ಪೋಕ್ಸೋ ಪ್ರಕರಣ: ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ರಿಲೀಫ್!

ಮುರುಘಾ ಮಠದ ಮುಖ್ಯಸ್ಥ ಡಾ. ಶಿವಮೂರ್ತಿ ಮುರುಘಾ ಶರಣರು ಸೇರಿ ಇತರ ನಾಲ್ಕು ಆರೋಪಿಗಳನ್ನು ನ್ಯಾಯಾಲಯ ಬುಧವಾರ ಸಂಪೂರ್ಣ ಖುಲಾಸೆಗೊಳಿಸಿ ತೀರ್ಪು ನೀಡಿದೆ. 
murugha shree acquitted pocso

ಚಿತ್ರದುರ್ಗದ ಪ್ರಖ್ಯಾತ ಮುರುಘಾ ಮಠದ ಮುಖ್ಯಸ್ಥ ಡಾ. ಶಿವಮೂರ್ತಿ ಮುರುಘಾ ಶರಣರು ಮತ್ತು ಇತರ ನಾಲ್ವರು ಆರೋಪಿಗಳನ್ನು ಪೋಕ್ಸೋ ಕಾಯ್ದೆ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ಸಂಪೂರ್ಣ ಖುಲಾಸೆಗೊಳಿಸಿ ತೀರ್ಪು ನೀಡಿದೆ. 

2022ರಲ್ಲಿ ಆರೋಪಗಳು ಎದುರಾದ ನಂತರ ಈ ಪ್ರಕರಣ ರಾಜ್ಯದಾದ್ಯಂತ ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು. ಆದರೆ, ಸಾಕ್ಷ್ಯಾಧಾರಗಳ ಕೊರತೆ ಮತ್ತು ವಿಶ್ವಾಸಾರ್ಹತೆಯ ಕೊರತೆಯನ್ನು ಗಮನಿಸಿ ನ್ಯಾಯಾಧೀಶ ಎಸ್.ಎಲ್. ಪಾಟೀಲ್ ಅವರು ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸಿದ್ದಾರೆ.

ಆಗಸ್ಟ್ 31,2022 ರಂದು ಮೈಸೂರು ಮೂಲದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮುರುಘಾ ಮಠದಲ್ಲಿ ವಾಸಿಸುತ್ತಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ದೂರು ದಾಖಲಿಸಿದ್ದರು. ಇದರೊಂದಿಗೆ ಪೋಕ್ಸೋ ಕಾಯ್ದೆ ಸೆಕ್ಷನ್ 4, 6, 8, 12, ಎಸ್‌ಸಿ/ಎಸ್‌ಟಿ ಅತ್ಯಾಚಾರ ನಿಗ್ರಹ ಕಾಯ್ದೆ ಮತ್ತು ಧಾರ್ಮಿಕ ಸಂಸ್ಥೆಗಳ ಕಾಯ್ದೆಯಡಿ ಪ್ರಕರಣ ದಾಖಲಾಗಿ, ಸೆಪ್ಟೆಂಬರ್ 1ರಂದು ಶಿವಮೂರ್ತಿ ಶರಣರನ್ನು ಬಂಧಿಸಲಾಯಿತು. ಸುಮಾರು 14 ತಿಂಗಳ ಕಾಲ ಬಳ್ಳಾರಿ ಮತ್ತು ಚಿತ್ರದುರ್ಗ ಜೈಲಿನಲ್ಲಿದ್ದ ಶ್ರೀಗಳು 2023 ನವೆಂಬರ್ 16ರಂದು ಕರ್ನಾಟಕ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆದು ಹೊರಬಂದಿದ್ದರು.

ತನಿಖೆಯ ಸಮಯದಲ್ಲಿ ಆರೋಪಿ ಪಕ್ಷದ ವಕೀಲರು ಸಾಕ್ಷ್ಯಗಳಲ್ಲಿ ಗಂಭೀರ ದೋಷಗಳನ್ನು ಸಾಬೀತುಪಡಿಸಿದ್ದರು. ಬಾಲಕಿಯರ ವೈದ್ಯಕೀಯ ವರದಿಯಲ್ಲಿ ಲೈಂಗಿಕ ದೌರ್ಜನ್ಯದ ಯಾವುದೇ ಆಧಾರ ಕಂಡುಬಂದಿಲ್ಲ. ದೂರುದಾರರ ಮೊದಲ ಹೇಳಿಕೆಯನ್ನು ವೀಡಿಯೊ/ಆಡಿಯೋ ರೆಕಾರ್ಡ್ ಮಾಡದೇ ಕೇವಲ ಬರೆದುಕೊಂಡಿದ್ದಾರೆ, ತನಿಖಾಧಿಕಾರಿಗಳು ಆರೋಪಿಗಳ ಪರವಾಗಿ ಹೇಳಿಕೆ ನೀಡಿರುವುದು, ಮಠದ ವಾರ್ಡನ್ ರುದ್ರೇಶ್ ಮತ್ತು ಇತರ ಸಾಕ್ಷಿಗಳು ತಿರುಗಿ ಹೇಳಿಕೆ ನೀಡಿರುವುದು, ಇವೆಲ್ಲವೂ ನ್ಯಾಯಾಲಯದ ಗಮನಕ್ಕೆ ಬಂದವು.

ಇದನ್ನೂ ಓದಿ | ಪೋಕ್ಸೊ ಪ್ರಕರಣ: ಹೈಕೋರ್ಟ್‌ನಲ್ಲಿ ಬಿಎಸ್‌ವೈಗೆ ಭಾರಿ ಹಿನ್ನಡೆ

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಲಕ್ಷ್ಮೀನಾರಾಯಣ ಅವರನ್ನು ಸ್ವತಃ ನ್ಯಾಯಾಲಯ ಕರೆಸಿ ವಿಚಾರಣೆ ನಡೆಸಿದ್ದು, ಅವರು “ದೂರು ಸತ್ಯಕ್ಕೆ ದೂರವಾಗಿದೆ” ಎಂದು ಸ್ವೀಕರಿಸಿದ್ದಾರೆ ಎನ್ನುವುದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »