ಕಾಂಗ್ರೆಸ್‌ನಲ್ಲಿ ಎರಡು ಗುಂಪುಗಳು ಸೈಲೆಂಟಾಗಿ ಕೆಲಸ ಮಾಡುತ್ತಿವೆ: ನಿಖಿಲ್ ಕುಮಾರಸ್ವಾಮಿ ಆರೋಪ

ಕಾಂಗ್ರೆಸ್‌ನಲ್ಲಿ ಕೆಲವು ಗುಂಪು ನೇರ, ಇನ್ನು ಕೆಲವು ಗುಂಪುಗಳು ಸೈಲೆಂಟಾಗಿ ಕೆಲಸ ಮಾಡುತ್ತಿವೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು.
Nikhil Kumaraswamy Slams Congress

ಕಾಂಗ್ರೆಸ್‌ನಲ್ಲಿ ಕೆಲವು ಗುಂಪು ನೇರ, ಇನ್ನು ಕೆಲವು ಗುಂಪುಗಳು ಸೈಲೆಂಟಾಗಿ ಕೆಲಸ ಮಾಡುತ್ತಿವೆ. ಬೇರೆಯವರ ರೀತಿ ಸರ್ಕಾರ ಪತನ ಆಗುತ್ತೆ ಅಂತ ನಾನು ಹೇಳೋದಿಲ್ಲ. ಆದರೆ ಕಾಂಗ್ರೆಸ್‌ ಪಕ್ಷದಲ್ಲಿ ಹಲವು ಗುಂಪುಗಳಿರುವುದು ಸತ್ಯ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು.

ಬೀದರ್‌ನ ಏರ್ ಪೋರ್ಟ್ ನಲ್ಲಿ ಮಾತನಾಡಿದ ಅವರು, 5 ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ಕೌಂಟರ್ ನೀಡಿದರು.

ಸಿಎಂ ಖುರ್ಚಿಗಾಗಿ ಕಾಂಗ್ರೆಸ್‌ ಪಕ್ಷದಲ್ಲಿ ಹಲವಾರು ಪ್ರಕ್ರಿಯೆಗಳು ನಡೆಯುತ್ತಿವೆ. ಅದೇನೋ ಕ್ರಾಂತಿ ಆಗುತ್ತೆ ಅಂತ ಹೇಳ್ತಿದಾರೆ ನೋಡೋಣ. ಕಾಂಗ್ರೆಸ್ ಅಧಿಕಾರದಲ್ಲಿದ್ದ ರಾಜ್ಯಗಳು ದಿವಾಳಿಯಾಗ್ತಿವೆ. ಜನರು ಈ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. 

ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡದೆ ಎರಡೂವರೆ ವರ್ಷ ಕಾಲಹರಣ ಮಾಡಿದ್ದಾರೆ. ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ ಎಂದು ಖುದ್ದು ಅವರದ್ದೇ ಪಕ್ಷದ ಹಿರಿಯ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳು ನೀಡುತ್ತಿದ್ದೇವೆ ಎಂದು ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾರೆ ಯಾರಿಗೆ ಗ್ಯಾರಂಟಿ ಬಂದಿದೆ ಎಂದು ಕಿಡಿಕಾರಿದರು.

ರಾಜ್ಯಕ್ಕೆ ದೊಡ್ಡ ಗಾತ್ರದ ಬಜೆಟ್ ಕೊಟ್ಟಿದ್ದೀನಿ ಎಂದು ಸಿಎಂ ಬೆನ್ನು ತಟ್ಟುಕೊಳ್ತಾರೆ. ಅದರಲ್ಲಿ ಸಾಲ ಎಷ್ಟಾಗಿದೆ ಅನ್ನೋದು ಜನರಿಗೆ ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

55 ಸಾವಿರ ಕೋಟಿ ವರ್ಷಕ್ಕೆ ನೀವು ಗ್ಯಾರಂಟಿ ಯೋಜನೆಗಳಿಗಾಗಿ ಹೊಂದಿಸಬೇಕು. ಕರ್ನಾಟಕ ಸೇರಿದಂತೆ ಕಾಂಗ್ರೆಸ್ ಅಧಿಕಾರದಲ್ಲಿದ್ದ ರಾಜ್ಯಗಳು ಆರ್ಥಿಕ ದಿವಾಳಿಯಾಗ್ತಿವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.

2028ರ ವಿಧಾನಸಭಾ ಚುನಾವಣೆಯಲ್ಲಿ BJP- JDS ಸೀಟು ಹಂಚಿಕೆ ವಿಚಾರಕ್ಕೆ ಮಾತನಾಡಿದ ಅವರು, ಯಾವುದೇ ಗೊಂದಲಕ್ಕೆ ಎಡೆಮಾಡಿ ಕೊಡುವ ಪ್ರಶ್ನೆ ಇಲ್ಲ, ಸಂಸತ್ ಚುನಾವಣೆಯಲ್ಲಿ ಕೈ ಜೋಡಿಸಿದ್ದೇವೆ. ಅದನ್ನ ರಾಜ್ಯದ ಜನ ನೋಡಿದ್ದಾರೆ, ಅದರಲ್ಲಿ ಮುಚ್ಚು ಮರೆ ಇಲ್ಲ ಎಂದು ತಿಕ್ಷಣವಾಗಿ ಉತ್ತರಿಸಿದರು.

ಪ್ರಧಾನಿ ಮೋದಿ ಜೀ ಅವರ ನಾಯಕತ್ವದಲ್ಲಿ ನಮ್ಮ ದೇಶ ಆರ್ಥಿಕವಾಗಿ ಮೂರನೇ ದೊಡ್ಡ ದೇಶವಾಗಿದೆ. ರಾಜ್ಯದ ಅಭಿವೃದ್ಧಿಯೇ ನಮ್ಮ ಗುರಿಯಾಗಿದ್ದು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ತಿಳಿಸಿದರು.

ಐತಿಹಾಸಿಕ ಪವಿತ್ರ ಸ್ಥಳ ಗುರುದ್ವಾರಕ್ಕೆ ನಿಖಿಲ್ ಭೇಟಿ

ನಂತರ ಬೀದರ್ ಜಿಲ್ಲೆಯ ಐತಿಹಾಸಿಕ ಪವಿತ್ರ ಗುರುನಾನಕ್ ಜೀರಾ ಸಾಹಿಬ್ ಗುರುದ್ವಾರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು ಹಾಗೆಯೇ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಸದ್ಗುರು ಶ್ರೀ ಡಾ.ಶಿವಕುಮಾರ್ ಮಹಾಸ್ವಾಮಿಗಳ ಆಶೀರ್ವಾದ ಪಡೆದು ಸದಸ್ಯತ್ವದ ನಿರೀಕ್ಷಿತ ಗುರಿ ಸಾಧಿಸಲು ಪ್ರಾರ್ಥಿಸಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ತಮ್ಮ ‘ಸಾಕಪ್ಪ ಸಾಕು’ ಅಭಿಯಾನವನ್ನು ಉಲ್ಲೇಖಿಸಿದ ನಿಖಿಲ್, “ಈ ಸರ್ಕಾರ ಜನರಿಗೆ ಆರ್ಥಿಕ ಒತ್ತಡವನ್ನುಂಟು ಮಾಡಿದೆ. ಭ್ರಷ್ಟಾಚಾರ, ಬೆಲೆ ಏರಿಕೆ, ಮತ್ತು ಆಡಳಿತದ ವೈಫಲ್ಯದಿಂದ ಜನರು ಬೇಸತ್ತಿದ್ದಾರೆ” ಎಂದು ಟೀಕಿಸಿದರು.

ಈ ಆರೋಪಗಳು ಕಾಂಗ್ರೆಸ್‌ನ ಒಳಗಿನ ಒಡಕುಗಳನ್ನು ಎತ್ತಿ ತೋರಿಸುತ್ತವೆ, ಇದು ರಾಜ್ಯದ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರಬಹುದು ಎಂದು ರಾಜಕೀಯ ವಿಶ್ಲೇಷಕರು ಭಾವಿಸಿದ್ದಾರೆ.

Share:

ಮತ್ತಷ್ಟು ಸುದ್ದಿ

ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮ

ಅಲೆದಾಟ ಮುಕ್ತ ಆಡಳಿತದತ್ತ ಮೇಲುಕೋಟೆ ಮನೆ ಬಾಗಿಲಿಗೇ ಬಂದ ‘ಸರ್ಕಾರಿ ಸೇವೆ’ ಕಾರ್ಯಕ್ರಮ  ತಂತ್ರಜ್ಞಾನದ ಅರಿವನ್ನು ಆಡಳಿತ ಯಂತ್ರಕ್ಕೆ ವರ್ಗಾಯಿಸಿದ

ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಲು ಮನವಿ

ಕಾಂಗ್ರೆಸ್‌ ಹೈಕಮಾಂಡ್‌ಗೆ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ಒತ್ತಾಯ ಮೈಸೂರು: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರಿಗೆ

ಮುಂದೆ ಓದಿ »

ಬೆಂಗಳೂರಿನಲ್ಲಿ ಮೇ 25 ರಂದು 3ನೇ ಕರ್ನಾಟಕ ಸಂಘಟಕರ ಸಮಾವೇಶ

ಸಾಂಸ್ಕೃತಿಕ ನೀತಿ ಜಾರಿ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಆಗ್ರಹಿಸಿ ರಂಗಕರ್ಮಿಗಳು ಹಾಗೂ ಸಾಂಸ್ಕೃತಿಕ ಸಂಘಟಕರ ಬೃಹತ್‌ ಸಮಾಲೋಚನೆ ಬೆಂಗಳೂರು: ಕರ್ನಾಟಕ

ಮುಂದೆ ಓದಿ »

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »