ಇಂದು ಸಂಜೆ 4ಗಂಟೆಗೆ ಬಿಹಾರ ಚುನಾವಣೆಗೆ ದಿನಾಂಕ ಪ್ರಕಟ!

ಭಾರತೀಯ ಚುನಾವಣಾ ಆಯೋಗ (ಇಸಿಐ) ಇಂದು ಸಂಜೆ 4ಗಂಟೆಗೆ ನಡೆಸುವ ಸುದ್ದಿಗೋಷ್ಠಿಯಲ್ಲಿ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಲಿದೆ.
bihar assembly election
ಚಿತ್ರ ಕೃಪೆ : ಇಂಡಿಯನ್‌ ಎಕ್ಸ್‌ ಪ್ರೆಸ್‌

ಭಾರತೀಯ ಚುನಾವಣಾ ಆಯೋಗ (ಇಸಿಐ) ಇಂದು ಸಂಜೆ 4ಗಂಟೆಗೆ ನಡೆಸುವ ಸುದ್ದಿಗೋಷ್ಠಿಯಲ್ಲಿ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಲಿದೆ. 243 ಸ್ಥಾನಗಳಿಗೆ ನಡೆಯುವ ಈ ಚುನಾವಣೆಯು ನವೆಂಬರ್ 22ಕ್ಕೆ ಮುಕ್ತಾಯವಾಗುವ ಪ್ರಸ್ತುತ ವಿಧಾನಸಭೆಯ ಅವಧಿಗೂ ಮುಂಚೆ ಪೂರ್ಣಗೊಳ್ಳುವುದು ಖಚಿತವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಹಿಂದೆ ತಿಳಿಸಿದ್ದರು.

ಈ ಚುನಾವಣೆಯು ಚುನಾವಣಾ ಆಯೋಗದ ವಿಶೇಷ ತೀವ್ರ ಪುನರ್‌ಪರಿಶೋಧನೆ (ಎಸ್‌ಐಆರ್‌) ನಂತರದ ಮೊದಲ ವಿಧಾನಸಭಾ ಚುನಾವಣೆಯಾಗಿದ್ದು, ಜೂನ್ 24ರಿಂದ ಆರಂಭವಾದ ಈ ಪ್ರಕ್ರಿಯೆಯಲ್ಲಿ 68.5 ಲಕ್ಷ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದ್ದು, 21.53ಲಕ್ಷ ಹೊಸ ಹೆಸರುಗಳನ್ನು ಸೇರಿಸಲಾಗಿದೆ. ಇದರಿಂದ ಬಿಹಾರದಲ್ಲಿ ಒಟ್ಟು 7.42ಕೋಟಿ ಮತದಾರರು ದಾಖಲಾಗಿದ್ದಾರೆ, ಇದು 22ವರ್ಷಗಳ ನಂತರದ ಮೊದಲ ‘ಶುದ್ಧೀಕರಣ’ ಎಂದು ಜ್ಞಾನೇಶ್ ಕುಮಾರ್ ಹೇಳಿದ್ದಾರೆ. ಜ್ಞಾನೇಶ್‌ ಕುಮಾರ್‌ರವರು ಇದೇ ಫೆಬ್ರುವರಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರವಹಿಸಿಕೊಂಡ ನಂತರ ಎದುರಿಸುತ್ತಿರುವ ಮೊದಲ ಚುನಾವಣೆ ಇದಾಗಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಈ ಪುನರ್‌ಪರಿಶೋಧನೆಗೆ ಸವಾಲುಗಳು ಎದುರಾಗಿದ್ದರೂ, ಆಯೋಗವು ಚುನಾವಣೆಯ ಸಿದ್ಧತೆಯನ್ನು ತ್ವರಿತಗೊಳಿಸಿದೆ. ಪ್ರತಿ ಪೋಲಿಂಗ್ ಬೂತ್‌ಗೆ 1,200 ಮತದಾರರಿಗೆ ಸೀಮಿತಗೊಳಿಸುವಂತೆ ಬದಲಾವಣೆ ಮಾಡಲಾಗಿದೆ.

ಭಾರತದ ರಾಜಕೀಯ ಲೆಕ್ಕಾಚಾರಕ್ಕೆ ಬಿಹಾರದ ಚುನಾವಣೆಯು ನಿರ್ಣಾಯಕವಾಗಿದೆ. ಆರ್ಥಿಕ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಯಂತಹ ವಿಷಯಗಳು ಮುಖ್ಯವಾಗುತ್ತವೆ. ಮುಂಬರುವ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನೇತೃತ್ವದ ಎನ್‌ಡಿಎ ಸರ್ಕಾರವು ಆರ್‌ಜೆಡಿ ಮತ್ತು ಕಾಂಗ್ರೆಸ್‌ನ ವಿರೋಧ ಪಕ್ಷಗಳ ಮೈತ್ರಿಕೂಟವನ್ನು ಎದುರಿಸಲಿದೆ. 2020 ರಲ್ಲಿ, ಆರ್‌ಜೆಡಿ 75 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು, ಆದರೆ ಬಿಜೆಪಿ ಮತ್ತು ಜೆಡಿಯು ಒಟ್ಟಾಗಿ 117 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಪ್ರಶಾಂತ್ ಕಿಶೋರ್‌ರ ಜನ್ ಸುರಜ್ ಪಕ್ಷ ಹೊಸ ಸವಾಲು ಎದುರಿಸುತ್ತದೆ. ತೇಜಸ್ವಿ ಯಾದವ್ ಮತ್ತು ನೀತೀಶ್ ಕುಮಾರ್ ನಡುವೆ ಈಗ ಪ್ರಶಾಂತ್ ಕಿಶೋರ್‌ ಗೇಮ್‌ ಚೆಂಜರ್‌ ಆಗಲಿದ್ದಾರೆ ಇದು ರಾಜ್ಯ ರಾಜಕೀಯ ಭೂಪಟವನ್ನು ಬದಲಾಯಿಸಬಹುದು.

ಇದನ್ನೂ ಓದಿ | “ಜಿಎಸ್‌ಟಿ ಸರಳೀಕರಣದಿಂದ ರಾಜ್ಯಕ್ಕೆ ₹15,000 ಕೋಟಿ ನಷ್ಟ” : ಸಿಎಂ

ಚುನಾವಣಾ ಆಯೋಗವು 17ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದ್ದು. ಇವುಗಳು ದೇಶಾದ್ಯಂತ ಜಾರಿಗೊಳಿಸಲ್ಪಡುವುದಾಗಿ ಚುನಾವಣಾ ಆಯುಕ್ತರು ಹೇಳಿದ್ದಾರೆ. ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆಯಲ್ಲಿ ಎನ್‌ಡಿಎ ಒಂದು ಹಂತದ ಚುನಾವಣೆಗೆ ಒತ್ತಾಯಿಸಿದರೆ, ವಿರೋಧ ಪಕ್ಷಗಳು ಎರಡು ಹಂತಗಳನ್ನು ಬೇಡಿಕೆ ಮಾಡಿವೆ. ಚೈತ್ರ ಹಬ್ಬದ ನಂತರ ಮತದಾನ ನಡೆಸುವಂತೆ ಎಲ್ಲ ಪಕ್ಷಗಳೂ ಕೋರಿವೆ, ಇದರಿಂದ ಮತದಾರ ಸೇರ್ಪಡೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಹಿಂದಿನ ಚುನಾವಣೆಗಳಲ್ಲಿ ಬಿಹಾರದ ಮತದಾರ ಸಂಖ್ಯೆ 56.93% ಇತ್ತು, ಮಹಿಳೆಯರು 59.69% ಮತ್ತು ಪುರುಷರು 54.45% ಇದ್ದರು. ಈ ಬಾರಿ ತೀವ್ರ ಸಿದ್ಧತೆಗಳೊಂದಿಗೆ ಮತದಾನದ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »