ಬಾಂಗ್ಲಾದೇಶ: ಯೂನಸ್ ಸರ್ಕಾರದ ವಿರುದ್ಧ ಶೇಖ್‌ ಹಸೀನಾ ಆಕ್ರೋಶ

ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರು ಹಂಗಾಮಿ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರ ಆಡಳಿತದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
sheikh hasina slams yunus

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳು ಮಿತಿಮೀರುತ್ತಿರುವ ಸಂದರ್ಭದಲ್ಲೇ, ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರು ಹಂಗಾಮಿ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರ ಆಡಳಿತದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರುವ ನೆಪದಲ್ಲಿ ಹೊರಡಿಸಿದ ಸಂದೇಶದಲ್ಲಿ, ಹಸೀನಾ ಅವರು ಪ್ರಸ್ತುತ ಆಡಳಿತವನ್ನು “ಅಕ್ರಮ ಸರ್ಕಾರ” ಎಂದು ಜರಿದಿದ್ದು, ಅಲ್ಪಸಂಖ್ಯಾತರ ಮೇಲೆ “ಹೇಳತೀರದ ಚಿತ್ರಹಿಂಸೆ” ನೀಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ತಮ್ಮ ಸಂದೇಶದಲ್ಲಿ ಬಾಂಗ್ಲಾದೇಶದ ಗತಕಾಲದ ವೈಭವವನ್ನು ಸ್ಮರಿಸಿದ ಹಸೀನಾ, “ಒಂದು ಕಾಲದಲ್ಲಿ ಬಾಂಗ್ಲಾದೇಶ ಇಡೀ ಜಗತ್ತಿಗೆ ಕೋಮು ಸೌಹಾರ್ದತೆಯ ಉಜ್ವಲ ಉದಾಹರಣೆಯಾಗಿತ್ತು. ಎಲ್ಲಾ ಧರ್ಮದ ಜನರು ಶಾಂತಿ ಮತ್ತು ಪ್ರೀತಿಯಿಂದ ಬಾಳುತ್ತಿದ್ದರು. ಆದರೆ ಇಂದು ಆ ಸೌಹಾರ್ದತೆಯನ್ನು ನಾಶ ಮಾಡಲಾಗಿದೆ,” ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಯೇಸು ಕ್ರಿಸ್ತನ ಬೋಧನೆಗಳಾದ ಪ್ರೀತಿ, ತ್ಯಾಗ ಮತ್ತು ಕ್ಷಮೆಯನ್ನು ಉಲ್ಲೇಖಿಸಿದ ಅವರು, ಪ್ರಸ್ತುತ ಬಾಂಗ್ಲಾದೇಶದಲ್ಲಿ ಈ ಮೌಲ್ಯಗಳು ಕಣ್ಮರೆಯಾಗಿವೆ ಎಂದಿದ್ದಾರೆ.

ಆಗಸ್ಟ್ 2024 ರಲ್ಲಿ ವಿದ್ಯಾರ್ಥಿ ಪ್ರತಿಭಟನೆಗಳ ನಂತರ ಅಧಿಕಾರ ಕಳೆದುಕೊಂಡು ಭಾರತದಲ್ಲಿ ಆಶ್ರಯ ಪಡೆದಿರುವ ಹಸೀನಾ, ಯೂನಸ್ ನೇತೃತ್ವದ ಹಂಗಾಮಿ ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿ. “ಈಗಿನ ಆಡಳಿತವು ಅಕ್ರಮವಾಗಿ ಅಧಿಕಾರವನ್ನು ಹಿಡಿದಿಟ್ಟುಕೊಂಡಿದೆ. ಅವರ ಆಳ್ವಿಕೆಯಲ್ಲಿ ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಬೌದ್ಧರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದವರು ಭಯದ ನೆರಳಿನಲ್ಲಿ ಬದುಕುತ್ತಿದ್ದಾರೆ. ಚರ್ಚ್‌ಗಳು, ದೇವಾಲಯಗಳು ಮತ್ತು ಅಲ್ಪಸಂಖ್ಯಾತರ ಮನೆಗಳ ಮೇಲೆ ನಿರಂತರ ದಾಳಿಗಳು ನಡೆಯುತ್ತಿವೆ. ಇದು ಕೇವಲ ದೌರ್ಜನ್ಯವಲ್ಲ, ಇದೊಂದು ಹೇಳತೀರದ ಚಿತ್ರಹಿಂಸೆ,” ಎಂದು ಅವರು ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ | “ಚುನಾವಣೆ ತಪ್ಪಿಸಲು ಸರ್ಕಾರವೇ ನನ್ನ ತಮ್ಮನ ಕೊಲೆ ಮಾಡಿಸಿದೆ”: ಹಾದಿ ಸಹೋದರನ ಆರೋಪ

ಶೇಖ್ ಹಸೀನಾ ಅವರ ಈ ಹೇಳಿಕೆಗೆ ಪೂರಕವಾಗಿ ಬಾಂಗ್ಲಾದೇಶದ ವಾಸ್ತವ ಸ್ಥಿತಿ ಆತಂಕಕಾರಿಯಾಗಿದೆ. ವರದಿಗಳ ಪ್ರಕಾರ, ಹಸೀನಾ ಅವರ ಪದಚ್ಯುತಿಯ ನಂತರ ಬಾಂಗ್ಲಾದೇಶದಲ್ಲಿ ಅರಾಜಕತೆ ತಾಂಡವವಾಡುತ್ತಿದೆ. ಇಸ್ಲಾಮಿಕ್ ಮೂಲಭೂತವಾದಿ ಗುಂಪುಗಳು ಪ್ರಬಲವಾಗಿದ್ದು, ಹಿಂದೂ ದೇವಾಲಯಗಳು ಮತ್ತು ಕ್ರಿಶ್ಚಿಯನ್ ಚರ್ಚ್‌ಗಳ ಮೇಲೆ ದಾಳಿಗಳು ಹೆಚ್ಚಾಗಿವೆ. ಇತ್ತೀಚೆಗೆ ಹಿಂದೂ ಮುಖಂಡ ಚಿನ್ಮಯ್ ಕೃಷ್ಣ ದಾಸ್ ಅವರ ಬಂಧನ ಮತ್ತು ಇಸ್ಕಾನ್ (ISKCON) ಸಂಸ್ಥೆಯ ಮೇಲಿನ ನಿಷೇಧದ ಮಾತುಗಳು ಜಾಗತಿಕ ಮಟ್ಟದಲ್ಲಿ ಖಂಡನೆಗೆ ಗುರಿಯಾಗಿವೆ. ಈಗ ಕ್ರಿಸ್‌ಮಸ್ ಸಂದರ್ಭದಲ್ಲಿ ಕ್ರಿಶ್ಚಿಯನ್ ಸಮುದಾಯವೂ ಅಭದ್ರತೆಯನ್ನು ಎದುರಿಸುತ್ತಿದೆ ಎಂಬುದು ಹಸೀನಾ ಅವರ ಮಾತಿನ ತಿರುಳಾಗಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »