ದೆಹಲಿಯಲ್ಲಿ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿದ್ಧರಾಮಯ್ಯ

ಕರ್ನಾಟಕ ರಾಜಕೀಯದಲ್ಲಿ ಮತ್ತೊಮ್ಮೆ ದೊಡ್ಡ ಚರ್ಚೆಗೆ ಗ್ರಾಸವಾಗಿರುವದು ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಅವರನ್ನು ಭೇಟಿಯಾಗಿರುವುದು. 
karnataka siddaramaiah rahul gandhi

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ದೊಡ್ಡ ಚರ್ಚೆಗೆ ಗ್ರಾಸವಾಗಿರುವ ವಿಷಯ ಸಿಎಂ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವುದು. 

ಈ ಭೇಟಿಯು ಸಚಿವ ಸಂಪುಟ ಪುನರ್‌ರಚನೆ, ನಾಯಕತ್ವ ಬದಲಾವಣೆ ಮತ್ತು ಪಕ್ಷ ಸಂಘಟನೆಯ ವಿಚಾರಗಳನ್ನು ಕೇಂದ್ರೀಕರಿಸಿ ನಡೆದಿದೆ ಎನ್ನಲಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತ್ಯೇಕವಾಗಿ ರಾಹುಲ್ ಅವರನ್ನು ಭೇಟಿಯಾಗಲು ಪ್ರಯತ್ನಿಸುತ್ತಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ಕುತೂಹಲ ಮೂಡಿಸಿದೆ.

ಸಿದ್ದರಾಮಯ್ಯ ಅವರು ಕಪಿಲ್ ಸಿಬಲ್ ಅವರ ಕಾರ್ಯಕ್ರಮಕ್ಕೆ ಹಾಜರಾಗಲು ದೆಹಲಿಗೆ ಹೋಗಿದ್ದು, ಅಲ್ಲಿಯೇ ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಸುವ ಅವಕಾಶವನ್ನು ಬಳಸಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರೊಂದಿಗೆ ಸಂಪುಟ ಪುನರ್‌ರಚನೆಯ ಬಗ್ಗೆ ಚರ್ಚಿಸಿದ್ದಾರೆ ಎಂದು ವರದಿಗಳಾಗಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 30 ತಿಂಗಳು ಪೂರೈಸುತ್ತಿರುವ ಈ ಹೊತ್ತಿನಲ್ಲಿ ಸಂಪುಟ ಪುನರ್‌ರಚನೆಯ ಚರ್ಚೆ ತೀವ್ರಗೊಂಡಿದೆ. ಸಿದ್ದರಾಮಯ್ಯನವರು ಸುಮಾರು 20ಕ್ಕೂ ಹೆಚ್ಚು ಸಚಿವರನ್ನು ಕೈಬಿಟ್ಟು ಹೊಸ ಮುಖಗಳನ್ನು ಸೇರಿಸಿ ತಮ್ಮ ಹಿಡಿತ ಬಿಗಿಗೊಳಿಸುವ ಯೋಜನೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.

2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ “2.5 + 2.5 ವರ್ಷಗಳ ಸಿಎಂ ಒಪ್ಪಂದ” ಇದೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಈಗ ಸರ್ಕಾರದ ಅವಧಿ ಅರ್ಧಕ್ಕೆ ಬಂದಿರುವುದರಿಂದ ಡಿಕೆಶಿ ಬಳಗದಿಂದ ಸಿಎಂ ಸ್ಥಾನಕ್ಕೆ ಒತ್ತಡ ಹೆಚ್ಚಾಗಿದೆ. ಆದರೆ ಸಿದ್ದರಾಮಯ್ಯ ಅವರು “ಪೂರ್ಣ 5 ವರ್ಷ ನಾನೇ ಸಿಎಂ” ಎಂದು ಸ್ಪಷ್ಟಪಡಿಸುತ್ತಿದ್ದು, ಹೈಕಮಾಂಡ್ ಈಗಾಗಲೇ ಯಾವುದೇ ಬದಲಾವಣೆ ಇಲ್ಲ ಎಂದು ಸೂಚಿಸಿದೆ ಎನ್ನಲಾಗಿದೆ. ರಾಹುಲ್ ಗಾಂಧಿ ಅವರು ಈ ಹಿಂದೆಯೂ ಇಬ್ಬರನ್ನೂ ಒಟ್ಟಾಗಿ ಕರೆದು “ಒಗ್ಗಟ್ಟಾಗಿ ಕೆಲಸ ಮಾಡಿ” ಎಂದು ಸೂಚನೆ ನೀಡಿದ್ದರು.

ಡಿ.ಕೆ. ಶಿವಕುಮಾರ್ ಅವರು ಕೂಡ ದೆಹಲಿಯಲ್ಲೇ ಇದ್ದು, ರಾಹುಲ್ ಗಾಂಧಿ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗುವ ಸಾಧ್ಯತೆಯಿದೆ. “ನಾಯಕತ್ವ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆ ಇಲ್ಲ. ಪಕ್ಷದ ಕಾರ್ಯಕ್ರಮಗಳ ಬಗ್ಗೆ ಮಾತ್ರ ಮಾತನಾಡುತ್ತೇನೆ” ಎಂದು ಡಿಕೆಶಿ ಹೇಳಿಕೊಂಡಿದ್ದಾರೆ. ಆದರೆ ಇಬ್ಬರ ಪ್ರತ್ಯೇಕ ಭೇಟಿಯು ರಾಜ್ಯದಲ್ಲಿ ಬಣರಾಜಕೀಯ ಮತ್ತೇ ಮುನ್ನೇಲೆಗೆ ಬಂದಿದೆ. ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸೂರ್ಜೇವಾಲಾ ಅವರೊಂದಿಗೂ ಸಿದ್ದು ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ | ರಾಹುಲ್‌ ಗಾಂಧಿ ಕರ್ನಾಟಕಕ್ಕೆ ಭೇಟಿ: ಸಿಎಂ ಬದಲಾವಣೆ ಅಜೆಂಡಾನಾ?

ಈ ಭೇಟಿಯ ಹಿನ್ನೆಲೆಯಲ್ಲಿ ಬೆಳಗಾವಿ ಅಧಿವೇಶನಕ್ಕೂ ಮುನ್ನ ಸಂಪುಟ ಪುನರ್‌ರಚನೆ ನಡೆಯಬಹುದು ಎಂಬ ಊಹಾಪೋಹಗಳಿವೆ. ಸಿದ್ದರಾಮಯ್ಯ ಬಳಗದಿಂದ ದೆಹಲಿಯಲ್ಲಿ ಊಟದ ಸಭೆ ಆಯೋಜಿಸಲಾಗಿದ್ದು, ಡಿಕೆಶಿ ಬಳಗ ಇದನ್ನು ತಡೆಯಲು ಪ್ರಯತ್ನಿಸುತ್ತಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಬಿಹಾರ ಚುನಾವಣೆ ಫಲಿತಾಂಶದ ನಂತರ ಹೈಕಮಾಂಡ್ ದೊಡ್ಡ ನಿರ್ಧಾರ ಕೈಗೊಳ್ಳಬಹುದು ಎಂಬ ಲೆಕ್ಕಾಚಾರವೂ ಇದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »