“ಸಿಎಂ ಹೇಳಿದ ಮೇಲೆ ಮುಗಿತು, ಅವರು ಹೇಗೆ ಹೇಳ್ತಾರೊ ಹಾಗೆ..”: ಡಿಕೆಶಿ

"ಸಿಎಂ ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ" ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಇವರ ಈ ಹೇಳಿಕೆಯು ರಾಜ್ಯದಲ್ಲಿ ನಡೆಯುತ್ತಿದ್ದ ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ಒಂದು ಬ್ರೇಕ್‌ ಹಾಕಿದಂತಾಗಿದೆ.
Karnataka Politics DK Shivakumar
ಚಿತ್ರ ಕೃಪೆ : X ಸಾಮಾಜಿಕ ಜಾಲತಾಣ

ಕರ್ನಾಟಕದ ರಾಜಕೀಯದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಾವಧಿ ಮತ್ತು ಸಂಪುಟ ಪುನಾರಚನೆಯ ಬಗ್ಗೆ ಚರ್ಚೆಗಳು ತೀವ್ರಗೊಂಡಿವೆ. ಈ ಮಧ್ಯೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಭೇಟಿ ನೀಡಿ ಹೈಕಮಾಂಡ್‌ನೊಂದಿಗೆ ಚರ್ಚಿಸಿದ್ದಾರೆ ಎಂಬ ಉಹಾಪೋಹಾಗಳಿಗೆ ತೆರೆ ಎಳೆದಿದ್ದಾರೆ.

ಸೋಮವಾರ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ, ಶಿವಕುಮಾರ್ “ಸಿಎಂ ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ” ಎಂದಿದ್ದಾರೆ. ಇದು ರಾಜ್ಯದಲ್ಲಿ ನಡೆಯುತ್ತಿದ್ದ ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ಒಂದು ಬ್ರೇಕ್‌ ಹಾಕಿದಂತಾಗಿದೆ.

“ನಾನು ದೆಹಲಿಗೆ ಹೋಗಿದ್ದು ಕೆಲಸದ ಬಗ್ಗೆ ಮಾತ್ರ. ಹೈಕಮಾಂಡ್ ಭೇಟಿ ಬಗ್ಗೆ ನೀವು ಮಾಧ್ಯಮದವರು, ಸಾರ್ವಜನಿಕರು, ಇನ್ನೂ ಬೇರೆಯವರು ಏನು ಬೇಕಾದರೂ ಚರ್ಚೆ ಮಾಡಿಕೊಳ್ಳಿ. ಯಾರು ಬೇಕಾದರೂ ಮಾತಾಡಿಕೊಳ್ಳಲಿ. ನನಗದು ಸಂಬಂಧಪಡದ ವಿಷಯ” ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಸಿದ್ದರಾಮಯ್ಯ ಅವರು ಇತ್ತೀಚೆಗೆ ಮಂಗಳೂರಿನಲ್ಲಿ ಮಾತನಾಡುತ್ತಾ, “ಹೈಕಮಾಂಡ್ ಒಪ್ಪಿದರೇ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತೇನೆ” ಎಂದು ಹೇಳಿದ್ದರು. ಈ ಹೇಳಿಕೆಯು 2023ರಲ್ಲಿ ರಚಿಸಲಾದ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವಿನ ‘ಅಧಿಕಾರ ಹಂಚಿಕೆ ಒಪ್ಪಂದ’ದ ಬಗ್ಗೆ ಹೊಸ ಚರ್ಚೆಯನ್ನು ಉಂಟುಮಾಡಿತ್ತು. ಆ ಒಪ್ಪಂದದ ಪ್ರಕಾರ, ಐದು ವರ್ಷಗಳ ಅವಧಿಯಲ್ಲಿ ಎರಡು ಮತ್ತು ಅರ್ಧ ವರ್ಷಗಳನ್ನು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ನಿರ್ವಹಿಸಿ, ಉಳಿದ ಅವಧಿಯನ್ನು ಶಿವಕುಮಾರ್ ಅವರಿಗೆ ಬಿಟ್ಟುಕೊಡುವುದಾಗಿ ಹೇಳಲಾಗಿತ್ತು. ನವೆಂಬರ್ 20ರಂದು ಸರ್ಕಾರಕ್ಕೆ ಎರಡುವರೆ ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಈ ಚರ್ಚೆಗಳು ಮತ್ತಷ್ಟು ತೀವ್ರಗೊಂಡಿವೆ. ಆದರೆ, ಶಿವಕುಮಾರ್ ಅವರ ಈ ಹೇಳಿಕೆಯು  ಊಹಾಪೋಹಗಳನ್ನು ತಡೆದಂತಾಗಿದೆ.

ಇದನ್ನೂ ಓದಿ | ರಾಹುಲ್‌ ಗಾಂಧಿ ಕರ್ನಾಟಕಕ್ಕೆ ಭೇಟಿ: ಸಿಎಂ ಬದಲಾವಣೆ ಅಜೆಂಡಾನಾ?

ರಾಜ್ಯದಲ್ಲಿ ಸಂಪುಟ ಪುನಾರಚನೆಯ ಬಗ್ಗೆ ಸಹ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಅವರು ಕಿತ್ತೂರಿನಲ್ಲಿ ಇತ್ತೀಚೆಗೆ ಮಾತನಾಡಿ, ಹೈಕಮಾಂಡ್ 4-5 ತಿಂಗಳ ಹಿಂದೆಯೇ ಸಂಪುಟ ಪುನಾರಚನೆಗೆ ಒಪ್ಪಿಗೆ ನೀಡಿದ್ದು, ನವೆಂಬರ್ ನಂತರ ಇದು ನಡೆಯುತ್ತದೆ ಎಂದು ಹೇಳಿದ್ದರು. ಇದು ಶಿವಕುಮಾರ್ ಅವರ ನಾಯಕತ್ವ ಆಕಾಂಕ್ಷೆಗಳಿಗೆ ಧಕ್ಕೆಯಾಗಬಹುದು ಎಂದು ರಾಜಕೀಯ ವರ್ಗಗಳು ಭಾವಿಸುತ್ತಿವೆ. ಉಪ ರಾಜ್ಯಾಧ್ಯಕ್ಷ ಪರಮೇಶ್ವರ್ ಅವರು ಸಹ, “ಬಿಹಾರ ಚುನಾವಣೆ ಫಲಿತಾಂಸಗಳ ನಂತರ ಸಿಎಂ ಮತ್ತು ಡಿಸಿಎಂ ದೆಹಲಿಗೆ ಹೋಗಿ, ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದ್ದಾರೆ.   

Share:

ಮತ್ತಷ್ಟು ಸುದ್ದಿ

india labour line

ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಖಂಡನೆ: ಕಾರ್ಮಿಕ ಹಿತ ರಕ್ಷಣೆಗೆ ಇಂಡಿಯಾ ಲೇಬರ್ ಲೈನ್ ಬದ್ಧ

ದೇಶದ ಅಭಿವೃದ್ಧಿಗೆ ತಮ್ಮ ಶ್ರಮವನ್ನು ಅರ್ಪಿಸುತ್ತಿರುವ ವಲಸೆ ಕಾರ್ಮಿಕರು ಇಂದು ಮಾಲೀಕರಿಂದ ವಿವಿಧ ರೀತಿಯ ಶೋಷಣೆಗೆ ಒಳಗಾಗುತ್ತಿರುವುದು ಅತ್ಯಂತ ವಿಷಾದನೀಯವಾಗಿದೆ.

karnataka to rename

ರಾಜ್ಯದ ಎಲ್ಲಾ ಪಂಚಾಯಿತಿ ಇನ್ಮುಂದೆ ‘ಗಾಂಧಿ ಪಂಚಾಯಿತಿ’:  ಡಿಕೆಶಿ ಘೋಷಣೆ

ಮಹಾತ್ಮ ಗಾಂಧೀಜಿಯವರ ಹೆಸರನ್ನು ಗ್ರಾಮೀಣ ಭಾಗದಲ್ಲಿ ಶಾಶ್ವತವಾಗಿ ಉಳಿಸುವ ಮತ್ತು ಅವರ ಗ್ರಾಮ ಸ್ವರಾಜ್ಯದ ಕನಸನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ

karnataka to recruit

ಮುಂದಿನ ಶೈಕ್ಷಣಿಕ ವರ್ಷದೊಳಗೆ 10,800 ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಖಚಿತಪಡಿಸಲು ಮತ್ತು ಶಿಕ್ಷಕರ ಕೊರತೆಯನ್ನು ಶಾಶ್ವತವಾಗಿ ನೀಗಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ.

ಮುಂದೆ ಓದಿ »
lalbagh flower show 2026

ಲಾಲ್‌ಬಾಗ್ ಫ್ಲವರ್ ಶೋಗೆ ತೆರೆ : 8 ಲಕ್ಷಕ್ಕೂ ಅಧಿಕ ಜನರ ವೀಕ್ಷಣೆ!

ಬೆಂಗಳೂರಿನ ಕಿರೀಟಪ್ರಾಯವಾದ ಲಾಲ್‌ಬಾಗ್‌ನಲ್ಲಿ ಕಳೆದ ಹದಿಮೂರು ದಿನಗಳಿಂದ ಕಣ್ಮನ ಸೆಳೆಯುತ್ತಿದ್ದ 219ನೇ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಈಗ ತೆರೆ ಬಿದ್ದಿದೆ.

ಮುಂದೆ ಓದಿ »
bangalore atm cash theft

ಎಟಿಎಂಗೆ ತುಂಬಬೇಕಿದ್ದ 1.37 ಕೋಟಿ ರೂ. ದೋಚಿ ನೌಕರರು ಎಸ್ಕೇಪ್!

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ನಗದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಎಟಿಎಂಗಳಿಗೆ ಹಣ ತುಂಬಿಸುವ ಜವಾಬ್ದಾರಿ ಹೊತ್ತಿದ್ದ ಸಿಬ್ಬಂದಿಗಳೇ ಹಣ

ಮುಂದೆ ಓದಿ »