ಕರ್ನಾಟಕದಲ್ಲಿ 2028ರಲ್ಲಿಯೂ ಕಾಂಗ್ರೆಸ್ ಅಧಿಕಾರ: ಸಿದ್ದರಾಮಯ್ಯ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರ 2028ರ ಚುನಾವಣೆಯಲ್ಲಿಯೂ ಗೆಲುವು ಸಾಧಿಸಿ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದಿದ್ದಾರೆ.
 Karnataka Congress 

ಕರ್ನಾಟಕಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರ 2028ರ ಚುನಾವಣೆಯಲ್ಲಿಯೂ ಗೆಲುವು ಸಾಧಿಸಿ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಸೋಮವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಾವಗಡದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, 2,250 ಮೆಗಾವ್ಯಾಟ್ ಸೌರ ವಿದ್ಯುತ್ ಸ್ಥಾವರದ ಘೋಷಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯ ನಂತರ ಮಾತನಾಡಿದ ಅವರು, ಬಿಜೆಪಿಯ ಟೀಕೆಗಳಿಗೆ ತಿರುಗೇಟು ನೀಡಿದರು.

ಪಾವಗಡದಲ್ಲಿ ಕುಡಿಯುವ ನೀರಿನ ಯೋಜನೆ

2018ರ ಜನವರಿಯಲ್ಲಿ ಆರಂಭವಾದ ಪಾವಗಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯು ಜುಲೈ 21ರಂದು ಲೋಕಾರ್ಪಣೆಗೊಂಡಿದೆ. ಈ ಯೋಜನೆಯು ಪಾವಗಡ ಸೇರಿದಂತೆ ಐದು ತಾಲ್ಲೂಕುಗಳ 270 ಹಳ್ಳಿಗಳಿಗೆ ಮತ್ತು ಪಾವಗಡ ಪಟ್ಟಣಕ್ಕೆ ಶುದ್ಧ ಕುಡಿಯುವ ನೀರನ್ನು ಒದಗಿಸಲಿದೆ. ತುಂಗಭದ್ರಾ ಜಲಾಶಯದಿಂದ 200 ಕಿ.ಮೀ. ದೂರದಿಂದ ನೀರನ್ನು ತಂದು, ಫ್ಲೋರೈಡ್‌ಯುಕ್ತ ನೀರಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳಿಂದ ಜನರನ್ನು ಪಾರುಮಾಡುವ ಗುರಿಯನ್ನು ಈ ಯೋಜನೆ ಹೊಂದಿದೆ.  

ಪಾವಗಡದ ಸೌರ ವಿದ್ಯುತ್ ಸ್ಥಾವರವು ಏಷ್ಯಾದಲ್ಲೇ ಅತಿದೊಡ್ಡದಾಗಿದೆ. ಈಗಾಗಲೇ 2,050 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ 2,400 ಮೆಗಾವ್ಯಾಟ್ ಉತ್ಪಾದನೆಯ ಗುರಿಯಿದೆ. 

ಇದನ್ನೂ ಓದಿ | ಮುಡಾ ಹಗರಣ: ಸುಪ್ರೀಂ ಕೋರ್ಟ್‌ನಿಂದ ಸಿಎಂ ಪತ್ನಿಗೆ ರಿಲೀಫ್

ಬಿಜೆಪಿಗೆ ತಿರುಗೇಟು

2004ರಲ್ಲಿ ಜೆಡಿಎಸ್ 59 ಸೀಟುಗಳನ್ನು ಗೆದ್ದಿತ್ತು, ಆದರೆ 2023ರ ಚುನಾವಣೆಯಲ್ಲಿ ಕೇವಲ 18 ಸೀಟುಗಳಿಗೆ ತೃಪ್ತಿಪಟ್ಟಿತು. “ಪಾವಗಡದಲ್ಲಿ ಜೆಡಿಎಸ್ ಗೆಲುವು ಅಸಾಧ್ಯ,” ಎಂದು ಸಿಎಂ ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಚರ್ಚೆಗೆ ಆಹ್ವಾನಿಸಿದ್ದೇನೆ, ಆದರೆ ಅವರು ಚುನಾವಣೆಗೆ ಕರೆಯುತ್ತಾರೆ. “ನಾವು ಚುನಾವಣೆಗೆ ಹೆದರುವುದಿಲ್ಲ. 2028ರವರೆಗೆ ಜನರು ನಮಗೆ ಅಧಿಕಾರ ನೀಡಿದ್ದಾರೆ. ಆವರೆಗೆ ಆಡಳಿತ ನಡೆಸಿ, ಮತ್ತೆ ಗೆದ್ದು ಅಧಿಕಾರಕ್ಕೆ ಬರಲಿದ್ದೇವೆ,” ಎಂದು ಭರವಸೆ ವ್ಯಕ್ತಪಡಿಸಿದರು.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »