ಭಾರೀ ಮಳೆಯಿಂದಾಗಿ ಟೊಮ್ಯಾಟೊಗೆ ಡಿಮ್ಯಾಂಡೋ ಡಿಮ್ಯಾಂಡು

ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಕಳೆದ ವಾರದಿಂದ ಟೊಮ್ಯಾಟೊ ಬೆಲೆ ಗಗನಕ್ಕೇರುತ್ತಿದ್ದು, 15 ಕೆಜಿಯ ಒಂದು ಬಾಕ್ಸ್‌ಗೆ ₹600 ರಿಂದ ₹800 ವರೆಗೆ ಹರಾಜಾಗುತ್ತಿದೆ.
Kolar APMC tomato price  
ಚಿತ್ರ ಕೃಪೆ : ಹಿಂದೂಸ್ತಾನ್‌ ಟೈಮ್ಸ್‌

ಕರ್ನಾಟಕದ ಕೋಲಾರ ಎಪಿಎಂಸಿ ಮಾರುಕಟ್ಟೆ, ಏಷ್ಯಾದ ಎರಡನೇ ಅತಿದೊಡ್ಡ ಟೊಮ್ಯಾಟೊ ಮಾರುಕಟ್ಟೆ ಎಂದೇ ಖ್ಯಾತವಾಗಿದೆ, ಈಗ ಕೆಂಪು ಸುಂದರಿ ಟೊಮ್ಯಾಟೊದ ದರ ಏರಿಕೆಯಿಂದ ಗಮನ ಸೆಳೆಯುತ್ತಿದೆ. ಕಳೆದ ಒಂದು ವಾರದಿಂದ ಟೊಮ್ಯಾಟೊ ಬೆಲೆ ಗಗನಕ್ಕೇರುತ್ತಿದ್ದು, 15 ಕೆಜಿಯ ಒಂದು ಬಾಕ್ಸ್‌ಗೆ ₹600 ರಿಂದ ₹800 ವರೆಗೆ ಹರಾಜಾಗುತ್ತಿದೆ. ಕಳೆದ ವರ್ಷದಂತೆ ಈ ವರ್ಷವೂ ಟೊಮ್ಯಾಟೊ ಬೆಲೆ ₹1,000 ಗಡಿಯನ್ನು ದಾಟುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ. ಈ ಏರಿಕೆ ರೈತರ ಮುಖದಲ್ಲಿ ಸಂತಸ ತಂದರೆ, ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ.

ಉತ್ತರ ಭಾರತದಲ್ಲಿ ಭಾರೀ ಮಳೆಯಿಂದಾಗಿ ಮಹಾರಾಷ್ಟ್ರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮತ್ತು ದೆಹಲಿಯಂತಹ ರಾಜ್ಯಗಳಲ್ಲಿ ಸ್ಥಳೀಯ ಟೊಮ್ಯಾಟೊ ಬೆಳೆ ಹಾನಿಗೊಳಗಾಗಿದೆ. ಇದರಿಂದ ಕೋಲಾರದ ಟೊಮ್ಯಾಟೊಗೆ ಭಾರೀ ಬೇಡಿಕೆ ಉಂಟಾಗಿದೆ. ಹೊರ ರಾಜ್ಯಗಳ ವ್ಯಾಪಾರಿಗಳು ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮ್ಯಾಟೊ ಖರೀದಿಗೆ ಮುಂದಾಗುತ್ತಿದ್ದಾರೆ, ಇದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ಮಂಡಿ ಮಾಲೀಕ ಸಿಎಂಆರ್ ಶ್ರಿನಾಥ್ ಅವರ ಪ್ರಕಾರ, ಮುಂದಿನ 15 ದಿನಗಳಲ್ಲಿ ಒಂದು ಬಾಕ್ಸ್ ಟೊಮ್ಯಾಟೊ ₹1,000 ಗಡಿಯನ್ನು ಮೀರಬಹುದು.

ಕಳೆದ ವರ್ಷ 2024ರಲ್ಲಿ ಟೊಮ್ಯಾಟೊ ಬೆಲೆ ₹800 ರಿಂದ ₹1,200 ವರೆಗೆ ಏರಿಕೆಯಾಗಿತ್ತು, ಇದು ರೈತರಿಗೆ ಒಳ್ಳೆಯ ಲಾಭ ತಂದಿತ್ತು. ಕೆಲವು ರೈತರು ಲಕ್ಷಾಂತರ ರೂಪಾಯಿ ಗಳಿಸಿದ್ದರು, ಆದರೆ ಈ ಏರಿಕೆಯಿಂದ ಗ್ರಾಹಕರು ತೀವ್ರ ತೊಂದರೆಗೊಳಗಾಗಿದ್ದರು. ಈ ವರ್ಷವೂ ಇದೇ ರೀತಿಯ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಜುಲೈ ಮತ್ತು ಆಗಸ್ಟ್ ತಿಂಗಳುಗಳು ಟೊಮ್ಯಾಟೊ ಸೀಜನ್‌ನ ಉತ್ತುಂಗದ ಸಮಯವಾಗಿದ್ದು, ಈ ಅವಧಿಯಲ್ಲಿ ಬೆಲೆ ಇನ್ನಷ್ಟು ಏರಿಕೆಯಾಗುವ ಸಂಭವ ಇದೆ.

ಇದನ್ನೂ ಓದಿ | ತೊಗರಿ ಬೆಲೆ ಕುಸಿತ: ಗ್ರಾಹಕರಿಗೆ ಖುಷಿ,  ರೈತರಿಗೆ ನಿರಾಸೆ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರು ಈ ಋತುವಿನಲ್ಲಿ ಟೊಮ್ಯಾಟೊ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಿದ್ದರು. ಆದರೆ, ವೈರಸ್ ಸಮಸ್ಯೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ ಟೊಮ್ಯಾಟೊ ಉತ್ಪಾದನೆಯನ್ನು ಕಡಿಮೆ ಮಾಡಿದ್ದಾರೆ. ಟೊಮ್ಯಾಟೊ ಬೆಳೆಯಲು ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತದೆ, ಆದರೆ ಸರಿಯಾದ ಬೆಲೆ ಸಿಗುವ ಭರವಸೆ ಇಲ್ಲದ ಕಾರಣ ರೈತರು ಇತರ ಬೆಳೆಗಳ ಕಡೆಗೆ ವಾಲಿದ್ದಾರೆ. ಆದಾಗ್ಯೂ, ಈಗಿನ ಬೇಡಿಕೆಯ ಏರಿಕೆಯಿಂದ ಟೊಮ್ಯಾಟೊ ಬೆಳೆದ ರೈತರಿಗೆ ಒಳ್ಳೆಯ ಲಾಭದ ಭರವಸೆ ಇದೆ.

Share:

ಮತ್ತಷ್ಟು ಸುದ್ದಿ

ಪಾಂಡವಪುರದ ಕ್ಯಾತನಹಳ್ಳಿಯಲ್ಲಿ ರಾಜ್ಯಮಟ್ಟದ ‘ಅಧಿಕ ಹಾಲು ಕರೆಯುವ ಸ್ಪರ್ಧೆ’

ಶಾಸಕ ದರ್ಶನ್ ಪುಟ್ಟಣ್ಣಯ್ಯ ಹುಟ್ಟುಹಬ್ಬ ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಜನ್ಮದಿನದ ಪ್ರಯುಕ್ತ ಮಂಡ್ಯ

ಸಾವಯವ ಉತ್ಪನ್ನಗಳ ಗ್ರಾಹಕರೇ ಬೆಂಗಳೂರಿನ ಲಾಲ್‌ ಬಾಗ್‌ ಗೆ ಬನ್ನಿ

ಜೈವಿಕ ಕೃಷಿಕ ಸೊಸೈಟಿ (ರಿ)ಯಿಂದ ಕೃಷಿ ಉತ್ಪನ್ನಗಳ ನೇರ ಮಾರುಕಟ್ಟೆ  ಬೆಂಗಳೂರು: ಜೈವಿಕ ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಜೈವಿಕ

ಮುಂದೆ ಓದಿ »

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್.ಪಾಟೀಲ್‌ ರಾಜೀನಾಮೆ

ಬೆಂಗಳೂರು: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ದಿನಾಂಕ 05.06.2026ರಂದು ರಾಜೀನಾಮೆ ಸಲ್ಲಿಸಿದ್ದೇನೆ ಎಂದು

ಮುಂದೆ ಓದಿ »

ರೈತರ ತೆಂಗಿನ ತೋಟಗಳಿಗೆ ಆಸರೆಯಾದ ಪುಟ್ಟಣ್ಣಯ್ಯ ಫೌಂಡೇಶನ್

ಬನ್ನಂಗಾಡಿ ಗ್ರಾ.ಪಂನಲ್ಲಿ ಕೀಟ ನಿರ್ವಹಣೆ ಜಾಗೃತಿ ಮತ್ತು ಪ್ರಾತ್ಯಕ್ಷಿಕೆ! ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ

ಮುಂದೆ ಓದಿ »