ಧರ್ಮಸ್ಥಳ ಷಡ್ಯಂತ್ರ ಹಿಂದೆ ಸೆಂಥಿಲ್ ಕೈವಾಡ ಎಂದು ರೆಡ್ಡಿ ಆರೋಪ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಷಡ್ಯಂತರದ ಹಿಂದೆ ತಮಿಳುನಾಡು ಕಾಂಗ್ರೆಸ್ ಸಂಸದ ಮತ್ತು ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರ ಕೈವಾಡವಿದೆ ಎಂದು ಗಾಲಿ ಜನಾರ್ಧನ ರೆಡ್ಡಿ ಆರೋಪಿಸಿದ್ದಾರೆ.
dharmasthala conspiracy senthil reddy

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಷಡ್ಯಂತರದ ಹಿಂದೆ ತಮಿಳುನಾಡು ಕಾಂಗ್ರೆಸ್ ಸಂಸದ ಮತ್ತು ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರ ಕೈವಾಡವಿದೆ ಎಂದು ಬಿಜೆಪಿ ನಾಯಕ ಗಾಲಿ ಜನಾರ್ಧನ ರೆಡ್ಡಿ ಆಗಸ್ಟ್ 18, 2025ರಂದು ಆರೋಪಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸೆಂಥಿಲ್ ಮೂಲಕ ಈ ಪ್ರಕರಣವನ್ನು ಮಾಡಿಸುತ್ತಿದ್ದಾರೆ ಎಂದು ಹೇಳಿದರು. ದೂರುದಾರನು ಮುಸುಕುಧಾರಿ ಮತ್ತು ತಮಿಳುನಾಡು ಮೂಲದವನು ಎಂದು ರೆಡ್ಡಿ ತಿಳಿಸಿದ್ದಾರೆ. ಆತನಿಗೂ ಸೆಂಥಿಲ್‌ಗೂ ನಂಟಿದೆ ಎಂದು ಆರೋಪಿಸಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿಯಿಂದ ಸತ್ಯ ಬಯಲಾಗದು, ರಾಜ್ಯ ಸರ್ಕಾರದ ಸಂಸ್ಥೆಗಳಿಂದ ನ್ಯಾಯ ಸಿಗದು ಎಂದು ಹೇಳಿದ ಅವರು, ಸಿಬಿಐ ಮತ್ತು ಎನ್‌ಐಎ ತನಿಖೆಗೆ ಒತ್ತಾಯಿಸಿದ್ದಾರೆ. ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗುತ್ತೇನೆ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಧರ್ಮಸ್ಥಳದ ಬಗ್ಗೆ ದುಷ್ಟ ಎಡಪಂಥೀಯ ಶಕ್ತಿಗಳಿಂದ ಅಪಪ್ರಚಾರ ನಡೆಯುತ್ತಿದೆ ಎಂದು ರೆಡ್ಡಿ ಆರೋಪಿಸಿದರು. ಎಡಪಂಥೀಯ ಮನೋಭಾವನೆಯ ದುಷ್ಟ ಶಕ್ತಿಗಳು ಸೇರಿಕೊಂಡಿವೆ. ಹಿಂದೂ ಪುಣ್ಯಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಹುನ್ನಾರ ನಡೆದಿದೆ. 13 ಸ್ಥಳಗಳಲ್ಲಿ ಹೆಣಗಳನ್ನು ಹೂತಿಟ್ಟಿದ್ದ ಎಂಬುದು ಬೋಗಸ್ ಆಗಿದೆ. ಸೆಂಥಿಲ್ ಕಾಂಗ್ರೆಸ್ ಹೈಕಮಾಂಡ್‌ಗೆ ರೈಟ್ ಹ್ಯಾಂಡ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ | ಅನನ್ಯಾ ಭಟ್‌ ಎಂದು ನಕಲಿ ಫೋಟೋ ತೋರಿಸಿದ ತಾಯಿ ಸುಜಾತ ?

ಧರ್ಮಸ್ಥಳದ ನೇತ್ರಾವತಿ ನದಿ ತೀರದ ಕಾಡಿನಲ್ಲಿ ಸಾಮೂಹಿಕ ಶವಗಳನ್ನು ಹೂತಿರುವ ಆರೋಪದ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಯುತ್ತಿದ್ದು, ದೂರುದಾರನು ತಪ್ಪು ಹೇಳಿಕೆ ನೀಡಲು ಒತ್ತಡಕ್ಕೊಳಗಾಗಿದ್ದನೆಂದು ಮಾಧ್ಯಮಗಳಲ್ಲಿ ವರದಿಗಳು ಬಂದಿದ್ದವು. ಆದರೆ, ಎಸ್‌ಐಟಿ ಇದನ್ನು ನಿರಾಕರಿಸಿದೆ. ಈ ಆರೋಪಗಳು ರಾಜಕೀಯವಾಗಿ ತೀವ್ರಗೊಂಡಿವೆ, ಮತ್ತು ನ್ಯಾಯಾಲಯದ ಮೂಲಕ ನ್ಯಾಯ ಕೋರಲು ರೆಡ್ಡಿ ನಿರ್ಧರಿಸಿದ್ದಾರೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »