“ತೊಂದರೆ ಕೊಡುವ ಸಂಘಟನೆಗಳ ನಿಷೇಧ”: ಸಿಎಂ ಸಿದ್ದರಾಮಯ್ಯ

“ಆರ್‌ಎಸ್‌ಎಸ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನರಿಗೆ ತೊಂದರೆ ಕೊಡುವ ಸಂಘಟನೆಗಳನ್ನು ನಿಷೇಧಿಸುವ” ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಸನದಲ್ಲಿ ಮಾತನಾಡಿದ್ದಾರೆ.
siddaramaiah rss ban
ಚಿತ್ರ ಕೃಪೆ: ಕನ್ನಡ ಪ್ರಭ

“ಆರ್‌ಎಸ್‌ಎಸ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನರಿಗೆ ತೊಂದರೆ ಕೊಡುವ ಸಂಘಟನೆಗಳನ್ನು ನಿಷೇಧಿಸುವ” ಬಗ್ಗೆ ಅಕ್ಟೋಬರ್ 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಸನದಲ್ಲಿ ಮಾತನಾಡಿದರು. 

ಸಿದ್ದರಾಮಯ್ಯ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ. “ತಮಿಳುನಾಡು ಸರ್ಕಾರದ ಕ್ರಮವನ್ನು ಅಧ್ಯಯನ ಮಾಡುತ್ತಿದ್ದೇವೆ, ತಮಿಳುನಾಡು ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಸರ್ಕಾರಿ ಸ್ಥಳಗಳಲ್ಲಿ ನಿಷೇಧಿಸಿದೆ. ನಾವು ಅದರ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಪರಿಶೀಲನೆ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದರು.

ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅಕ್ಟೋಬರ್ 4ರಂದು ಸಿಎಂಗೆ ಪತ್ರ ಬರೆದು. ಆರ್‌ಎಸ್‌ಎಸ್ ಶಾಖೆಗಳನ್ನು ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿಸಿ. ಆರ್‌ಎಸ್‌ಎಸ್ ಸಂವಿಧಾನ ವಿರೋಧಿ ಎಂದು ಆರೋಪಿಸಿದರು. ಸಿದ್ದರಾಮಯ್ಯನವರು ತಕ್ಷಣ ಕ್ರಮಕ್ಕೆ ಸೂಚಿಸಿದರು. ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್‌ಗೆ ತಮಿಳುನಾಡು ನೀತಿಯನ್ನು ಅಧ್ಯಯನ ಮಾಡಿ ವರದಿ ನೀಡಿ ಎಂದರು.

ಇದನ್ನೂ ಓದಿ | “ಆರ್‌ಎಸ್‌ಎಸ್‌ನ ಚಟುವಟಿಕೆ ಸಂವಿಧಾನದ ಮೌಲ್ಯಕ್ಕೆ ವಿರುದ್ಧ” : ಖರ್ಗೆ

ಕೇವಲ ಆರ್‌ಎಸ್‌ಎಸ್ ಅಲ್ಲ. ಸಾರ್ವಜನಿಕರಿಗೆ ತೊಂದರೆ ಕೊಡುವ ಎಲ್ಲಾ ಸಂಘಟನೆಗಳನ್ನು ನಿಷೇಧಿಸುವ ಯೋಚನೆ ಇದೆ. ನಾವು ಕಾನೂನು ಪರಿಶೀಲನೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಬಿಜೆಪಿ ನಾಯಕರು ಇದನ್ನು ವಿರೋಧಿಸಿದರೂ ಇದು ಸಂವಿಧಾನ ವಿರೋಧಿ ಎಂದರು.

Share:

ಮತ್ತಷ್ಟು ಸುದ್ದಿ

ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮ

ಅಲೆದಾಟ ಮುಕ್ತ ಆಡಳಿತದತ್ತ ಮೇಲುಕೋಟೆ ಮನೆ ಬಾಗಿಲಿಗೇ ಬಂದ ‘ಸರ್ಕಾರಿ ಸೇವೆ’ ಕಾರ್ಯಕ್ರಮ  ತಂತ್ರಜ್ಞಾನದ ಅರಿವನ್ನು ಆಡಳಿತ ಯಂತ್ರಕ್ಕೆ ವರ್ಗಾಯಿಸಿದ

ಬೆಂಗಳೂರಿನಲ್ಲಿ ಮೇ 25 ರಂದು 3ನೇ ಕರ್ನಾಟಕ ಸಂಘಟಕರ ಸಮಾವೇಶ

ಸಾಂಸ್ಕೃತಿಕ ನೀತಿ ಜಾರಿ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಆಗ್ರಹಿಸಿ ರಂಗಕರ್ಮಿಗಳು ಹಾಗೂ ಸಾಂಸ್ಕೃತಿಕ ಸಂಘಟಕರ ಬೃಹತ್‌ ಸಮಾಲೋಚನೆ ಬೆಂಗಳೂರು: ಕರ್ನಾಟಕ

ಮುಂದೆ ಓದಿ »

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »