ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಯ ಅಧಿಕಾರ ಬದಲಾವಣೆಯ ಆರೋಪಗಳನ್ನು ತಳ್ಳಿಹಾಕಿದರು.
ನಟ ಪ್ರಕಾಶ್ ರಾಜ್ ಸುದ್ದಿಗೋಷ್ಠಿ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಯ ಅಧಿಕಾರ ಬದಲಾವಣೆಯ ಆರೋಪಗಳನ್ನು ತಳ್ಳಿಹಾಕಿದರು. “ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ. ಅವರು ಸುಳ್ಳನ್ನೇ ನಂಬುತ್ತಾರೆ, ಸತ್ಯವನ್ನಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳುವುದೇ ಗೊತ್ತಿಲ್ಲ. ನಾವೆಲ್ಲ ಒಗ್ಗೂಡಿ, ಬಂಡೆಯಂತೆ ಭದ್ರವಾಗಿರುವ ನಮ್ಮ ಸರ್ಕಾರ ಐದು ವರ್ಷಗಳ ಕಾಲ ಆಡಳಿತ ನಡೆಸಲಿದೆ,” ಎಂದು ಸ್ಪಷ್ಟವಾಗಿ ಹೇಳಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಸಾಕ್ಷಿಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ ಎಂದು ಪ್ರಶ್ನಿಸಿದ ಸಿಎಂ, ಅವರು ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಏನು ಮಾಡಿದ್ದಾರೆ. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿತ್ತು. ಎಚ್ ಡಿ ಕುಮಾರಸ್ವಾಮಿಯವರು ಒಂದು ವರ್ಷ ಎರಡು ತಿಂಗಳು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದರು. ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಏನೂ ಮಾಡದೇ ಸುಳ್ಳು ಹೇಳಿಕೊಂಡು ಜನರನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು. 2 ವರ್ಷದ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮಳೆಯಿದ್ದರೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಜನ ಸೇರಿದ್ದರು. ಜನರು ಸರ್ಕಾರದ ಪರವಾಗಿ ಸುಮ್ಮನೆ ಬರುತ್ತಾರೆಯೇ ಎಂದು ಪ್ರಶ್ನಿಸಿದರು.

ಜಾತಿಗಣತಿ: ಆನ್ ಲೈನ್ ಮೂಲಕ ಜಾತಿ ನಮೂದಿಸಬಹುದು

ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್ ಲೈನ್ ಮಾಡಲು ತೊಂದರೆಯಿಲ್ಲ ಎಂದು ತಿಳಿಸಿದ ಮುಖ್ಯಮಂತ್ರಿಗಳು ಯಾವುದಾದರೂ ಒಂದು ದಾರಿಯಲ್ಲಿ ಜಾತಿ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆಗೆ ಬಂದಾಗ ಅಥವಾ ಶಿಬಿರದಲ್ಲಿ ಅಥವಾ ಯಾವುದಾದರೂ ಒಂದು ವಿಧಾನದಲ್ಲಿ ಪರಿಶಿಷ್ಟರ ಜಾತಿ/ವರ್ಗ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆ ಮನೆಗೆ ತೆರಳುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಕೆಲವರು ಸಾಮಾಜಿಕ ಕಳಂಕ ಇದ್ದರೆ ಆನ್ ಲೈನ್ ನಲ್ಲಿ ಜಾತಿಯ ಹೆಸರನ್ನು ದಾಖಲಿಸಬಹುದು ಎಂದರು.

ಸಚಿವ ಸ್ಥಾನ :ವರಿಷ್ಠರಿಂದ ಅಂತಿಮ ತೀರ್ಮಾನ

ಪ್ರಜಾಪ್ರಭುತ್ವದಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು. 142 ಜನ ನಮ್ಮ ಪಕ್ಷದವರಿದ್ದಾರೆ. 34 ಜನರನ್ನು ಮಾತ್ರ ಸಚಿವರನ್ನಾಗಿಸಬಹುದು. ಎಲ್ಲರನ್ನು ಮಾಡಲಾಗುವುದಿಲ್ಲ. ಶೇ.15% ಜನರನ್ನು ಮಾತ್ರ ಮಾಡಬಹುದು ಎಂದರು.

ಐದು ವರ್ಷ ನಾನೇ ಮುಖ್ಯಮಂತ್ರಿ

ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿಗಳು ನವೆಂಬರ್ ನಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರು ಇಳಿಯಲಿದ್ದಾರೆ ಎಂಬ ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಬಿಜೆಪಿ ನಮ್ಮ ಹೈ ಕಮಾಂಡ್ ಅಲ್ಲ ಎಂದರು. ಆರ್.ಅಶೋಕ್, ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಹೇಳಿದೆಲ್ಲಾ ಸತ್ಯವಲ್ಲ ಎಂದರು.

ರಾಜ್ಯದ ಎಲ್ಲಾ ಕಂದಾಯ ವಿಭಾಗಗಳಲ್ಲಿ ಸಚಿವ ಸಂಪುಟ ಸಭೆ

ರಾಜ್ಯದ ಎಲ್ಲಾ ಕಂದಾಯ ವಿಭಾಗಗಳಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕೆಂದು ತೀರ್ಮಾನಿಸಿ ಗುಲ್ಬರ್ಗಾ, ಮೈಸೂರು, ಬೆಂಗಳೂರು ವಿಭಾಗಗಳಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಇನ್ನು ಕೆಲವೇ ದಿನಗಳಲ್ಲಿ ಬೆಳಗಾವಿ ಹಾಗೂ ವಿಜಯಪುರದಲ್ಲಿ ಕೂಡ ನಡೆಸಲಾಗುವುದು ಎಂದರು.

ಚಿಕ್ಕಬಳ್ಳಾಪುರದಲ್ಲಿ ಬೆಂಗಳೂರು ಕಂದಾಯ ವಿಭಾಗದ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಬಜೆಟ್ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ಸಣ್ಣಪುಟ್ಟ ಕೆಲಸಗಳಿದ್ದರೆ ಮಾಡಿ ಕೊಡಲಾಗುವುದು ಎಂದರು.

ರಾಜ್ಯ ಸುಭಿಕ್ಷವಾಗಲಿ
ರಾಜ್ಯದಲ್ಲಿ ಒಳ್ಳೆ ಮಳೆ ಬೆಳೆಯಾಗಿ , ಸಮೃದ್ಧಿಯಾಗಿ. ಜನ ಸಂತೋಷದಿಂದಿರಲಿ ಮಾನವೀಯ ಸಮಾಜ ನಿರ್ಮಾಣವಾಗುತ್ತ ಪ್ರಯತ್ನ ಮಾಡಲಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »