ಕನ್ನಡದ ಹಿರಿಯ ಕಾದಂಬರಿಕಾರ ಎಸ್.ಎಲ್. ಭೈರಪ್ಪ (94) ಇಂದು ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಬೆಂಗಳೂರಿನ ರಾಜರಾಜೇಶ್ವರಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಅವರು, ಹಲವು ದಿನಗಳಿಂದ ಆರೋಗ್ಯ ಸಮಸ್ಯೆಗಳಿಗೆ ಒಳಗಾಗಿದ್ದರು.
ವಂಶವೃಕ್ಷ, ಪರ್ವ, ಉತ್ತರಕಾಂಡ, ಆವರಣ ಸೇರಿ ಹಲವು ಕೃತಿಗಳನ್ನು ರಚಿಸಿದ್ದ ಎಸ್ಎಲ್ ಬೈರಪ್ಪ ಅವರಿಗೆ ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಲಭಿಸಿವೆ. ಎಸ್ಎಲ್ ಬೈರಪ್ಪ ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ ಭಾಷೆಗಳಿಗೆ ಅನುವಾದಗೊಂಡಿವೆ.







