ಕುರ್ಚಿ ಕದನಕ್ಕೆ ಸಿಎಂ ‘ಫುಲ್ ಸ್ಟಾಪ್’: “ಎರಡೂವರೆ ವರ್ಷದ ಒಪ್ಪಂದವೇ ಇಲ್ಲ” ಎಂದ ಸಿದ್ದು!

"ಎರಡೂವರೆ ವರ್ಷಕ್ಕೆ ಸಿಎಂ ಹುದ್ದೆ ಹಂಚಿಕೆ ಅಂತ ಎಲ್ಲಿಯೂ ತೀರ್ಮಾನ ಆಗಿಲ್ಲ. ಹೈಕಮಾಂಡ್ ಮಟ್ಟದಲ್ಲಿ ಅಂತಹ ಯಾವುದೇ ಒಪ್ಪಂದ ನಡೆದಿಲ್ಲ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
siddaramaiah denies

“ಎರಡೂವರೆ ವರ್ಷಕ್ಕೆ ಸಿಎಂ ಹುದ್ದೆ ಹಂಚಿಕೆ ಅಂತ ಎಲ್ಲಿಯೂ ತೀರ್ಮಾನ ಆಗಿಲ್ಲ. ಹೈಕಮಾಂಡ್ ಮಟ್ಟದಲ್ಲಿ ಅಂತಹ ಯಾವುದೇ ಒಪ್ಪಂದ ನಡೆದಿಲ್ಲ,” ಎಂದು ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ನೇರವಾಗಿ ಹೇಳುವ ಮೂಲಕ ಪೂರ್ಣಾವಧಿಗೆ ತಾವೇ ಮುಖ್ಯಮಂತ್ರಿ ಎಂಬುದನ್ನು ಪರೋಕ್ಷವಾಗಿ ಘೋಷಿಸಿದರು.

ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನವು ಕೇವಲ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಮಾತ್ರ ಸೀಮಿತವಾಗದೆ, ರಾಜ್ಯ ರಾಜಕೀಯದ ಮಹತ್ವದ ಬೆಳವಣಿಗೆಗೂ ಸಾಕ್ಷಿಯಾಗಿದೆ. ಗುರುವಾರ ನಡೆದ ಕಲಾಪದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಯ ಕುರಿತು ಗಂಭೀರ ಚರ್ಚೆ ನಡೆಯುತ್ತಿದ್ದ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ನಡುವೆ ನಡೆದ ಸ್ವಾರಸ್ಯಕರ ಸಂಭಾಷಣೆ ಹಾಗೂ ಸಿಎಂ ನೀಡಿದ ಅಧಿಕಾರಾವಧಿಯ ಸ್ಪಷ್ಟನೆ ಈಗ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಕಳೆದ ನಾಲ್ಕು ದಿನಗಳಿಂದ ಸಿಎಂ ಸಿದ್ದರಾಮಯ್ಯನವರು ಅನಾರೋಗ್ಯದ ಕಾರಣದಿಂದ ಅಥವಾ ಕೆಲಸದ ಒತ್ತಡದಿಂದ ಕೊಂಚ ಬಳಲಿದಂತೆ ಕಾಣುತ್ತಿದ್ದರು. ಇದನ್ನು ಗಮನಿಸಿದ ವಿಪಕ್ಷ ನಾಯಕ ಆರ್. ಅಶೋಕ್, ಸದನದಲ್ಲಿ ಮಾತನಾಡುವಾಗ ಸಿಎಂ ಕಾಲೆಳೆಯುವ ಪ್ರಯತ್ನ ಮಾಡಿದರು. “ಕಳೆದ ನಾಲ್ಕು ದಿನಗಳಿಂದ ನೀವು ತುಂಬಾ ಬಳಲಿದ್ರಿ. ನಾವು ಇದು ದೈಹಿಕ ಆಯಾಸ ಅಲ್ಲ, ‘ರಾಜಕೀಯ ನಿಶ್ಯಕ್ತಿ’ ಅಂದುಕೊಂಡಿದ್ವಿ. ಈಗ ನೋಡಿದರೆ ನಿಮಗೆ ರಾಜಕೀಯ ಶಕ್ತಿ ಬಂದಿದೆಯಾ?” ಎಂದು ಅಶೋಕ್ ವ್ಯಂಗ್ಯವಾಗಿ ಪ್ರಶ್ನಿಸಿದರು.

ಇದನ್ನೂ ಓದಿ | ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಸಾವು!

ಅಶೋಕ್ ಅವರ ಈ ಮಾತಿಗೆ ತಮ್ಮದೇ ಶೈಲಿಯಲ್ಲಿ ಉತ್ತರಿಸಿದ ಸಿದ್ದರಾಮಯ್ಯ, “ನನಗೆ ರಾಜಕೀಯ ನಿಶ್ಯಕ್ತಿ ಅನ್ನೋದು ಇಲ್ವೇ ಇಲ್ಲ. ಅಂಥ ಪರಿಸ್ಥಿತಿ ಅಥವಾ ಅವಕಾಶ ನನ್ನ ರಾಜಕೀಯ ಜೀವನದಲ್ಲಿ ಸೃಷ್ಟಿಯಾಗೋದಿಲ್ಲ. ಅಷ್ಟೇ ಅಲ್ಲ, ರಾಜಕೀಯವನ್ನು ಅಷ್ಟೊಂದು ತಲೆ ಕೆಡಿಸಿಕೊಂಡು, ಮೈಮೇಲೆ ಎಳೆದುಕೊಂಡು ಮಾಡುವ ಅಗತ್ಯವೂ ನನಗಿಲ್ಲ. ನಾನು ಯಾವಾಗಲೂ ಲವಲವಿಕೆಯಿಂದಲೇ ಇರುತ್ತೇನೆ,” ಎಂದು ನಗುನಗುತ್ತಲೇ ತಿರುಗೇಟು ನೀಡಿದರು. ಈ ಮಾತುಕತೆ ಸದನದಲ್ಲಿ ಕೆಲಕಾಲ ನಗೆಯುಕ್ಕಿಸಿ, ಗಂಭೀರ ವಾತಾವರಣವನ್ನು ತಿಳಿಗೊಳಿಸಿತು.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »