“ಬ್ರಾಹ್ಮಣನ ಮಗಳ ದಾನದವರೆಗೆ ಮೀಸಲಾತಿ ಮುಂದುವರಿಯಲಿ”..

“ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ನನ್ನ ಮಗನು ಆಕೆಯೊಂದಿಗೆ ಸಂಬಂಧ ಹೊಂದುವವರೆಗೆ ಮೀಸಲಾತಿ ಮುಂದುವರಿಯಬೇಕು” ಎಂದು ಐಎಎಸ್ ಅಧಿಕಾರಿ ಸಂತೋಷ್ ವರ್ಮಾ ಹೇಳಿದರು.
ias santosh verma

“ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ನನ್ನ ಮಗನು ಆಕೆಯೊಂದಿಗೆ ಸಂಬಂಧ ಹೊಂದುವವರೆಗೆ ಮೀಸಲಾತಿ ಮುಂದುವರಿಯಬೇಕು” ಎಂದು ಮಧ್ಯಪ್ರದೇಶದ ಹಿರಿಯ ಐಎಎಸ್ ಅಧಿಕಾರಿ ಸಂತೋಷ್ ವರ್ಮಾ ಹೇಳಿದರು.

ಐಎಎಸ್ ಅಧಿಕಾರಿ ಸಂತೋಷ್ ವರ್ಮಾ ಅವರ ವಿವಾದಾತ್ಮಕ ಹೇಳಿಕೆಯೊಂದಿಗೆ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ವಲಯಗಳಲ್ಲಿ ಚರ್ಚೆಗಿಡಾಗಿದ್ದಾರೆ. ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಅಧಿಕಾರಿಗಳು ಮತ್ತು ನೌಕರರ ಸಂಘ (ಎಜೆಎಕೆಎಸ್)ದ ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವರ್ಮಾ, ಭಾನುವಾರ ಭೋಪಾಲ್‌ನ ಅಂಬೇಡ್ಕರ್ ಮೈದಾನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಈ ಸಭೆಯಲ್ಲಿ ನೂರಾರು ನೌಕರರು ಭಾಗವಹಿಸಿದ್ದರು. ವರ್ಮಾ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ದೃಷ್ಟಿಕೋನವನ್ನು ಉಲ್ಲೇಖಿಸಿ, ಮೀಸಲಾತಿಯನ್ನು ಸಾಮಾಜಿಕ ನ್ಯಾಯದ ಸಾಧನವೆಂದು ವಾದಿಸಿದರು. “ಮೀಸಲಾತಿ ಸಾಮಾಜಿಕ ಸಮಾನತೆಗಾಗಿ ಅಗತ್ಯ. ಬ್ರಾಹ್ಮಣ ಸಮುದಾಯದವರು ತಮ್ಮ ಮಗಳನ್ನು ನಮ್ಮ ಮಕ್ಕಳಿಗೆ ವರದಾನ ಮಾಡುವಂತಹ ಸಮಾನತೆ ಸಾಧ್ಯವಾದರೆ ಮಾತ್ರ ಮೀಸಲಾತಿ ರದ್ದಾಗಬೇಕು” ಎಂದು ಅವರು ಹೇಳಿದರು. ಈ ಮಾತುಗಳು ವಿವಾದಕ್ಕೆ ಕಾರಣವಾಗಿವೆ.

ಬ್ರಾಹ್ಮಣ ಸಂಘಟನೆಗಳಾದ ಆಲ್ ಇಂಡಿಯಾ ಬ್ರಾಹ್ಮಣ್ ಕಮ್ಯುನಿಟಿ ಅಧ್ಯಕ್ಷ ಪುಷ್ಪೇಂದ್ರ ಮಿಶ್ರಾ ಅವರು, “ಇದು ಅಪಮಾನಕಾರಿ, ಜಾತಿವಾದಿ ಮತ್ತು ಬ್ರಾಹ್ಮಣ ಮಗಳಿಗೆ ಧಿಕ್ಕಾರ್ಯದಾಯಕ ಹೇಳಿಕೆ. ವರ್ಮಾ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಇಲ್ಲದಿದ್ದರೆ ಬ್ರಾಹ್ಮಣ ಸಮಾಜ ರಸ್ತೆಗಿಳಿದು ಹೋರಾಟ ನಡೆಸುತ್ತದೆ” ಎಂದು ಹೇಳಿದ್ದಾರೆ.

ಸಂತೋಷ್ ವರ್ಮಾ ಅವರ ಹಿನ್ನೆಲೆಯೂ ವಿವಾದಾಸ್ಪದವಾಗಿದೆ. ಮೂಲತಃ ಮಧ್ಯಪ್ರದೇಶ ರಾಜ್ಯ ಅಧಿಕಾರಿ ಸೇವಾ (ಎಂಪಿಎಎಸ್)ಯಿಂದ ಐಎಎಸ್‌ಗೆ ಉನ್ನತಿಯಾಗಿದ್ದ ಅವರು, 2021ರಲ್ಲಿ ಸಂತೋಷ್ ವರ್ಮಾ ಅವರ ಮೇಲೆ ಮಹಿಳೆಯೊಬ್ಬರ ಮೇಲೆ ಲೈಂಗಿಕ ಕಿರುಕುಳ, ಬೆದರಿಕೆ, ಅವಾಚ್ಯ ಸಾಮಗ್ರಿ ಹಂಚಿಕೆ ಮತ್ತು ನ್ಯಾಯಾಲಯದ ದಾಖಲೆಗಳ ನಕಲು ಆರೋಪಗಳು ಬಂದಿದ್ದವು.

ಇದನ್ನೂ ಓದಿ | ಒಂದು ಶೂ, ಒಂದು ಗುಂಡು ಹೇಳಿದ ಜಾತೀಯತೆಯ ಕ್ರೂರ ಕತೆ

ಈ ಕೇಸ್‌ನಲ್ಲಿ ಅವರು ನ್ಯಾಯಾಲಯದ ಆದೇಶಗಳನ್ನು ನಕಲು ಮಾಡಿ, ಸಿಬಿಐ ನ್ಯಾಯಾಧೀಶರ ಸಹಿ ಕದ್ದು ತಮ್ಮ ಉನ್ನತಿಗೆ ಬಳಸಿಕೊಂಡಿದ್ದಾರೆ ಎಂದು ಆರೋಪವಿದೆ. ಇಂದೋರ್ ಪೊಲೀಸ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಈಗ ಕೃಷಿ ಇಲಾಖೆಯಲ್ಲಿ ಉಪ ಕಾರ್ಯದರ್ಶಿ ಸ್ಥಾನದಲ್ಲಿರುವ ಅವರು, ಎಜೆಎಕೆಎಸ್ ಅಧ್ಯಕ್ಷರಾಗಿ ಆಯ್ಕೆಯಾಗಿ ಮೀಸಲಾತಿ ಹೋರಾಟವನ್ನು ಮುನ್ನಡೆಸುತ್ತಿದ್ದಾರೆ. ಆದರೆ ಈ ಹೇಳಿಕೆಯಿಂದ ಅವರ ವೈಯಕ್ತಿಕ ಇತಿಹಾಸವೂ ಮತ್ತೊಮ್ಮೆ ಮುಂದೆ ಬಂದಿದೆ.

Share:

ಮತ್ತಷ್ಟು ಸುದ್ದಿ

ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮ

ಅಲೆದಾಟ ಮುಕ್ತ ಆಡಳಿತದತ್ತ ಮೇಲುಕೋಟೆ ಮನೆ ಬಾಗಿಲಿಗೇ ಬಂದ ‘ಸರ್ಕಾರಿ ಸೇವೆ’ ಕಾರ್ಯಕ್ರಮ  ತಂತ್ರಜ್ಞಾನದ ಅರಿವನ್ನು ಆಡಳಿತ ಯಂತ್ರಕ್ಕೆ ವರ್ಗಾಯಿಸಿದ

ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಲು ಮನವಿ

ಕಾಂಗ್ರೆಸ್‌ ಹೈಕಮಾಂಡ್‌ಗೆ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ಒತ್ತಾಯ ಮೈಸೂರು: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರಿಗೆ

ಮುಂದೆ ಓದಿ »

ಬೆಂಗಳೂರಿನಲ್ಲಿ ಮೇ 25 ರಂದು 3ನೇ ಕರ್ನಾಟಕ ಸಂಘಟಕರ ಸಮಾವೇಶ

ಸಾಂಸ್ಕೃತಿಕ ನೀತಿ ಜಾರಿ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಆಗ್ರಹಿಸಿ ರಂಗಕರ್ಮಿಗಳು ಹಾಗೂ ಸಾಂಸ್ಕೃತಿಕ ಸಂಘಟಕರ ಬೃಹತ್‌ ಸಮಾಲೋಚನೆ ಬೆಂಗಳೂರು: ಕರ್ನಾಟಕ

ಮುಂದೆ ಓದಿ »

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »