಂದು ಸಚಿವೆ ಆರ್. ಬಿಂದು ಹೇಳಿದ್ದಾರೆ. 

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »