ರಾಜ್ಯ ರೈತರಿಗೆ ಸಿಹಿಸುದ್ದಿ: ₹8000 ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಆರಂಭ

ಕರ್ನಾಟಕದಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿನ ತೊಗರಿ ಬೇಳೆಗೆ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ.
  Toor Dal  

ಕರ್ನಾಟಕದಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿನ ತೊಗರಿ ಬೇಳೆಗೆ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್ ತೊಗರಿಗೆ ₹8,000 ಬೆಂಬಲ ಬೆಲೆ ನಿಗದಿಪಡಿಸಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತರಿಂದ ನೇರವಾಗಿ ಎಫ್‌ಎಕ್ಯೂ(FAQ) ಗುಣಮಟ್ಟದ ತೊಗರಿ ಖರೀದಿಸಲಾಗುತ್ತದೆ.

 ಇತ್ತೀಚೆಗೆ ಮಾರುಕಟ್ಟೆಯಲ್ಲಿ ತೊಗರಿ ಬೆಲೆ ಕುಸಿತ ಕಂಡಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮನವಿಯ ಮೇರೆಗೆ ಕೇಂದ್ರ ಸರ್ಕಾರ ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (NAFED) ಮತ್ತು ನ್ಯಾಷನಲ್ ಕೋಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್(NCCF) ಮೂಲಕ ಕರ್ನಾಟಕದಲ್ಲಿ ಸುಮಾರು 9.67 ಲಕ್ಷ ಟನ್ ತೊಗರಿ ಖರೀದಿಗೆ ಅನುಮೋದನೆ ನೀಡಿದೆ. ಇದು ರೈತರಿಗೆ ಭಾರೀ ನೆರವಾಗಲಿದೆ.

ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಗಳಲ್ಲಿ ಈ ಖರೀದಿ ಪ್ರಕ್ರಿಯೆಗೆ ಒಪ್ಪಿಗೆ ಸಿಕ್ಕಿದೆ.  ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಖರೀದಿ ಕೇಂದ್ರಗಳ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಲ್ ತೊಗರಿ ಖರೀದಿಗೆ ಅವಕಾಶವಿದ್ದು, ಇದು ರೈತರ ಫ್ರೂಟ್ಸ್ (FRUITS) ತಂತ್ರಾಂಶದಲ್ಲಿ ನೋಂದಾಯಿತ ಬೆಳೆ ವಿಸ್ತೀರ್ಣದ ಆಧಾರದ ಮೇಲೆ ನಿರ್ಧಾರವಾಗಲಿದೆ. ಖರೀದಿ ಕೇಂದ್ರಗಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (PACS), ಎಫ್‌ಪಿಒಗಳು ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಸ್ಥಾಪಿಸಲಾಗುತ್ತವೆ. ರೈತರು ನೋಂದಣಿಗೆ ಆಧಾರ್ ಕಾರ್ಡ್, ಪಹಣಿ ಪತ್ರಿಕೆ, ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಸಲ್ಲಿಸಬೇಕು. POS ಯಂತ್ರದ ಮೂಲಕ ಆಧಾರ್ ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯವಾಗಿದೆ.

ರೈತರ ನೋಂದಣಿ ಪ್ರಕ್ರಿಯೆ ಸುಮಾರು 80-90 ದಿನಗಳವರೆಗೆ ನಡೆಯಲಿದ್ದು, ಖರೀದಿ ಕೇಂದ್ರಗಳಲ್ಲಿ ಗೋದಾಮುಗಳನ್ನು ಸ್ವಚ್ಛಗೊಳಿಸಿ, ತೂಕ ಮಾಪನ ಮತ್ತು ಮೂಲಭೂತ ಸೌಕರ್ಯಗಳನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕಲಬುರಗಿ, ಬೀದರ್, ಯಾದಗಿರ್, ರಾಯಚೂರು, ವಿಜಯಪುರ ಸೇರಿದಂತೆ ತೊಗರಿ ಬೆಳೆಯುವ ಪ್ರಮುಖ ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ರಾಜ್ಯ ಸರ್ಕಾರ ಕೂಡಾ ಕೆಲವು ಸಂದರ್ಭಗಳಲ್ಲಿ ಪ್ರೋತ್ಸಾಹ ಧನ ನೀಡುತ್ತಿದೆ.

ಇದನ್ನೂ ಓದಿ | ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ: ಟನ್‌ಗೆ 3,300 ರೂ.

ಈ ಯೋಜನೆಯಿಂದ ರೈತರು ಮಾರುಕಟ್ಟೆ ಅಪಾಯದಿಂದ ರಕ್ಷಣೆ ಪಡೆಯಲಿದ್ದಾರೆ. ಕೇಂದ್ರ ಸರ್ಕಾರದ ಪಿಎಮ್‌ – ಆಶಾ ಯೋಜನೆಯಡಿ ದ್ವಿದಳ ಧಾನ್ಯಗಳ ಖರೀದಿಯನ್ನು ಬಲಪಡಿಸಲಾಗುತ್ತಿದ್ದು, 2027ರ ವೇಳೆಗೆ ದೇಶವನ್ನು ದ್ವಿದಳ ಧಾನ್ಯಗಳಲ್ಲಿ ಸ್ವಾವಲಂಬಿಯಾಗಿಸುವ ಗುರಿ ಹೊಂದಲಾಗಿದೆ. ರೈತರು ತಮ್ಮ ಸಮೀಪದ ಖರೀದಿ ಕೇಂದ್ರಗಳಲ್ಲಿ ಫ್ರೂಟ್ಸ್ ಐಡಿ ಜೊತೆ ನೋಂದಾಯಿಸಿಕೊಂಡು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.ಈ ಖರೀದಿ ಪ್ರಕ್ರಿಯೆ ರೈತರ ಆರ್ಥಿಕ ಸ್ಥಿರತೆಗೆ ಬಲ ನೀಡಲಿದ್ದು, ತೊಗರಿ ಬೆಳೆಗಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.  

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »