ಬುಕರ್ ಪುರಸ್ಕೃತ ಬಾನು ಮುಷ್ತಾಕ್ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆ

ಸಾಹಿತಿ ಬಾನು ಮುಷ್ತಾಕ್‌ ಅವರನ್ನು 88ನೇ ಸಾಹಿತ್ಯ ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಹದಿನೈದು ವರ್ಷಗಳ ಬಳಿಕ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನಕ್ಕೆ ಮಹಿಳೆಯೊಬ್ಬರನ್ನು ಆಯ್ಕೆ ಮಾಡಲಾಗಿದೆ.
banu mushtaq
banu mushtaq

ಕಳೆದ ತಿಂಗಳು ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿಗೆ ಭಾಜನರಾದ ಹಾಸನದ ಮೂಲದ ಲೇಖಕಿ ಬಾನು ಮುಷ್ತಾಕ್ ಅವರನ್ನು ಡಿಸೆಂಬರ್‍‌ ತಿಂಗಳಲ್ಲಿ, ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಭಾನುವಾರ ಬಳ್ಳಾರಿಯ ಖಾಸಗಿ ಹೋಟೆಲ್‌ವೊಂದರಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹದಿನೈದು ವರ್ಷಗಳ ನಂತರ ಲೇಖಕಿಯೊಬ್ಬರು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. 2010ರಲ್ಲಿ ಗೀತಾ ನಾಗಭೂಷಣ್‌ ಅವರನ್ನು ಗದಗ ಸಮ್ಮೇಳನಕ್ಕೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು.

ಲೇಖಕಿ, ಅನುವಾದಕಿ, ದೀಪಾ ಭಾಸ್ತಿಯವರು, ಅನುವಾದಿಸಿದ, ನುಮುಷ್ತಾಕ್‌ ಅವರ ಆಯ್ದ ಕತೆಗಳ ಇಂಗ್ಲಿಷ್‌ ಸಂಕಲನ, ಹಾರ್ಟ್ ಲ್ಯಾಂಪ್‌ ಕೃತಿಗೆ ಇತ್ತೀಚೆಗೆ ಬುಕರ್‍‌ ಪುರಸ್ಕಾರ ಲಭಿಸಿತು. ಇದೇ ಮೊದಲ ಬಾರಿಗೆ ಕನ್ನಡಕ್ಕೆ ಈ ಗೌರವ ಸಂದ ಹಿನ್ನೆಲೆಯಲ್ಲಿ ಬಾನು ಮುಷ್ತಾಕ್‌ ಅವರನ್ನು ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಸಮ್ಮೇಳನದಲ್ಲಿ ಕೃತಿಯ ಅನುವಾದಕರಾದ ದೀಪಾ ಅವರನ್ನು ಸನ್ಮಾನಿಸಲು ಕಾರ್ಯಕಾರಿ ಸಮಿತಿ ನಿರ್ಧರಿಸಿದೆ.

ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಮಹೇಶ್‌ ಜೋಶಿ ಆಯ್ಕೆಯಾದ ಮೇಲೆ ಹಲವು ಕಾರಣಗಳಿಗೆ ಕಸಾಪ ವಿವಾದಗಳಿಂದಾಗಿ ಸುದ್ದಿ ಮಾಡುತ್ತಿತ್ತು.

Share:

ಮತ್ತಷ್ಟು ಸುದ್ದಿ

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »