ಕರ್ನಾಟಕ ಜಾತಿ ಸಮೀಕ್ಷೆಯ ಗಡುವು ಮತ್ತೆ ವಿಸ್ತರಣೆ: ಅಕ್ಟೋಬರ್ 31ಕ್ಕೆ

ಶಾಲೆಗಳಿಗೆ ರಜೆಯನ್ನು ನೀಡಿ ಸಮೀಕ್ಷೆ ನಡೆಸಲಾಗುತ್ತಿದೆ. ಈಗ ಮತ್ತೊಮ್ಮೆ ರಾಜ್ಯ ಸರ್ಕಾರ ಅಕ್ಟೋಬರ್ 31ರವರೆಗೆ ವಿಸ್ತರಿಸಲು ನಿರ್ಧರಿಸಿದೆ.
karnataka socio economic survey
ಚಿತ್ರ ಕೃಪೆ : vartha bharati

ಈಗಾಗಲೇ ಹಲವು ಬಾರಿ ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಈಗಾಗಲೇ ಹಲವು ಬಾರಿ ಮುಂದುಡಲಾಗಿದ್ದು ಶಾಲೆಗಳಿಗೆ ರಜೆಯನ್ನು ನೀಡಿ ಸಮೀಕ್ಷೆ ನಡೆಸಲಾಗುತ್ತಿದೆ. ಈಗ ಮತ್ತೊಮ್ಮೆ ರಾಜ್ಯ ಸರ್ಕಾರ ಅಕ್ಟೋಬರ್ 31ರವರೆಗೆ ವಿಸ್ತರಿಸಲು ನಿರ್ಧರಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ಈ ತೀರ್ಮಾನವನ್ನು ಘೋಷಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರವಿವಾರ ನಡೆದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ಈ ಸಮೀಕ್ಷೆಯನ್ನು ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸಲಾಗುತ್ತಿದ್ದು, ರಾಜ್ಯದ ಸುಮಾರು 7 ಕೋಟಿ ಜನರ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಅಧ್ಯಯನ ಮಾಡುವ ಉದ್ದೇಶ ಹೊಂದಿದೆ. ಆದರೆ ಸೆಪ್ಟೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಈ ಸಮೀಕ್ಷೆಯನ್ನು ಈಗಾಗಲೇ ಹಲವು ಬಾರಿ ವಿಸ್ತರಿಸಲಾಗಿದೆ. ಮೊದಲು ಅಕ್ಟೋಬರ್ 7ರವರೆಗೆ ನಿಗದಿಯಾಗಿದ್ದ ಗಡುವನ್ನು ನಂತರ ಅಕ್ಟೋಬರ್ 18ಕ್ಕೆ ಮತ್ತು ಬೆಂಗಳೂರಿನಲ್ಲಿ ಅಕ್ಟೋಬರ್ 24ಕ್ಕೆ ವಿಸ್ತರಿಸಲಾಗಿತ್ತು. ಆದರೆ, ಸಮೀಕ್ಷೆಯ ಪ್ರಗತಿ ನಿಧಾನಗತಿಯಲ್ಲಿದ್ದ ಕಾರಣ, ವಿಶೇಷವಾಗಿ ಬೆಂಗಳೂರು ಮತ್ತು ಕರಾವಳಿ ಪ್ರದೇಶಗಳಲ್ಲಿ ಇದೀಗ ಅಕ್ಟೋಬರ್ 31ರವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರಿಸಲು ತೀರ್ಮಾನಿಸಲಾಗಿದೆ. ರಾಜ್ಯಾದ್ಯಂತ ಸುಮಾರು 85% ಮನೆಗಳ ಸಮೀಕ್ಷೆ ಪೂರ್ಣಗೊಂಡಿದ್ದರೂ, ಬೆಂಗಳೂರಿನಲ್ಲಿ ಕೇವಲ 45% ಮಾತ್ರ ಮುಗಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಮೀಕ್ಷೆಯ ಕುರಿತು ಸಚಿವರ ಮಾತು

ಸಚಿವ ಶಿವರಾಜ್‌ ತಂಗಡಗಿ ಅವರು ಹೇಳಿದಂತೆ, ಸಮೀಕ್ಷೆಯನ್ನು ಅಕ್ಟೋಬರ್ 23ರಿಂದ ಪುನರಾರಂಭಿಸಲಾಗುವುದು. ಇನ್ನುಮುಂದೆ ಶಿಕ್ಷಣ ಇಲಾಖೆಯ ಶಿಕ್ಷಕರನ್ನು ಈ ಕಾರ್ಯಕ್ಕೆ ಬಳಸದಿರಲು ನಿರ್ಧರಿಸಲಾಗಿದೆ. ಬದಲಿಗೆ, ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ನಿಯೋಜಿಸಿ ಕಾರ್ಯವನ್ನು ಪೂರ್ಣಗೊಳಿಸಲಿದ್ದಾರೆ. ಇದರಿಂದ ಶಿಕ್ಷಕರಿಗೆ ಮುಕ್ತಿ ಸಿಗಲಿದ್ದು, ಶಾಲಾ ಚಟುವಟಿಕೆಗಳು ಎಂದಿನಂತೆ ಸಾಮಾನ್ಯವಾಗಿ ನಡೆಯಲು ಸಹಾಯವಾಗಲಿದೆ. ದೀಪಾವಳಿ ಹಬ್ಬದ ನಿಮಿತ್ತ ಅಕ್ಟೋಬರ್ 20ರಿಂದ 22ರವರೆಗೆ ಮೂರು ದಿನಗಳ ರಜೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಈ ಸಮೀಕ್ಷೆಯಲ್ಲಿ ಸುಮಾರು 60 ಪ್ರಶ್ನೆಗಳನ್ನು ಕೇಳಲಾಗುತ್ತಿದ್ದು, ಕುಟುಂಬದ ಸದಸ್ಯರ ಜಾತಿ, ಆದಾಯ, ಶಿಕ್ಷಣ ಮಟ್ಟ, ಉದ್ಯೋಗ, ಆಸ್ತಿ ಮತ್ತು ಇತರ ಸಾಮಾಜಿಕ ಸೂಚಕಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ. ಆದರೆ, ಕೆಲವು ಪ್ರಶ್ನೆಗಳು ಖಾಸಗಿ ಮತ್ತು ಅನಗತ್ಯವೆಂದು ಕೆಲವರು ಟೀಕಿಸಿದ್ದಾರೆ.

ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರು ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದು, ವಿವಾದಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು “ಅವಿಧೇಯತೆ” ಎಂದು ಕರೆದಿದ್ದು, ಸರ್ಕಾರದ ನೀತಿಗಳಿಗೆ ವಿರೋಧವೆಂದು ಆರೋಪಿಸಿದ್ದಾರೆ. ತಂಗಡಗಿ ಅವರು ಕೂಡ ಇದನ್ನು ಟೀಕಿಸಿ, ಸಮೀಕ್ಷೆಯು ಒಂದು ಸಮುದಾಯಕ್ಕೆ ಸೀಮಿತವಲ್ಲದೆ ರಾಜ್ಯದ ಎಲ್ಲಾ ಜನರ ಕಲ್ಯಾಣಕ್ಕಾಗಿ ಎಂದು ಹೇಳಿದ್ದಾರೆ.

ಸಮೀಕ್ಷೆಯ ಮೂಲ ಉದ್ದೇಶವು ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರಿಗೆ ಸರ್ಕಾರಿ ಸೌಲಭ್ಯಗಳನ್ನು ಸಮರ್ಪಕವಾಗಿ ಹಂಚುವುದು. ಆದರೆ, ವಿರೋಧ ಪಕ್ಷಗಳು ಇದನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸುತ್ತಿರುವುದಾಗಿ ಆರೋಪಿಸಿವೆ. ಕರಾವಳಿ ಪ್ರದೇಶಗಳಲ್ಲಿ ಪ್ರಗತಿ ನಿಧಾನವಾಗಿದ್ದು, ಕೆಲವು ಮನೆಗಳು ತಪ್ಪಿಹೋದರೆ ಆನ್‌ಲೈನ್ ಮೂಲಕ ಮಾಹಿತಿ ಸಲ್ಲಿಸುವ ಅವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ | ಮುಂದಿನ ಪೀಳಿಗೆಗಾಗಿ ಜಾತಿ ಸಮೀಕ್ಷೆಯಲ್ಲಿ ಭಾಗವಹಿಸಿ: ಡಿಕೆಶಿ ಮನವಿ

ಒಟ್ಟಾರೆಯಾಗಿ, ಈ ಸಮೀಕ್ಷೆ ಎಷ್ಟು ಬೇಗ ಮುಗುಯುತ್ತದೋ ಅಷ್ಟು ಬೇಗ ಮುಗಿಸಬೇಕು. ಆದಷ್ಟು ಬೇಗ ಶಿಕ್ಷಕರು ಶಾಲೆಯ ಕಡೆ ಮುಖ ಮಾಡಬೇಕು. ಅರ್ಧ ವಾರ್ಷಿಕ ರಜೆಯ ಗುಂಗಿನಿಂದ ಮಕ್ಕಳನ್ನು ಹೊರತಂದು ಪಠ್ಯದೆಡೆ ಸೆಳೆಯಬೇಕು.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »