ಮರ್ಯಾದೆಗೇಡು ಹತ್ಯೆ ತಡೆ ಕಾಯ್ದೆ ರಚನೆಗೆ ಸಿದ್ದರಾಮಯ್ಯ ಭರವಸೆ

ರಾಜ್ಯದಲ್ಲಿ ಇತ್ತೀಚಿಗೆ ಹೆಚ್ಚುತ್ತಿರುವ ಮರ್ಯಾದೆಗೇಡು ಹತ್ಯೆ ಪ್ರಕರಣಗಳನ್ನು ತಡೆಯಲು ಪ್ರತ್ಯೇಕ ಕಾಯ್ದೆ ರೂಪಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
 Siddaramaiah  

 ಇತ್ತೀಚಿಗೆ ರಾಜ್ಯದಲ್ಲಿ ಹೆಚ್ಚುತ್ತಿರುವ ಮರ್ಯಾದೆಗೇಡು ಹತ್ಯೆ (ಆನರ್ ಕಿಲ್ಲಿಂಗ್) ಪ್ರಕರಣಗಳನ್ನು ತಡೆಯಲು ಪ್ರತ್ಯೇಕ ಕಾಯ್ದೆ ರೂಪಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಡಿಸೆಂಬರ್ 28ರಂದು ನಗರದ ಅರಮನೆ ಮೈದಾನದಲ್ಲಿ ಕನ್ನಡ ಚಳುವಳಿಗಾರರ ಸಮಿತಿ ಆಯೋಜಿಸಿದ್ದ ಜನರಾಜ್ಯೋತ್ಸವ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಘಟನೆಗಳು ಅತ್ಯಂತ ಖಂಡನೀಯ ಮತ್ತು ಸಮಾಜಕ್ಕೆ ಕಳಂಕ ತರುವಂತಹವು ಎಂದರು.

ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಒಂದು ಮರ್ಯಾದೆಗೇಡಿ ಹತ್ಯೆ ಪ್ರಕರಣವು ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಜಾತ್ಯತೀತ ವಿವಾಹಕ್ಕೆ ವಿರೋಧಿಸಿ ತಂದೆಯೇ ಗರ್ಭಿಣಿ ಮಗಳನ್ನು ಕೊಂದ ಘಟನೆಯು ದಲಿತ ಸಂಘಟನೆಗಳು, ಮಹಿಳಾ ಸಂಘಟನೆಗಳು ಮತ್ತು ಪ್ರಗತಿಪರ ಗುಂಪುಗಳಿಂದ ತೀವ್ರ ಖಂಡನೆಗೆ ಒಳಗಾಗಿದೆ. ಈ ಹಿನ್ನೆಲೆಯಲ್ಲಿ ‘ಮಾನ್ಯಾ ಆಕ್ಟ್’ ಎಂಬ ಪ್ರತ್ಯೇಕ ಕಾಯ್ದೆಯನ್ನು ಜಾರಿಗೊಳಿಸಬೇಕೆಂಬ ಒತ್ತಡ ಹೆಚ್ಚಾಗಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರು, ಧಾರವಾಡ, ಹಾವೇರಿ, ಕಲಬುರಗಿ ಸೇರಿದಂತೆ ಹಲವು ಕಡೆ ಪ್ರತಿಭಟನೆಗಳು ನಡೆದಿವೆ. ಸಾಮಾಜಿಕ ಕಾರ್ಯಕರ್ತರು ಮತ್ತು ದಲಿತ ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹೇರುತ್ತಿವೆ. ಈ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಸಿಎಂ ಅವರು ಕಾಯ್ದೆ ರೂಪಿಸುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಉದ್ಯೋಗ ಮೀಸಲಾತಿ ವಿಚಾರದಲ್ಲಿ ಸಿದ್ದರಾಮಯ್ಯ ಅವರು, ಕನ್ನಡಿಗರಿಗೆ ರಾಜ್ಯದಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗಬೇಕು ಎಂದು ಒತ್ತಿ ಹೇಳಿದರು. ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಕನ್ನಡಪರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ರಾಜ್ಯದಲ್ಲಿ ಕನ್ನಡ ವಾತಾವರಣ ನಿರ್ಮಾಣವಾಗಬೇಕು ಮತ್ತು ಕರ್ನಾಟಕಕ್ಕೆ ಅನ್ಯಾಯವಾದಾಗ ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ | ಸಿಡಬ್ಲ್ಯೂಸಿ ನೆಪ, ಅಧಿಕಾರದ್ದೇ ಜಪ? ದೆಹಲಿಗೆ ಹಾರಿದ ಸಿದ್ದರಾಮಯ್ಯ

ಹಾಗೆಯೇ ಜಲಸಂಪನ್ಮೂಲ ವಿಷಯದಲ್ಲಿ ಕೇಂದ್ರ ಸರ್ಕಾರದ ಧೋರಣೆಯನ್ನು ತೀವ್ರವಾಗಿ ಖಂಡಿಸಿದರು. ಮಹದಾಯಿ ಯೋಜನೆಗೆ ಕೇಂದ್ರದಿಂದ ಪರಿಸರ ತೀರ್ಪು (ಎನ್ವೈರನ್‌ಮೆಂಟಲ್ ಕ್ಲಿಯರೆನ್ಸ್) ಸಿಗುತ್ತಿದ್ದಂತೆಯೇ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದರು. ಆದರೆ ಕೃಷ್ಣಾ ನದಿ ಮೂರನೇ ಹಂತದ ಯೋಜನೆಗೆ ಕೇಂದ್ರ ಇನ್ನೂ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ. ಇದು ಕನ್ನಡಿಗರಿಗೆ ಅನ್ಯಾಯವಾಗಿದ್ದು, ಕೇಂದ್ರದ ಮಲತಾಯಿ ಧೋರಣೆಯನ್ನು ಖಂಡಿಸಬೇಕು ಎಂದು ಕರೆ ನೀಡಿದರು.

ಜನರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಚಳುವಳಿಗಾರರು, ಸಾಹಿತಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿದ್ದರು. ಸಿದ್ದರಾಮಯ್ಯ ಅವರು ಕನ್ನಡ ಭಾಷೆ, ಸಂಸ್ಕೃತಿ ಮತ್ತು ಕನ್ನಡಿಗರ ಹಕ್ಕುಗಳ ರಕ್ಷಣೆಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದರು. ರಾಜ್ಯದ ಸಮಗ್ರ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »