ಉಪ ರಾಷ್ಟ್ರಪತಿ ಧನ್ಕರ್ ರಾಜೀನಾಮೆ: ಎನ್‌ಡಿಎಗೆ ಹೊಸ ಆಯ್ಕೆಯ ಸವಾಲು

ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಆರೋಗ್ಯ ಕಾರಣಗಳಿಂದ ತಮ್ಮ ಸ್ಥಾನಕ್ಕೆ ನಿನ್ನೆ ರಾಜೀನಾಮೆ ಸಲ್ಲಿಸಿದ್ದಾರೆ, ಇದು ರಾಜಕೀಯ ವಲಯದಲ್ಲಿ ಅಚ್ಚರಿಯ ಬೆಳವಣಿಗೆಯಾಗಿದೆ.
Jagdeep Dhankhar’s Resignation

ಭಾರತದ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಆರೋಗ್ಯ ಕಾರಣಗಳಿಂದ ತಮ್ಮ ಸ್ಥಾನಕ್ಕೆ ನಿನ್ನೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ, ಇದು ರಾಜಕೀಯ ವಲಯದಲ್ಲಿ ಅಚ್ಚರಿಯ ಬೆಳವಣಿಗೆಯಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ, ಧನ್ಕರ್ ಅವರು ಸಂವಿಧಾನದ ವಿಧಿ 67(ಎ) ಅಡಿಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಈ ಘಟನೆಯಿಂದಾಗಿ ಉಪ ರಾಷ್ಟ್ರಪತಿ ಸ್ಥಾನಕ್ಕೆ ಹೊಸ ಅಭ್ಯರ್ಥಿಯ ಆಯ್ಕೆಗೆ ತೀವ್ರ ಪೈಪೋಟಿ ಆರಂಭವಾಗಿದೆ. 

ಆಡಳಿತಾರೂಢ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಬಹುಮತವನ್ನು ಹೊಂದಿದ್ದರೂ, ಧನ್ಕರ್ ಅವರ ಈ ಅನಿರೀಕ್ಷಿತ ರಾಜೀನಾಮೆಯು ರಾಜಕೀಯ ವಿಶ್ಲೇಷಕರಿಗೆ ಆಶ್ಚರ್ಯವನ್ನುಂಟುಮಾಡಿದೆ. ಧನ್ಕರ್ ಅವರು ತಮ್ಮ ಆರೋಗ್ಯಕ್ಕೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು ಈ ತೀರ್ಮಾನ ಕೈಗೊಂಡಿದ್ದಾರೆ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅವರ ಈ ನಿರ್ಧಾರವು ಎನ್‌ಡಿಎಗೆ ಹೊಸ ನಾಯಕನ ಆಯ್ಕೆಗೆ ಅವಕಾಶವನ್ನು ಒಡ್ಡಿದೆ.

ಧನ್ಕರ್ ಅವರು 2022ರ ಆಗಸ್ಟ್‌ನಲ್ಲಿ ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಅವರು ಈ ಹಿಂದೆ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು ಮತ್ತು ರಾಜಸ್ಥಾನದ ರಾಜಕೀಯದಲ್ಲಿ ದೀರ್ಘ ಅನುಭವವನ್ನು ಹೊಂದಿದ್ದಾರೆ. ರಾಜೀನಾಮೆ ಪತ್ರದಲ್ಲಿ, ಧನ್ಕರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಸಂಸತ್ ಸದಸ್ಯರಿಗೆ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. “ನಮ್ಮ ಮಹಾನ್ ಪ್ರಜಾಪ್ರಭುತ್ವದಲ್ಲಿ ಉಪ ರಾಷ್ಟ್ರಪತಿಯಾಗಿ ಸಿಕ್ಕ ಅನುಭವಗಳು ಅಮೂಲ್ಯ. ಭಾರತದ ಆರ್ಥಿಕ ಪ್ರಗತಿ ಮತ್ತು ಅಭಿವೃದ್ಧಿಗೆ ಸಾಕ್ಷಿಯಾಗಿರುವುದು ಹೆಮ್ಮೆಯ ಸಂಗತಿ,” ಎಂದು ತಿಳಿಸಿದ್ದಾರೆ.

ಈ ಹಿಂದೆ ಹುದ್ದೆ ತ್ಯಜಿಸಿದವರು ಯಾರ್ಯಾರು

ಹೌದು ಈ ಹಿಂದೆ ಧನ್ ಕರ್ ಅವರಂತೆ ಇಬ್ಬರು ರಾಜೀನಾಮೆ ನೀಡಿದ್ದರು.

ವಿ ವಿ ಗಿರಿ: ಮೇ 3, 1969 ರಂದು ಜಾಕಿರ್ ಹುಸೇನ್ ಅವರ ನಿಧನದ ನಂತರ ಹಂಗಾಮಿ ರಾಷ್ಟ್ರಪತಿಗಳಾಗಿ ಅಧಿಕಾರ ವಹಿಸಿಕೊಂಡ ವಿ ವಿ ಗಿರಿ ಅವರು ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಗಿರಿ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಜುಲೈ 2, 1969 ರಂದು ಉಪ ರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅವರು ಅಧಿಕಾರಾವಧಿಯನ್ನು ಪೂರ್ಣಗೊಳಿಸದ ಮೊದಲ ಉಪ ರಾಷ್ಟ್ರಪತಿಯಾದರು.

ಭೈರೋನ್ ಸಿಂಗ್ ಶೇಖಾವತ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಭ್ಯರ್ಥಿ ಪ್ರತಿಭಾ ಪಾಟೀಲ್ ವಿರುದ್ಧ ರಾಷ್ಟ್ರಪತಿ ಚುನಾವಣೆಯಲ್ಲಿ ಸೋತ ನಂತರ, ಉಪ ರಾಷ್ಟ್ರಪತಿ ಭೈರೋನ್ ಸಿಂಗ್ ಶೇಖಾವತ್ ಜುಲೈ 21, 2007 ರಂದು ಹುದ್ದೆಗೆ ರಾಜೀನಾಮೆ ನೀಡಿದ್ದರು.

ಶೇಖಾವತ್ ಅವರ ರಾಜೀನಾಮೆಯ ನಂತರ, ಮೊಹಮ್ಮದ್ ಹಮೀದ್ ಅನ್ಸಾರಿ ಈ ಸ್ಥಾನಕ್ಕೆ ಆಯ್ಕೆಯಾಗುವ ಮೊದಲು, ಉಪ ರಾಷ್ಟ್ರಪತಿ ಸ್ಥಾನ 21 ದಿನಗಳ ಕಾಲ ಖಾಲಿಯಾಗಿತ್ತು.

ಇದನ್ನೂ ಓದಿ | ಮುನಿಸು ಮರೆತು ಮತ್ತೆ ಒಂದಾದ ರೆಡ್ಡಿ-ರಾಮುಲು: ಬಿಜೆಪಿಗೆ ಮತ್ತಷ್ಟು ಬಲ

ಈಗ ಧನ್ಕರ್ ಅವರ ರಾಜೀನಾಮೆಯಿಂದ ಉಂಟಾದ ಈ ಖಾಲಿ ಸ್ಥಾನವನ್ನು ಭರ್ತಿ ಮಾಡಲು ಎನ್‌ಡಿಎ ಮುಂಬರುವ ದಿನಗಳಲ್ಲಿ ಆಯ್ಕೆಮಾಡುವದು ಸವಾಲಾಗಿದೆ. ಈ ಆಯ್ಕೆಯು ಭಾರತದ ರಾಜಕೀಯ ಭವಿಷ್ಯದ ಮೇಲೆ ಗಮನಾರ್ಹ ಪರಿಣಾಮ ಬೀರಬಹುದು, ಏಕೆಂದರೆ ಉಪ ರಾಷ್ಟ್ರಪತಿಯು ರಾಜ್ಯಸಭೆಯ ಸಭಾಪತಿಯಾಗಿಯೂ ಕಾರ್ಯನಿರ್ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ, ಎನ್‌ಡಿಎ ಒಕ್ಕೂಟವು ತನ್ನ ಬಹುಮತವನ್ನು ಬಳಸಿಕೊಂಡು ತಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ.

ಜಗದೀಪ್ ಧನ್ಕರ್ ಅವರ ಶಿಸ್ತುಬದ್ಧ ಆಡಳಿತ ಮತ್ತು ಸಾಂವಿಧಾನಿಕ ಜವಾಬ್ದಾರಿಯನ್ನು ರಾಜಕೀಯ ವಿಶ್ಲೇಷಕರು ಶ್ಲಾಘಿಸಿದ್ದಾರೆ. ಈಗ, ಎನ್‌ಡಿಎ ಒಕ್ಕೂಟವು ಈ ಖಾಲಿ ಸ್ಥಾನವನ್ನು ಭರ್ತಿಮಾಡಲು ಯಾರನ್ನು ಆಯ್ಕೆ ಮಾಡುತ್ತದೆ ಎಂಬುದು ರಾಷ್ಟ್ರೀಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »