ಡಿ.ಕೆ. ಶಿವಕುಮಾರ್‌ಗೆ ಪರೋಕ್ಷವಾಗಿ ‘ಟಾಂಗ್’ ನೀಡಿದ ಎಂ.ಬಿ.ಪಾಟೀಲ್‌!

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವದ ಹಗ್ಗಜಗ್ಗಾಟ ತೆಗೆದುಕೊಳ್ಳುವ ಪೈಪೋಟಿ ಮುಂದುವರಿದಿರುವ ಬೆನ್ನಲ್ಲೇ, ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
mb patil backs kharge

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವದ ಹಗ್ಗಜಗ್ಗಾಟ ಮತ್ತು ಶ್ರೇಯಸ್ಸು (Credit) ತೆಗೆದುಕೊಳ್ಳುವ ಪೈಪೋಟಿ ಮುಂದುವರಿದಿರುವ ಬೆನ್ನಲ್ಲೇ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಇತ್ತೀಚಿನ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಈ ಹೇಳಿಕೆಯನ್ನು ಬೆಂಬಲಿಸುವ ಮೂಲಕ ಸಚಿವ ಎಂ.ಬಿ. ಪಾಟೀಲ್‌ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಈಗ ಕೇಳಿಬರುತ್ತಿವೆ.

ತವರಿನ ಜಿಲ್ಲೆ ಕಲಬುರಗಿಯಲ್ಲಿ ಶನಿವಾರ ಮಾತನಾಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಒಗ್ಗಟ್ಟಿನ ಮಂತ್ರ ಜಪಿಸಿದ್ದರು. “ಕಾಂಗ್ರೆಸ್ ಪಕ್ಷ ಯಾರೋ ಒಬ್ಬ ನಾಯಕನಿಂದ ಬೆಳೆದಿಲ್ಲ ಅಥವಾ ಅಧಿಕಾರಕ್ಕೆ ಬಂದಿಲ್ಲ. ಇದು ಕಾರ್ಯಕರ್ತರ ಪಕ್ಷ. ಹೀಗಾಗಿ ಯಾರೊಬ್ಬರೂ ‘ನನ್ನಿಂದಲೇ ಪಕ್ಷ ಅಧಿಕಾರಕ್ಕೆ ಬಂತು’, ‘ನಾನೇ ಪಕ್ಷ ಕಟ್ಟಿದೆ’ ಎಂದು ಹೇಳಿಕೊಳ್ಳಬಾರದು. ಪಕ್ಷ ಅಂದಮೇಲೆ ಅಲ್ಲಿ ಎಲ್ಲರ ಪಾತ್ರವೂ ಇರುತ್ತದೆ,” ಎಂದು ಖಡಕ್ ಸಂದೇಶ ರವಾನಿಸಿದ್ದರು. ಈ ಹೇಳಿಕೆಯು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ನೀಡಿದ ಎಚ್ಚರಿಕೆ ಎಂದೇ ವಿಶ್ಲೇಷಿಸಲಾಗಿತ್ತು.

ಮಲ್ಲಿಕಾರ್ಜುನ್‌ ಖರ್ಗೆ ಅವರ ಈ ಹೇಳಿಕೆಗೆ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಖರ್ಗೆ ಅವರು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮತ್ತು ಹಿರಿಯರು. ಅವರು ಹೇಳಿದ ಮೇಲೆ ಮುಗಿಯಿತು, ಅದೇ ಅಂತಿಮ. ಅವರ ಮಾತಿಗೆ ನಾವೆಲ್ಲರೂ ಬದ್ಧರಾಗಿರಬೇಕು,” ಎಂದು ಹೇಳುವ ಮೂಲಕ, ಪಕ್ಷದ ಗೆಲುವಿನ ಸಂಪೂರ್ಣ ಶ್ರೇಯಸ್ಸು ತಮಗೆ ಸಲ್ಲಬೇಕೆಂಬ ಮನಸ್ಥಿತಿ ಹೊಂದಿರುವ ನಾಯಕರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.

ಇದನ್ನೂ ಓದಿ | ಕುರ್ಚಿ ಕದನಕ್ಕೆ ಸಿಎಂ ‘ಫುಲ್ ಸ್ಟಾಪ್’: “ಎರಡೂವರೆ ವರ್ಷದ ಒಪ್ಪಂದವೇ ಇಲ್ಲ” ಎಂದ ಸಿದ್ದು!

ಮುಂದುವರಿದು ಮಾತನಾಡಿದ ಎಂಬಿಪಿ, “ಚುನಾವಣೆ ಗೆಲ್ಲಲು ಎಲ್ಲರೂ ಶ್ರಮಿಸಿದ್ದಾರೆ. ಸಿದ್ದರಾಮಯ್ಯನವರ ಜನಪ್ರಿಯತೆ, ಡಿ.ಕೆ. ಶಿವಕುಮಾರ್ ಅವರ ಸಂಘಟನೆ ಹಾಗೂ ಮಲ್ಲಿಕಾರ್ಜುನ ಖರ್ಗೆಯವರ ನಾಯಕತ್ವ ಎಲ್ಲವೂ ಸೇರಿದಾಗ ಮಾತ್ರ ಗೆಲುವು ಸಾಧ್ಯವಾಗಿದೆ. ನಾನು ಮಾಡಿದೆ, ನಾನು ಮಾಡಿದೆ ಎಂದು ಯಾರೂ ಹೇಳಿಕೊಳ್ಳುವಂತಿಲ್ಲ,” ಎಂದು ಎಂಬಿಪಿ ಸ್ಪಷ್ಟಪಡಿಸಿದರು.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »